ಮಂಗಳೂರು/: ಸಾಮಾನ್ಯವಾಗಿ ಬೆಲೆ ಬಾಳುವ ವಸ್ತುಗಳನ್ನು ಕಳ್ಳ ಸಾಗಣೆ ಮಾಡಲಾಗುತ್ತದೆ. ಪ್ರಾಣಿಗಳ ವಿಚಾರ ನೋಡೋದಾದರೆ ಕೆಲವರು ಸಾಕು ಪ್ರಾಣಿಗಳಿಗೂ ಕನ್ನ ಹಾಕುವವರಿದ್ದಾರೆ. ಅದರ ಹೊರತಾಗಿ ಗಂಭೀರ ಪ್ರಕರಣವಾದ ಇರ್ತಲೆ ಹಾವು ಸಾಗಾಟ, ನಕ್ಷತ್ರ ಆಮೆ ಸಾಗಾಟ, ಅಂಬರ್ ಗ್ರೀಸ್ ಸಾಗಾಟ ಮಾಡಿ ತಗಲಾಕ್ಕೊಂಡವರಿದ್ದಾರೆ. ಆದರೆ, ಇಲ್ಲಿ ಮಾತ್ರ ವಿಚಿತ್ರ ಘಟನೆ ನಡೆದಿದೆ.
ತಂದೆ, ಮಗ ಸೇರಿಕೊಂಡು ಹಲವಾರು ಚಿಟ್ಟೆ ಮತ್ತು ಕೀಟಗಳನ್ನು ಹಿಡಿದು ಕಳ್ಳ ಸಾಗಾಣಿಕೆಗೆ ಯತ್ನಿಸಿದ್ದಾರೆ. ಚಿಟ್ಟೆಗಳನ್ನು ಕಳವು ಮಾಡುವಾಗ ಈ ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಅಂದಹಾಗೆ ಈ ಘಟನೆ ನಡೆದಿರೋದು ಶ್ರೀಲಂಕಾದಲ್ಲಿ. ಇಟಲಿಯಲ್ಲಿ ವೃತ್ತಿಯಲ್ಲಿ ವೈದ್ಯ ಹಾಗೂ ಮೊಡೆನಾ ಸಿಟಿಯ ಕೀಟಶಾಸ್ತ್ರ ಸಂಘದ ಸದಸ್ಯ ಲುಯಿಗಿ ಫೆರಾರಿ (68) ಮತ್ತು ಆತನ ಮಗ ಮಟ್ಟಿಯಾ ಫೆರಾರಿ (28) ಬಂಧಿತ ಆರೋಪಿಗಳು.
ಇವರ ಈ ಕೃ*ತ್ಯಕ್ಕೆ ನ್ಯಾಯಾಲಯ ಬರೋಬ್ಬರಿ $200000 ಡಾಲರ್ ಅಂದ್ರೆ ಸುಮಾರು 1.62 ಕೋಟಿ ರೂ. ದಂಡ ವಿಧಿಸಿದೆ. ನಿಗದಿತ ಸಮಯದೊಳಗೆ ದಂಡ ಪಾವತಿಸದಿದ್ದರೆ, 2 ವರ್ಷಗಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶಿಸಿದೆ.
ರಾಸಾಯನಿಕ ಬಳಸಿ ಚಿಟ್ಟೆ ಹಿಡಿಯುತ್ತಿದ್ದ ಆರೋಪಿಗಳು :
ಇಟಲಿಯಿಂದ ಶ್ರೀಲಂಕಾಗೆ ಪ್ರವಾಸ ಬಂದಿದ್ದ ತಂದೆ – ಮಗ ಅಲ್ಲಿಂದ ಚಿಟ್ಟೆಗಳನ್ನು ಕಳ್ಳಸಾಗಣಿಕೆ ಮಾಡಲು ಯತ್ನಿಸಿದ್ದಾರೆ. ಮೇಣ ಮತ್ತು ಮತ್ತಿತರ ರಾಸಾಯನಿಕಗಳನ್ನು ಬಳಸಿ ಶ್ರೀಲಂಕಾದ ರಾಷ್ಟ್ರೀಯ ಉದ್ಯಾನವನದಲ್ಲಿ ಅಕ್ರಮವಾಗಿ ಚಿಟ್ಟೆಗಳನ್ನು ಹಿಡಿಯುತ್ತಿದ್ದರು. ಈ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಇವರನ್ನು ಪೊಲೀಸರು ತಕ್ಷಣ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಇವರ ಬಳಿ ಪತ್ತೆಯಾದ ಸಾವಿರಾರು ಅಪರೂಪದ ಕೀಟಗಳು ಮತ್ತು 92 ಬಗೆಯ ಅಪರೂಪದ ಜಾತಿಯ ಚಿಟ್ಟೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಹಲವು ಅಪರೂಪದ ಜಾತಿಯ ಕೀಟಗಳು ಸಾ*ವನ್ನಪ್ಪಿವೆ. ವನ್ಯಜೀವಿ ಕಾಯ್ದೆಯಡಿ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ತಂದೆ ಮಗನ ವಿರುದ್ಧ ಎಫ್.ಐ.ಆರ್ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು/ಪೇಶಾವರ : ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ(ನ.9) ಬಾಂ*ಬ್ ದಾ*ಳಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 20 ಜನರು ಸಾ*ವನ್ನಪ್ಪಿದ್ದು, 30 ಕ್ಕೂ ಅಧಿಕ ಮಂದಿ ಗಾ*ಯಗೊಂಡಿದ್ದಾರೆ.
ರೈಲು ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕ್ಕಿಂಗ್ ಕಚೇರಿಯಲ್ಲಿ ಸ್ಫೋ*ಟ ಸಂಭವಿಸಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಜಾಫರ್ ಎಕ್ಸ್‌ಪ್ರೆಸ್ ಬೆಳಗ್ಗೆ 9 ಗಂಟೆಗೆ ಪೇಶಾವರಕ್ಕೆ ಹೊರಡಬೇಕಿತ್ತು. ಆದರೆ, ಆಗಮನ ತಡವಾಗಿತ್ತು. ಸ್ಫೋ*ಟ ಸಂಭವಿಸಿದಾಗ ರೈಲು ಇನ್ನೂ ಪ್ಲಾಟ್‌ಫಾರ್ಮ್‌ಗೆ ಬಂದಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಮಂಗಳೂರು/ರಿಯಾದ್ : ಸೌದಿ ಅರೇಬಿಯಾ ಮರಳುಗಾಡನ್ನು ಹೊಂದಿರುವ ಪ್ರದೇಶ. ಸುಡುವ ಬಿಸಿಲಿರುವ ಮರುಭೂಮಿಯಲ್ಲಿ ಹಿಮಪಾತವಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಸೌದಿ ಅರೇಬಿಯಾದ ಹಲವು ಭಾಗಗಳಲ್ಲಿ ಹಿಮಪಾತವಾಗಿದೆ. ಮರಳು ಗುಡ್ಡಗಳ ಮೇಲೆ ಹಿಮಗಳ ರಾಶಿ ಕಾಣಿಸುತ್ತಿದೆ. ಅಲ್ -ಜಾವ್ನ್ ಪ್ರಾಂತ್ಯದ ಉತ್ತರ ಗಡಿಪ್ರದೇಶಗಳಾದ ರಿಯಾದ್, ಮೆಕ್ಕಾ, ಆರ್ಸಿ, ತಬೂಕ್ ಮತ್ತು ಅಲ್ ಬಹಾಹ್ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಮತ್ತು ಹಿಮ ಬೀಳುತ್ತಿದೆ.
ಮರುಭೂಮಿಯಲ್ಲಿ ಹಿಮ ಮತ್ತು ಮಳೆಯಾಗುತ್ತಿರುವುದು ಅಚ್ಚರಿ ಉಂಟು ಮಾಡಿದ್ದು, ಇದರ ವೀಡಿಯೊ, ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಹಿಮ ಬೀಳಲು ಕಾರಣವೇನು?
ಅರಬ್ಬಿ ಸಮುದ್ರದಲ್ಲಿ ಉಂಟಾದ ಕಡಿಮೆ ಒತ್ತಡದ ಪರಿಣಾಮ ಒಮಾನ್‌ಗೂ ಅವರಿಸಿದೆ. ಇದರಿಂದಾಗಿ ಶುಷ್ಕತೆಯಿಂದ ಇರುವ ಪ್ರದೇಶದಲ್ಲಿ ತೇವಾಂಶದಿಂದ ಕೂಡಿರುವ ಗಾಳಿ ಬೀಸುತ್ತಿದೆ. ಹೀಗಾಗಿ ಸೌದಿ ಅರೇಬಿಯಾ ಮತ್ತು ನೆರೆಯ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಯಾದ್ಯಂತ ಗುಡುಗು, ಆಲಿಕಲ್ಲು ಮಳೆ, ಹಿಮ ಬೀಳಲು ಕಾರಣವಾಗಿದೆ ಎಂದು ಯುಎಇಯ ರಾಷ್ಟ್ರೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರತಿಕೂಲ ಹವಾಮಾನ ಇರುವ ಕಾರಣ ಅಲ್-ಜಾವ್‌ನಾದ್ಯಂತ ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ, ತೀವ್ರ ಗಾಳಿ ಬೀಸಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ ಎಂದು ವರದಿಯಾಗಿದೆ.
ಅಪರೂಪದ ವಿದ್ಯಮಾನ :
ಮರುಭೂಮಿಯಲ್ಲಿ ಹಿಮ ಬೀಳುವುದು ತೀರಾ ಅಪರೂಪದ ವಿದ್ಯಮಾನವಾಗಿದೆ. ಆದರೆ ಹಿಮ ಬೀಳುವುದೇ ಇಲ್ಲ ಎನ್ನುವಂತಿಲ್ಲ ಎಂಬುದು ತಜ್ಞರ ಮಾಹಿತಿ.
ಕೆಲವು ವರ್ಷಗಳ ಹಿಂದೆ ಸಹರಾ ಮರುಭೂಮಿ ಪ್ರದೇಶದ ಪಟ್ಟಣದಲ್ಲಿ ತಾಪಮಾನ 58 ಡಿಗ್ರಿಗೆ ಏರಿಕೆಯಾಗಿತ್ತು. ಆದರೆ ಏಕಾಏಕಿ ಆದ ಹಿಮಪಾತದಿಂದ ತಾಪಮಾನ ಇಳಿಕೆಯಾಗಿ ಮೈನಸ್ 2 ಡಿಗ್ರಿಗೆ ತಲುಪಿತ್ತು. ಹವಾಮಾನ ಬದಲಾವಣೆಯ ಕಾರಣದಿಂದಾಗಿ ಈ ರೀತಿ ವಿದ್ಯಮಾನವು ಸಂಭವಿಸುತ್ತದೆ. ಹವಾಮಾನ ವೈಪರೀತ್ಯಗಳ ಪರಿಣಾಮಗಳಿಗೆ ಪಶ್ಚಿಮ ಏಷ್ಯಾವು ಹೆಚ್ಚು ಒಳಗಾಗುತ್ತವೆ.
ಜಾಗತಿಕ ಹವಾಮಾನ ಬದಲಾವಣೆಯಿಂದಾಗಿ ವಾತಾವರಣದ ಪರಿಸ್ಥಿತಿಗಳಲ್ಲೂ ಬದಲಾವಣೆಯಾಗುತ್ತವೆ. ಆದ್ದರಿಂದ ಮರುಭೂಮಿಗಳಲ್ಲಿ ಹಿಮಪಾತ ಸೇರಿದಂತೆ ಇಂತಹ ಅಸಾಮಾನ್ಯ ಹವಾಮಾನ ಘಟನೆಗಳು ಆಗಾಗ ಆಗುತ್ತವೆ ಎಂಬುದು ತಜ್ಞರ ಉವಾಚ.
ಮಂಗಳೂರು/ಟೆಕ್ಸಾಸ್ : ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿರುವ ಘಟನೆ ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದಿದೆ. ಮಹಿಳೆ ತನ್ನ ಮಗುವಿನ ಫೋಟೋವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡು ಮಾರಾಟಕ್ಕೆ ಮುಂದಾಗಿದ್ದಳು. ಈ ವಿಚಾರ ತಿಳಿದ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
ಹಣಕ್ಕಾಗಿ ಕೃ*ತ್ಯ :
ಜುನಿಪರ್ ಬ್ರೈಸನ್(21) ಕೃತ್ಯ ಎಸಗಿದ ಮಹಿಳೆ. ಆಕೆ ಮಗುವಿನ ಫೋಟೋವನ್ನು ಫೇಸ್‌ಬುಕ್ ನ ಮಗು ದತ್ತು ಪಡೆಯಲು ಬಯಸುವ ದಂಪತಿ ಗುಂಪಿನಲ್ಲಿ ಹಂಚಿಕೊಂಡಿದ್ದಾಳೆ. ಪ್ರಾರಂಭದಲ್ಲಿ ಯಾವುದೇ ಹಣಕ್ಕೆ ಬೇಡಿಕೆ ಇಡದ ಈ ಮಹಿಳೆ ಬಳಿಕ ಸಾಕಷ್ಟು ದಂಪತಿ ದತ್ತು ಪಡೆಯಲು ಮುಂದೆ ಬಂದಾಗ ಹಣದ ಬೇಡಿಕೆ ಇಟ್ಟಿದ್ದಾಳೆ. ಹಣಕಾಸಿನ ತೊಂದರೆಗಳಿಂದ ನಾನು ನನ್ನ ಮಗುವನ್ನು ಮಾರಾಟ ಮಾಡಲು ಮುಂದಾಗಿರುವುದಾಗಿ ಜುನಿಪರ್ ಹೇಳಿಕೊಂಡಿದ್ದಾಳೆ. 150 ಡಾಲರ್ ಅಂದರೆ ಸುಮಾರು 12 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದಳು ಎಂದು ತಿಳಿದು ಬಂದಿದೆ.