Connect with us

DAKSHINA KANNADA

 ಪುತ್ತೂರಿನಲ್ಲಿ ಸ್ವಂತ ಮಗನಿಂದಲೇ ತಂದೆಯ ಕೊಲೆ..!

Published

on

 ಪುತ್ತೂರಿನಲ್ಲಿ ಸ್ವಂತ ಮಗನಿಂದಲೇ ತಂದೆಯ ಕೊಲೆ..! 

ಪುತ್ತೂರು : ಸ್ವಂತ ಮಗನಿಂದಲೇ ತಂದೆಯ ಕೊಲೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯ ಎಂಬಲ್ಲಿ ಈ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಗಂಗಾಧರ ನಾಯ್ಕ್ ಎಂದು ಗುರುತ್ತಿಸಲಾಗಿದ್ದು ಆತನ ಪುತ್ರ ಶಶಿಧರ್ ಹತ್ಯೆಯ ಆರೋಪಿಯಾಗಿದ್ದಾನೆ, ಕ್ಷುಲ್ಲಕ ಕಾರಣದಿಂದ ಇಬ್ಬರ ನಡುವೆ ಹೊಡೆದಾಟವಾಗಿ ಸಾವಲ್ಲಿ ಅಂತ್ಯ ಕಂಡಿದೆ.

ಗಂಭೀರ ಗಾಯಗೊಂಡ ಗಂಗಾಧರ ನಾಯ್ಕರವರನ್ನು ಮೊದಲು ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.

ಅವರ ಪುತ್ರ ಶಶಿಧರ್ ಅವರ ತಲೆಗೆ ಸಣ್ಣ ಮಟ್ಟಿನ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಶಶಿಧರ್ ಪುತ್ತೂರು ಸಮೀಪದ ಕೃಷ್ಣನಗರ ನಿವಾಸಿ. ಈತ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು. ತಂದೆ ಮತ್ತು ಮಗನ ನಡುವಿನ ಕಲಹಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಅವರಿಬ್ಬರ ನಡುವೆ ಅಗಾಗ ಕಲಹ ನಡೆಯುತಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಿತಿವಂತರಾದ ಕಟುಂಬಕ್ಕೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ಮನೆ ಮತ್ತು ಕೆದಂಬಾಡಿಯ ಬಾಲಯದಲ್ಲಿ ಕೃಷಿ ಭೂಮಿ ಹೊಂದಿತ್ತು.

ಮಾದಕ ವಸ್ತುವಿನ ಸೇವನೆಯಿಂದ ಕೃತ್ಯ ನಡೆದಿರಬಹುದು ಎಂಬ ಶಂಕೆ ಸ್ಥಳೀಯವಾಗಿ ವ್ಯಕ್ತವಾಗಿದ್ದು ಪೊಲೀಸ್ ತನಿಖೆಯಿಂದ ಖಚಿತ ಮಾಹಿತಿ ಬಹಿರಂಗವಾಗಬೇಕಿದೆ. ಘಟನೆಯೂ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending