Home ಪ್ರಮುಖ ಸುದ್ದಿ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಶಕ್ತಿ ಫೆಸ್ಟ್‌ : ಮೊದಲ ದಿನವೇ 250 ಕ್ಕೂ ಹೆಚ್ಚು...

ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಶಕ್ತಿ ಫೆಸ್ಟ್‌ : ಮೊದಲ ದಿನವೇ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಶಕ್ತಿ ಫೆಸ್ಟ್‌ : ಮೊದಲ ದಿನವೇ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ

ಮಂಗಳೂರು : ಮಂಗಳೂರಿನ ಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶಕ್ತಿನಗರದ ಶಕ್ತಿ ವಸತಿ ಶಾಲೆ ಶಕ್ತಿ ಫೆಸ್ಟನ್ನು ಆಯೋಜಿಸಿದೆ. ಎರಡು ದಿನಗಳ ನಡೆಯುವ ಈ ಶಕ್ತಿ ಫೆಸ್ಟನ್ನು ಖ್ಯಾತ ಭರತ ನಾಟ್ಯ ಕಲಾವಿದೆ ವಾಣಿ ರಾಜಗೋಪಲ್‌ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿಗಳು ತಮ್ಮ ಕಲಿಕೆಯೊಂದಿಗೆ ಲಲಿತ ಕಲೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡರೆ ಮಾನಸಿಕ ನೆಮ್ಮದಿ ತಮ್ಮದಾಗುವುದು, ಜೀವನ ಎಂದರೆ ವೃತ್ತಿ ಮತ್ತು ಹಣ ಮಾತ್ರವಲ್ಲ ನಮ್ಮ ನಮ್ಮ ಆಸಕ್ತಿಗನುಗುಣವಾಗಿ ಉತ್ತಮ ಹವ್ಯಾಸಗಳನ್ನು, ಪ್ರವೃತ್ತಿಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆಯಿತ್ತರು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡ ಕುಲಶೇಖರ ಸೇಕ್ರೆಡ್ ಹಾರ್ಟ್ ಹೈಸ್ಕೂಲಿನ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯಾ ಎಸ್.ಎಲ್. ಡಿಸೋಜಾ ಮಾತನಾಡಿ ಶಕ್ತಿ ಫೆಸ್ಟ್‌ನಂತಹ ಕಾರ್ಯಕ್ರಮಗಳಿಂದಾಗಿ ಮಕ್ಕಳ ಸುಪ್ತ ಪ್ರತಿಭೆ ಹೊರಹೊಮ್ಮಲು ಸಾಧ್ಯ, ಮಕ್ಕಳ ಪೋಷಕರು, ಶಿಕ್ಷಕರು ಹಾಗೂ ಶಾಲಾಡಳಿತ ಮಂಡಳಿಯ ಸದಸ್ಯರು ವಿದ್ಯಾರ್ಥಿಗಳಿಗೆ ಅವಕಾಶಗಳನ್ನು ಒದಗಿಸಿ ಕೊಡಬೇಕು ಎಂದರು.

ಸಮಾರಂಭದಲ್ಲಿ ಕಿತ್ತಳೆ ಮಾರಾಟ ಮಾಡಿ ಶಾಲೆ ಕಟ್ಟಿದ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬನವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗೌರವ ಸ್ವೀಕರಿಸಿ ಮಾತನಾಡಿದ ಹಾಜಬ್ಬ ತಾನು ಯಾವುದೇ ಪ್ರಶಸ್ತಿ, ಪುರಸ್ಕಾರಗಳ ಬೆನ್ನತ್ತಿ ಹೋದವನಲ್ಲ. ಚಿಕ್ಕಂದಿನಿಂದಲೇ ಶಿಕ್ಷಣದಿಂದ ವಂಚಿತನಾದ ತಾನು ತನ್ನ ಊರಿನ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಮಹತ್ವಾಕಾಂಕ್ಷೆ ಇಟ್ಟುಕೊಂಡಿದ್ದೆ. ಕಿತ್ತಳೆ ಮಾರಿ ಬಂದ ಹಣದಿಂದ ಶಾಲೆಯನ್ನು ತೆರೆದು, ಕೃತಾರ್ಥನಾಗಿದ್ದೇನೆ. ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಬರುವ ಕನಸ್ಸನ್ನು ನಾನು ಎಂದೂ ಕಂಡವನಲ್ಲ. ಊರ-ಪರವೂರ ಜನರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದು ನಮ್ರವಾಗಿ ನುಡಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಸಿ. ನಾಯಕ್‌ ಮಾತನಾಡಿ ಓರ್ವ ಜನ ಸಾಮಾನ್ಯ ವ್ಯಕ್ತಿ ತನ್ನ ತ್ಯಾಗ ಹಾಗೂ ಸೇವಾ ಮನೋಭಾವನೆಯಿಂದ ಉನ್ನತ ಮಟ್ಟಕ್ಕೆ ಹೇಗೆ ಏರಬಹುದು ಎಂಬುದಕ್ಕೆ ಹರೇಕಳ ಹಾಜಬ್ಬ ಅತ್ಯುತ್ತಮ ಉದಾಹರಣೆಯಾಗಿದ್ದಾರೆ ಎಂದರು.

ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ,ಶಾಲಾ ಪ್ರಾಂಶುಪಾಲೆ ವಿದ್ಯಾ ಕಾಮತ್,ಶಕ್ತಿ ಎಜ್ಯುಕೇಶನ್ ಟ್ರಸ್ಟಿನ ಪ್ರಧಾನ ಸಲಹೆಗಾರ ರಮೇಶ ಕೆ, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪಿ.ಯು ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್, ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ಮೊದಲ ದಿನದ ಶಕ್ತಿ ಫೆಸ್ಟ್ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಜಿಲ್ಲೆಯ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಡಿಯೋಗಾಗಿ…

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...