ಚೆನ್ನೈ: ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭ ಧರಿಸಲು ಕಾರಣವಾದ ನೀಚ ತಂದೆಯನ್ನು ಪೊಲೀಸರು ಬಂಧಿಸಿದ ಘಟನೆ ತಮಿಳುನಾಡಿನ ವೆಲ್ಲೂರ್ ಜಿಲ್ಲೆಯಲ್ಲಿ ನಡೆದಿದೆ.
8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ಬಾಲಕಿಯನ್ನು ಹೊಟ್ಟೆನೋವು ಕಾರಣಕ್ಕೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ ಗರ್ಭಿಣೆ ಆದ ಮಾಹಿತಿಯನ್ನು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಆಕೆ ಆ.2 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಘಟನೆಯ ಬಗ್ಗೆ ಅಪ್ರಾಪ್ತೆಯಲ್ಲಿ ವಿಚಾರಿಸಿದಾಗ ಕಳೆದ ಹತ್ತು ತಿಂಗಳಿಂದ ತಂದೆ ಆಕೆಯ ಮೆಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿಯೂ ಅದನ್ನು ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದನ್ನೂ ಮುಕ್ತವಾಗಿ ತನಿಖೆ ವೇಳೆ ಹೇಳಿಕೊಂಡಿದ್ದಾಳೆ.
ಬಾಲಕಿ ಹೇಳಿಕೆ ಆಧಾರದ ಮೇಲೆ ಪೊಲೀಸರು ಕಾಮುಕ ತಂದೆಯನ್ನು ಬಂಧಿಸಿ ಕೋರ್ಟ್‌ಗೆ ಹಜರುಪಡಿಸಿದ್ದರು.
ನ್ಯಾಯಾಂಗ ಆತನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿರುವುದಾಗಿ ವರದಿ ತಿಳಿಸಿದೆ.
ಈಕೆಯ ತಂದೆ ಮತ್ತು ತಾಯಿ ಅನೇಕ ವರ್ಷಗಳಿಂದ ದೂರವಾಗಿದ್ದರು. ಈಕೆ ಮತ್ತು ಈಕೆಯ ಅಣ್ಣ ತಮ್ಮ ಅಜ್ಜಿ ಮನೆಯಲ್ಲಿ ವಾಸವಾಗಿದ್ದರು.