Thursday, April 22, 2021

ಮಲಗಿದಲ್ಲೇ ತಂದೆ – ಮಗ ಸಜೀವ ದಹನ..! ಸಕ್ಕರೆ ನಾಡಿನಲ್ಲೊಂದು ಹೃದಯವಿದ್ರಾವಕ ಘಟನೆ…

ಮಂಡ್ಯ: ಮಲಗಿದಲ್ಲೇ ಬಿದ್ದ ಅಕಸ್ಮಿಕ ಬೆಂಕಿಗೆ ತಂದೆ ಮತ್ತು ಆತನ ಪುಟ್ಟ ಮಗ ಇಬ್ಬರು ಸಜೀವ ದಹನಗೊಂಡ ಹೃದಯವಿದ್ರಾವಕ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ಸಂಭವಿಸಿದೆ.

ದುರ್ಘಟನೆಯಲ್ಲಿ ಇಬ್ಬರು ಸಜೀವ ದಹನಗೊಂಡಿದ್ದರೆ, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ . ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿ ಗ್ರಾಮದಲ್ಲಿ ಈ ದುರಂತ ನಡೆದಿದೆ.ಹಾಸನ ನಿವಾಸಿ ದೀಪಕ್ (33) ಮತ್ತು ಆತನ ಮಗ ತನ್ವಿತ್ (4) ಬೆಂಕಿಗಾಹುತಿಯಾದ ನತದೃಷ್ಟರಾಗಿದ್ದಾರೆ..

ಘಟನೆಯಲ್ಲಿ ಮನೆ ಮಾಲೀಕ ಭರತ್​ಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕ್ಕಮಗಳೂರಿನ ಮೂಡಿಗೆರೆ ಮೂಲದ ಭರತ್ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದರು.

ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಈ ಬೆಂಕಿ ಅವಘಡ ಸಂಭವಿಸಿದೆ. ಅಕ್ಕಪಕ್ಕದ ಮನೆಯವರು ಬೆಂಕಿ ದುರಂತ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತ ದೀಪಕ್ ತನ್ನ ಪತ್ನಿ ಜೊತೆ ಮನಸ್ತಾಪಗೊಂಡಿದ್ದ ಹಿನ್ನೆಲೆ ಮಗನ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಆದರೆ ದುರ್ಘಟನೆಗೆ ಸ್ಪಷ್ಟ ಕಾರಣಗಳು ಇನ್ನು ಪೊಲಿಸ್ ತನಿಖೆಯಿಂದ ತಿಳಿದು ಬರಬೇಕಿದೆ. ,

ಸದ್ಯ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಅವಘಡ ಸಂಭವಿಸಿದ್ದರ ಬಗ್ಗೆ ತನಿಖೆಗೆ ಆರಂಭಿಸಿದ್ದಾರೆ,-.ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...