Thursday, September 29, 2022

ಫಾಝಿಲ್ ಕೊಲೆ ಪ್ರಕರಣ: ಆರೋಪಿ ಹರ್ಷಿತ್‌ಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ನಗರ ಹೊರವಲಯದ ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್‌ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.


ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ ಕೊಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪವಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್ ಪೊಲೀಸರು ಆರೋಪಿಯನ್ನು ಆಗಸ್ಟ್ 17ರಂದು ಬಂಧಿಸಿದ್ದರು. ಪೊಲೀಸರು ಗುರುವಾರ ಆರೋಪಿ ಹರ್ಷಿತನನ್ನು ಎರಡನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಈಗಾಗಲೇ ಪ್ರಕರಣದಲ್ಲಿ ಹಲವು ಮಂದಿಯನ್ನು ಬಂಧಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡುವ ಭಜರಂಗದಳ ಮಾಡುತ್ತಿರುವುದು ಸರಿಯೇ..?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ...? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.ಕೇಂದ್ರ ಗೃಹ...

ಬ್ರೇಕಿಂಗ್ ನ್ಯೂಸ್: PFI ಸಂಘಟನೆ ಇನ್ನು 5ವರ್ಷ ಬ್ಯಾನ್-ಕೇಂದ್ರದ ಮಹತ್ವದ ಆದೇಶ

ನವದೆಹಲಿ: ಇಂದಿನಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು ಪಿಎಫ್‌ಐ ಸಂಘಟನೆ ಮತ್ತು ಅದರ ಅಂಗಸಂಸ್ಥೆಗಳನ್ನು ಮುಂದಿನ 5 ವರ್ಷಗಳ ಕಾಲ ನಿಷೇಧ ಮಾಡಿ ಮಹತ್ವದ ಆದೇಶ ಹೊರಡಿಸಿದೆ.ಈ ಸಂಘಟನೆಗಳು ಕಾನೂನುಬಾಹಿರ ಎಂದು ತಕ್ಷಣದಿಂದಲೇ...

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...