Connect with us

    LATEST NEWS

    ಮಂಗಳೂರು: ಪ್ರೆಸ್‌ಕ್ಲಬ್‌ನಲ್ಲಿ ಪತ್ರಕರ್ತರಿಗೆ ಸನ್ಮಾನ

    Published

    on

    ಮಂಗಳೂರು: ಪತ್ರಿಕಾರಂಗವು ಸಾಮಾಜಿಕ ಪರಿವರ್ತನೆಯ ಅಸ್ತ್ರವಾಗಿದೆ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಾಧ್ಯಮ ಕ್ಷೇತ್ರದ ಜವಾಬ್ದಾರಿ ಮಹತ್ತರವಾದುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.


    ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಪ್ರಶಸ್ತಿ ಪಡೆದ, ಡಾಕ್ಟರೇಟ್ ಪದವಿ ಗಳಿಸಿದ, ವರ್ಗಾವಣೆಗೊಂಡ, ನಿವೃತ್ತಿ ಹೊಂದಿದ ಪತ್ರಕರ್ತರನ್ನು ಸನ್ಮಾನಿಸಿ ಅವರು ಮಾತನಾಡಿದರು.

    ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳ ಬಗ್ಗೆ ನನಗೆ ಪ್ರೀತಿ, ಗೌರವ ಇದೆ. ಏಕೆಂದರೆ, ಪತ್ರಿಕಾ ಪ್ರತಿನಿಧಿಗಳು ಸಾಮಾಜಿಕ ಕಳಕಳಿಯಿಂದ ಪ್ರತಿ ಬಾರಿ ನಮ್ಮಿಂದ ಮಾಹಿತಿ ಪಡೆದು ಸುದ್ದಿ ಪ್ರಕಟಿಸುತ್ತಾರೆ.

    ವಿಚಾರ ಮಂಥನ, ಕಾರ್ಯಾಂಗ ಸರಿದಾರಿಯಲ್ಲಿ ನಡೆಯಲು ಮಾಧ್ಯಮ ರಂಗ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಮೌಲ್ಯ ಇರುವ ಪತ್ರಕರ್ತರಿದ್ದಾರೆ. ಪತ್ರಕರ್ತರ ಸಂಘದಿಂದ ಸಾಧಕ ಪತ್ರಕರ್ತರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ ಎಂದರು.
    ರಾಜ್ಯ ಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪಡೆದ ಹೊಸದಿಗಂತ ಪತ್ರಿಕೆಯ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ, ಕಾಸರಗೋಡು ಪತ್ರಕರ್ತರ ಸಂಘದಿಂದ ಮೊಗರೋಡಿ ಗೋಪಾಲಕೃಷ್ಣ ಮೇಲಾಂಟ ದತ್ತಿಪ್ರಶಸ್ತಿ ಪಡೆದ ವಿಜಯಕರ್ನಾಟಕ ಪತ್ರಿಕೆಯ ಮುಹಮ್ಮದ್ ಆರೀಫ್ ಪಡುಬಿದ್ರಿ,

    ಡಾಕ್ಟರೇಟ್ ಪದವಿ ಪಡೆದ ಪ್ರಜಾವಾಣಿ ಪತ್ರಿಕೆಯ ಸತೀಶ್ ಕೊಣಾಜೆ, ನಿರಂತರ ಪತ್ರಿಕೆಯ ಚಂದ್ರಹಾಸ ಚಾರ್ಮಾಡಿ, ಉದಯವಾಣಿ ಪತ್ರಿಕೆಯಿಂದ ನಿವೃತ್ತಿ ಹೊಂದಿದ ಹಿಲರಿ ಕ್ರಾಸ್ತಾ,

    ಹೊಸದಿಗಂತ ಪತ್ರಿಕೆಯ ಛಾಯಗ್ರಾಹಕ ಹುದ್ದೆಯಿಂದ ಸ್ವಯಂ ನಿವೃತ್ತಿ ಪಡೆದ ಸುಭಾಶ್ ಸಿದ್ದಮೂಲೆ, ವಿಜಯವಾಣಿ ಪತ್ರಿಕೆ ಸುಷ್ಮಿತಾ ಕೋಟ್ಯಾನ್, ವರ್ಗಾವಣೆಗೊಂಡ ಪ್ರಜಾವಾಣಿಯ ಮಹೇಶ್ ಕನ್ನೇಶ್ವರ ಅವರನ್ನು ಸನ್ಮಾನಿಸಲಾಯಿತು.

    ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಅತಿಥಿಯಾಗಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು.

    ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಸನ್ಮಾನಿತರ ವಿವರ ನೀಡಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    Trending