Tuesday, July 5, 2022

ಮದುವೆ ನಂತರ  ಗೆಳೆತನ ಕಳೆದುಕೊಳ್ಳುವ  ಭೀತಿ! ಯುವತಿಯರು ಆತ್ಮಹತ್ಯೆಗೆ ಶರಣು..!

ಮದುವೆ ನಂತರ  ಗೆಳೆತನ ಕಳೆದುಕೊಳ್ಳುವ  ಭೀತಿ! ಯುವತಿಯರು ಆತ್ಮಹತ್ಯೆಗೆ ಶರಣು..!    

ಕೊಟ್ಟಾಯಂ: ಒಬ್ಬರನ್ನೊಬ್ಬರು  ಕಳೆದುಕೊಳ್ಳುವ ಭಯದಲ್ಲಿ ಯುವತಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ.

21 ವರ್ಷದ ಆರ್ಯ ಅಶೋಕ್​  ಮತ್ತು  ಅಮೃತಾ ಅನಿಲ್​ ಮೃತ ಯುವತಿಯರಾಗಿದ್ದಾರೆ. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುತ್ತಿದ್ದು. ಕಳೆದ ಶನಿವಾರ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು.

ಹೆತ್ತವರ ದೂರಿನ ಮೇರೆಗೆ ಸಾಕಷ್ಟು ಹುಡುಕಾಟ ನಡೆಸಿದ ಬಳಿಕ ಇಬ್ಬರ ಮೃತದೇಹ ಕೊಟ್ಟಾಯಂನಲ್ಲಿರುವ ನದಿಯಲ್ಲಿ ಪತ್ತೆಯಾಗಿದೆ. ಇಬ್ಬರ ಸಾವಿಗೆ ನಿಖರ ಕಾರಣ  ತಿಳಿದುಬಂದಿಲ್ಲ.

ಆದರೆ, ಪ್ರಾಥಮಿಕ ತನಿಖೆಯ ಪ್ರಕಾರ ಇಬ್ಬರಲ್ಲಿ ಒಬ್ಬಳಿಗೆ ಮದುವೆ ನಿಶ್ಚಯ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಅಮೃತಾ ಮನೆಯಲ್ಲಿ ಮದುವೆ ನಿಶ್ಚಯ ಮಾಡಿದ್ದರಂತೆ.

ಮದುವೆಯ ನಂತರ ಇಬ್ಬರು ಬೇರೆ ಬೇರೆಯಾಗುವ  ಭಯದಲ್ಲಿ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಆತ್ಮೀಯ ಗೆಳತಿಯರಾಗಿದ್ದ ಇಬ್ಬರು ಮದುವೆ ನಂತರ ಒಬ್ಬರನ್ನೊಬ್ಬರು ಕಳೆದುಕೊಳ್ಳುತ್ತೇವೆ ಎಂಬ ಭಯದಲ್ಲಿ ಹೀಗೆ ಮಾಡಿಕೊಂಡಿರಬಹುದೆಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಆದರೆ, ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಕೊಟ್ಟಾಯಂನ ವೈಕುಂ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ತನಿಖೆ ನಡೆಯುತ್ತಿದೆ.

 

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಯುವಕನನ್ನು ಇರಿದು ಮುಗಿಸಿದ ಸ್ನೇಹಿತರು…

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಕೊಲೆ ನಡೆಸಿದ ಘಟನೆ ನಿನ್ನೆ ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ನಡೆದಿದೆ.ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ.ಆತನ ಸ್ನೇಹಿತ...

ಮಂಗಳೂರು: ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ನಡೆದಿದೆ.ಭಾರೀ ಮಳೆ ಹಿನ್ನಲೆ ವರ್ಕ್ ಶಾಪ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...