Connect with us

MANGALORE

ಯಕ್ಷಗುರು ರಾಕೇಶ್ ರೈ ಅಡ್ಕ ಅವರಿಗೆ ಕದ್ರಿ ಯಕ್ಷ ಬಳಗ ಸಂಮಾನ

Published

on

ಮಂಗಳೂರು: ಶ್ರೀ ಪಾವಂಜೆ ಮೇಳದ ಯಕ್ಷಗುರು ರಾಕೇಶ್ ರೈ ಅಡ್ಕ ಅವರಿಗೆ ಕದ್ರಿ ಯಕ್ಷ ಬಳಗದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ತೆಂಕುತಿಟ್ಟಿನ ತುಳು ಕನ್ನಡ ಪ್ರಸಂಗಗಳಲ್ಲಿ ಕುಣಿತ, ಮಾತು, ಅಭಿನಯಗಳಿಂದ ಜನಪ್ರಿಯತೆ ಗಳಿಸಿರುವ ರಾಕೇಶ್ ರೈ ಅವರು ದಿ.ಜಲಂಧರ ರೈ ಅವರ ಶಿಷ್ಯರಾಗಿದ್ದು, ಹತ್ತಾರು ಕಡೆಗಳಲ್ಲಿ ಯಕ್ಷಗಾನ ತರಬೇತಿ ಕೇಂದ್ರಗಳಲ್ಲಿ ನಿರ್ದೇಶಕನಾಗಿ ಸಾವಿರಕ್ಕೂ ಹೆಚ್ಚಿನ ಯಕ್ಷ ಪ್ರೇಮಿಗಳಿಗೆ ಯಕ್ಷಗಾನ ನೃತ್ಯವನ್ನು ಕಲಿಸಿದ ಕಲಾಗುರು ಆಗಿದ್ದಾರೆ.


ಅಭಿನಂದನಾ ಭಾಷಣ ಮಾಡಿದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಅವರು ” ರಾಕೇಶ್ ರೈ ಅವರು ಕಲಾಗುರು, ಪರಂಪರೆಯ ಒಡ್ಡೋಲಗಗಳ ಪ್ರಯೋಗಶೀಲ ಕಲಾವಿದ. ಪಟ್ಲರೊಂದಿಗಿನ ಅಡ್ಕದವರ ಒಡನಾಟ ಯಕ್ಷಗಾನ ಕಲಾ ಪ್ರಸಾರಕ್ಕೆ ಪೂರಕ” ಎಂದು ಶುಭ ಹಾರೈಸಿದರು.
ಯಕ್ಷ ಬಳಗ ಕದ್ರಿಯ ಯಕ್ಷಗಾನಾಭಿಮಾನಿ ಸದಸ್ಯರ ಕಲಾಪ್ರೇಮವನ್ನು ಪಟ್ಲ ಸತೀಶ ಶೆಟ್ಟಿ ಯವರು ಶ್ಲಾಘಿಸಿದರು.

ವಿದ್ವಾಂಸ ಡಾ.ಎಂ.ಪ್ರಭಾಕರ ಜೋಷಿ, ಉದ್ಯಮಿ ರತ್ನಾಕರ ಜೈನ್, ಕಾರ್ಪೋರೇಟರ್ ಮನೋಹರ ಕದ್ರಿ, ಶಕೀಲ ಕಾವ, ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಕರ್ಕೇರ, ಗೋಕುಲ್ ಕದ್ರಿ, ಕದ್ರಿ ದೇವಸ್ಥಾನದ ಟ್ರಸ್ಟಿ ನಿವೇದಿತಾ ಶೆಟ್ಟಿ, ಸುಧಾಕರ ರಾವ್ ಪೇಜಾವರ, ಬೆಟ್ಟಂಪ್ಪಾಡಿ ಸುಂದರ ಶೆಟ್ಟಿ , ಮುಲ್ಕಿ ಕರುಣಾಕರ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ,

ಕೃಷ್ಣ ಶೆಟ್ಟಿ ತಾರೆಮಾರ್ ಮೊದಲಾದವರು ಉಪಸ್ಥಿತರಿದ್ದರು. ಕದ್ರಿ ಯಕ್ಷ ಬಳಗದ ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು.
ಪ್ರದೀಪ್ ಆಳ್ವ ಕದ್ರಿ ಸ್ವಾಗತಿಸಿ, ತಾರಾನಾಥ ಶೆಟ್ಟಿ ಬೋಳಾರ ಧನ್ಯವಾದ ಸಮರ್ಪಿಸಿದರು‌. ನಂತರ ಗಣೇಶ ಕೊಲಕಾಡಿ ವಿರಚಿತ “ರಾಜಾ ಕಾಕತೀಯ” ಪ್ರಸಂಗದ ಪ್ರಥಮ ಪ್ರದರ್ಶನ ಯಶಸ್ವಿಯಾಗಿ ನಡೆಯಿತು.

DAKSHINA KANNADA

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ….ಅವರ ಆಸ್ತಿ ವಿವರ ಇಲ್ಲಿದೆ!

Published

on

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ. ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ. ಆಗಿದೆ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ., ಇನ್ನು ಒಟ್ಟು 9,62,010 ರೂ. ಅನ್ನು ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.
ಇನ್ನು ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್​ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ. ಅವರು, ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.

ಬ್ರಿಜೇಶ್‌ ಚೌಟ ಯಾರು?

ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.

ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಇದನ್ನೂ ಓದಿ ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!

ನಳಿನ್ ಬದಲು ಚೌಟ ಕಣಕ್ಕೆ :

ಕಳೆದ 15 ವರ್ಷಗಳ ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಹಿಡಿತದಲ್ಲಿದೆ. ಸತತ ಮೂರು ಬಾರಿ ನಳಿನ್ ಕುಮಾರ್ ಕಟೀಲ್ ಅವರು ಗೆದ್ದುಕೊಂಡು ಬಂದಿದ್ದರು. ಈ ಬಾರಿ ಮಾಜಿ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಆ ಮೂಲಕ ನಳಿನ್ ಕುಮಾರ್ ಕಟೀಲ್​ಗೆ ಟಿಕೆಟ್​ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 4 ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಸಲ್ಲಿಸಿರುವ ನಾಮಪತ್ರ ಅಫಿಡವಿಟ್‌ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.

Continue Reading

LATEST NEWS

ಕನ್ಯಾನ ಸದಾಶಿವ ಶೆಟ್ಟಿಗೆ ಮಾತೃ ವಿಯೋಗ

Published

on

ಬೆಳ್ತಂಗಡಿ : ಕೊಡುಗೈ ದಾನಿ ಕನ್ಯಾನ ಸದಾಶಿವ ಶೆಟ್ಟಿ ಅವರ ತಾಯಿ, ಕನ್ಯಾನ ದಿವಂಗತ ಪಕೀರ ಶೆಟ್ಟಿ ಅವರ ಪತ್ನಿ ಲೀಲಾವತಿ ಶೆಟ್ಟಿ ನಿಧ*ನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಅವರು ಮಕ್ಕಳಾದ ಕನ್ಯಾನ ಸದಾಶಿವ ಶೆಟ್ಟಿ, ಚಂದ್ರಹಾಸ ಶೆಟ್ಟಿ, ರಘುರಾಮ ಶೆಟ್ಟಿ, ರವೀಂದ್ರ ಶೆಟ್ಟಿ, ವಿಜಯಲಕ್ಷ್ಮೀ ಶೆಟ್ಟಿ, ದಿವಾಕರ ಶೆಟ್ಟಿ, ನಿತ್ಯಾನಂದ ಶೆಟ್ಟಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಗಣ್ಯರ ಸಂತಾಪ :

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಶಶಿಧರ್ ಶೆಟ್ಟಿ, ಯಕ್ಷಧ್ರುವ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Continue Reading

LATEST NEWS

ಹಳೆಯಂಗಡಿ : ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ

Published

on

ಹಳೆಯಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಕೇಂದ್ರ ಮಹಿಳಾ ಘಟಕ ಇದರ ಸಪ್ತಮ ವಾರ್ಷಿಕೋತ್ಸವ ಹಳೆಯಂಗಡಿ ಸಮೀಪದ ಶ್ರೀ ಪಾವಂಜೆ ಕ್ಷೇತ್ರದಲ್ಲಿ ನಡೆಯಿತು.

ಸಮಾರಂಭದಲ್ಲಿ ಶ್ರೀಕುಮಾರ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ಹಳುವಳ್ಳಿ ಇದರ ನಿರ್ದೇಶಕಿ ಜ್ಯೋತಿ ಟಿ ಎನ್ ಕಳಸ, ಧೀಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಇದರ ನಿರ್ದೇಶಕಿ ಪದ್ಮಾ ಕೆ ಆರ್ ಆಚಾರ್ಯ ಪುತ್ತೂರು, ಯಕ್ಷಗಾನ ತಾಳಮದ್ದಲೆ ಕಲಾವಿದೆ ರೇವತಿ ನವೀನ್ ಕುಳಾಯಿ ಇವರನ್ನು ಸನ್ಮಾನಿಸಲಾಯಿತು.

ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನ್ಯಾಯವಾದಿ ನಾರಾಯಣ ಪಾಟಾಳಿ, ಕಲಾ ಪೋಷಕರಾದ ಶಕುಂತಳಾ ರಮಾನಂದ ಭಟ್, ಸಂಧ್ಯಾ ಜಯದೇವ ಐತಾಳ್, ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಜೆಸಿಐ ಸುರತ್ಕಲ್ ಘಟಕದ ಅಧ್ಯೆಕ್ಷೆ ಜ್ಯೋತಿ ಪ್ರವೀಣ್ ಶೆಟ್ಟಿ,ಪಟ್ಲ ಪೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು.

ಮಹಿಳಾ ಕೇಂದ್ರೀಯ ಘಟಕದ ಅಧ್ಯೆಕ್ಷೆ ಪೂರ್ಣಿಮಾ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯಕ್ಷೆ ಆರತಿ ಆಳ್ವ ವಂದಿಸಿದರು. ಸಾಯಿಸುಮ ನಾವಡ ಕಾರ್ಯಕ್ರಮ‌ ನಿರ್ವಹಿಸಿದರು. ಬಳಿಕ ಪಾವಂಜೆ ಮೇಳದಿಂದ ಧರ್ಮಸಿಂಹಾಸನ ಯಕ್ಷಗಾನ ಪ್ರದರ್ಶನಗೊಂಡಿತು.

 

Continue Reading

LATEST NEWS

Trending