Connect with us

    LATEST NEWS

    ಕೊಣಾಜೆ ತಿಬ್ಲಪದವು ಬಳಿ ಭೀ*ಕರ ರಸ್ತೆ ಅ*ಪಘಾತ; ಮೆಡಿಕಲ್ ಅಂಗಡಿ ಮಾಲಕ ಸಾ*ವು

    Published

    on

    ಉಳ್ಳಾಲ : ಮಂಗಳೂರು ನಗರ ಹೊರವಲಯದ ಉಳ್ಳಾಲ ನಾಟೆಕ್ಲ ಸಮೀಪದ ತಿಬ್ಲ ಪದವು ಎಂಬಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಮೆಡಿಕಲ್ ಮಾಲಕ ದಾರುಣವಾಗಿ ಸಾ*ವನ್ನಪ್ಪಿದ ಘಟನೆ ನಡೆದಿದೆ.

    ದೇರಳಕಟ್ಟೆ ನಿವಾಸಿ ಮೆಡಿಕಲ್ ಸೆಂಟರ್ ಮಾಲೀಕ ಜಲೀಲ್ ಎಂಬವರ ಪುತ್ರ ಹಾಜಿರಾ ಮೆಡಿಕಲ್ ಮಾಲೀಕ ಅವ್ಸಾಫ್ (25) ಸಾ*ವನ್ನಪ್ಪಿದವರು.

    ನಿನ್ನೆ ಮಧ್ಯಾಹ್ನ ದೇರಳಕಟ್ಟೆ ಕಡೆಯಿಂದ ತಿಬ್ಲಪದವು ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ ತಿಬ್ಲಪದವು ಸಮೀಪ ಡಿವೈಡರ್ ಸಮೀಪ ಲಾರಿಯೊಂದು ಹಠಾತ್ತನೆ ತಿರುಗಿದ ಪರಿಣಾಮ ಲಾರಿ ಹಿಂಬದಿಗೆ ಬೈಕ್ ಢಿ*ಕ್ಕಿ ಹೊಡೆದು ಅವ್ಸಾಫ್ ಸಾ*ವನ್ನಪ್ಪಿದ್ದಾರೆ.

    ಇದನ್ನೂ ಓದಿ: ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಸಾ*ವು

    ಕೆಲ ವರ್ಷಗಳ ಹಿಂದಷ್ಟೇ ಕಲಿಕೆ ಮುಗಿಸಿ ಅವ್ಸಾಫ್ ದೇರಳಕಟ್ಟೆ ಜಂಕ್ಷನ್ನಿನಲ್ಲಿ ಮೆಡಿಕಲ್ ಅಂಗಡಿಯನ್ನು ನಡೆಸುತ್ತಾ ಬಂದಿದ್ದರು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಕುರಿತ ಸಿಸಿಟಿವಿ ವೀಡಿಯೋ ಸೆರೆಯಾಗಿದೆ.

    Click to comment

    Leave a Reply

    Your email address will not be published. Required fields are marked *

    FILM

    ಶಾರುಖ್ ಪತ್ನಿ ಗೌರಿ ಮತಾಂತರ?

    Published

    on

    ಮಂಗಳೂರು/ಮುಂಬೈ : ಇತ್ತೀಚೆಗೆ ಬಾಲಿವುಡ್ ನಟ ಶಾರುಖ್ ಖಾನ್, ಪತ್ನಿ ಗೌರಿ ಖಾನ್ ಮತ್ತು ಮಗ ಆರ್ಯನ್ ಖಾನ್ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು.

    ಅದರಲ್ಲಿ ಜ. 1ರಂದು ಹೊಸ ವರ್ಷಕ್ಕೆ ಶಾರುಖ್, ಪತ್ನಿ ಗೌರಿ ಖಾನ್, ಮಗ ಆರ್ಯನ್ ಖಾನ್ ಇಸ್ಲಾಂನ ಪವಿತ್ರ ಧಾರ್ಮಿಕ ಸ್ಥಳ ಮೆಕ್ಕಾಗೆ ತೆರಳಿದ್ದಾರೆ. ಗೌರಿ ಅವರು ಇಸ್ಲಾಂಗೆ ಮತಾಂತರ ಆಗಿದ್ದಾರೆ ಎನ್ನುವಂತೆ ಫೋಟೋ ವೈರಲ್ ಆಗಿತ್ತು.

    ಆದರೆ ಬಳಿಕ ಇದು ಫೇಕ್ ಎಂದು ತಿಳಿದು ಬಂದಿದೆ. ಈ ಫೋಟೋವನ್ನು ಡೀಪ್ ಫೇಕ್ ಬಳಸಿ ಎಡಿಟ್ ಮಾಡಲಾಗಿದೆ.

    “ಡೀಪ್ ಫೇಕ್” ಜಾಲಕ್ಕೆ ಖ್ಯಾತ ಸಿನಿ ತಾರೆಯರೆ ಸಿಲುಕುತ್ತಿದ್ದಾರೆ. ರಶ್ಮಿಕಾ ಮಂದಣ್ಣ, ಕಾಜಾಲ್, ಕತ್ರಿನಾ ಕೈಫ್, ಆಲಿಯಾ ಭಟ್ ಈಗಾಗಲೇ ಇದರ ಜಾಲಕ್ಕೆ ಸಿಲುಕಿಕೊಂಡಿದ್ದಾರೆ.

    ಇದನ್ನೂ ಓದಿ: ಮೊಮ್ಮಗುವಿನ ಪಾಲನೆಗೆ ಟೆಕ್ಕಿ ಅತುಲ್ ತಾಯಿ ಮೊರೆ; ಸುಪ್ರೀಂ ನಕಾರ 

    ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೇಂದ್ರ ಸರ್ಕಾರ ಡೀಪ್ ಫೇಕ್ ಗಳನ್ನು ಸೃಷ್ಟಿಸಿ ವೈರಲ್ ಮಾಡಿದರೆ 1 ಲಕ್ಷ ರೂ. ದಂಡ ಮತ್ತು 3 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.

    ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ ಎಲ್ಲವೂ ವೈರಲ್ ಆಗುತ್ತವೆ. ರಾತ್ರಿ ಕಳೆದು ಬೆಳಕಾಗುವಷ್ಟರಲ್ಲಿ ಒಬ್ಬರ ಜೀವನವನ್ನೇ ಅಳಿಸುವಂತ ಶಕ್ತಿ ಈ ಇಂಟರ್ ನೆಟ್ ಗಿದೆ.

    Continue Reading

    LATEST NEWS

    ಮೊಮ್ಮಗುವಿನ ಪಾಲನೆಗೆ ಟೆಕ್ಕಿ ಅತುಲ್ ತಾಯಿ ಮೊರೆ; ಸುಪ್ರೀಂ ನಕಾರ

    Published

    on

    ಮಂಗಳೂರು/ನವದೆಹಲಿ : ಪತ್ನಿಯ ವಿರುದ್ದ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ 4 ವರ್ಷದ ಮಗನನ್ನು ಅತುಲ್ ತಾಯಿಯ ಸುಪರ್ದಿಗೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

    ಮೊಮ್ಮಗನನ್ನು ತಮ್ಮ ಜೊತೆಗೆ ಕಳುಹಿಸಬೇಕು ಎಂದು ಅತುಲ್ ತಾಯಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, “ಮಗುವಿಗೆ ಅರ್ಜಿದಾರರ ಪರಿಚಯವೇ ಇಲ್ಲ. ಹೀಗಾಗಿ, ಮಗುವನ್ನು ನಿಮ್ಮ ಸುಪರ್ದಿಗೆ ವಹಿಸಲು ಆಗುವುದಿಲ್ಲ. ನೀವು ಇಚ್ಛಿಸಿದರೆ ಮಗುವನ್ನು ಭೇಟಿಯಾಗಬಹುದು’ ಎಂದು ಹೇಳಿದೆ.

    ಅಲ್ಲದೆ, ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರು ಆರೋಪಿಯೇ ಹೊರತು, ಅವರ ವಿರುದ್ದದ ಆರೋಪ ಇನ್ನೂ ಸಾಬೀತಾಗಿಲ್ಲ. ಮಾಧ್ಯಮಗಳ ತೀರ್ಪನ್ನು ಆಧರಿಸಿ ನಾವು ತೀರ್ಪು ನೀಡಲು ಬರುವುದಿಲ್ಲ ಎಂದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆ ಅಂದರೆ ಜ. 20ರಂದು ಮಗುವನ್ನು ಕೋರ್ಟ್ ಗೆ ಹಾಜರುಪಡಿಸುವಂತೆ ಸೂಚಿಸಿತು.

    ಇದನ್ನೂ ಓದಿ: ತಂದೆಯನ್ನು ಸುಟ್ಟು ಹಾಕಿ ಕೊಂದ ಪುತ್ರಿಯರು! ಕಾರಣ ಏನು ಗೊತ್ತಾ?

    ಇದೇ ವೇಳೆ, 4 ವರ್ಷದ ಮಗು ಸದ್ಯಕ್ಕೆ ಹರ್ಯಾಣದ ಫರೀದಾಬಾದ್ ನ ಬೋರ್ಡಿಂಗ್ ಸ್ಕೂಲ್ ನಲ್ಲಿದೆ. ನಿಖಿತಾ ಅವರಿಗೆ ಜಾಮೀನು ಸಿಕ್ಕಿರುವ ಕಾರಣ, ಮಗುವನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ನಿಖೀತಾ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

    34 ವರ್ಷದ ಅತುಲ್ ಸುಭಾಷ್ ಡಿಸೆಂಬರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಕಿತಾ ಮತ್ತು ಅವರ ಕುಟುಂಬದ ಸದಸ್ಯರು ತನಗೆ ಮತ್ತು ತನ್ನ ಹೆತ್ತವರ ವಿರುದ್ದ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನಿಕಿತಾ, ಆಕೆಯ ತಾಯಿ ನಿಶಾ ಮತ್ತು ಆಕೆಯ ಸಹೋದರ ಅನುರಾಗ್ ಆತ್ಮಹತ್ಯೆ ಪ್ರಕರಣಕ್ಕೆ ಕುಮ್ಮಕ್ಕು ನೀಡಿರುವ ಆರೋಪ ಎದುರಿಸುತ್ತಿದ್ದು, ಬಂಧನದ ಬಳಿಕ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾರೆ.

    Continue Reading

    DAKSHINA KANNADA

    ಉಡುಪಿ: ರಸ್ತೆ ಅಪಘಾತದಲ್ಲಿ 28 ವರ್ಷದ ಯುವಕ ಮೃ*ತ್ಯು

    Published

    on

    ಉಡುಪಿ: ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಸಂಭವಿಸಿದೆ.

    ಮೃತರನ್ನು ಸಂತೋಷ್(28) ಎಂದು ಗುರುತಿಸಲಾಗಿದೆ.

    ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಂತೋಷ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸಂತೋಷ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹಿರಿಯಡ್ಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

    ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending