Connect with us

    LATEST NEWS

    ಪದ್ಮಶ್ರೀ ಮಹಾಲಿಂಗ ನಾಯ್ಕ ಅವರಿಗೆ ನಾಳೆ ಸನ್ಮಾನ

    Published

    on

    ಮಂಗಳೂರು: ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕತಕ್ಕೆ ಭಾಜನರಾದ ಮಹಾಲಿಂಗ ನಾಯ್ಕ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.5ರ ಶನಿವಾರ ಬೆಳಿಗ್ಗೆ 10.30 ಗಂಟೆಗೆ ನಗರದ ಕೊಡಿಯಾಲ್ ಬೈಲ್‍ನ ಶಾರದಾ ವಿದ್ಯಾಲಯದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


    ಇಂಧನ ಹಾಗೂ ಕನ್ನಡ ಮತ್ತು ಸಂಸ್ಕತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕತರಾದ ಮಹಾಲಿಂಗ ನಾಯ್ಕ ಅವರನ್ನು ಸನ್ಮಾನಿಸಲಿದ್ದಾರೆ.
    ಕಾರ್ಯಕ್ರಮವನ್ನು ಲೋಕ ಸಭಾ ಸದಸ್ಯರಾದ ನಳೀನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕರಾದ ವೇದವ್ಯಾಸ ಕಾಮತ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್, ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ. ಎಂ.ಬಿ. ಪುರಾಣಿಕ್ ಮತ್ತಿತರ ಗಣ್ಯರು ಭಾಗವಹಿಸುವರು.

    LATEST NEWS

    ಆನ್​ಲೈನ್​ ಮೂಲಕ ಆರ್ಡರ್​ ಮಾಡಿದ್ದ ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

    Published

    on

    ಮುಂಬೈ: ಐಸ್​ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆಯಾಗಿರುವ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಮಲಾಡ್ ನಿವಾಸಿ ಡಾ.ಒರ್ಲಾಮ್ ಬ್ರಾಂಡನ್ ಸೆರಾವೊ ಅವರು ಆನ್‌ಲೈನ್‌ನಲ್ಲಿ ಐಸ್ ಕ್ರೀಮ್ ಆರ್ಡರ್ ಮಾಡಿದ್ದರು. ಅವರು ಬಹಳ ಆಸಕ್ತಿಯಿಂದ ಐಸ್​ಕ್ರೀಂ ತೆಗೆದು ನೋಡಿ ದಿಗ್ಭ್ರಮೆಗೊಂಡಿದ್ದಾರೆ. ಆ ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆಯಾಗಿದ್ದು, ಈ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

    ಮೊದಲು ವಾಲ್ನಟ್​ ಎಂದುಕೊಂಡೆವು. ಬಳಿಕ ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಇದು ಬೆರಳು ಎಂಬುದು ಅರಿವಾಗಿದೆ ಎಂದಿದ್ದಾರೆ. ನಾನು ಮೂರು ಐಸ್​ಕ್ರೀಂಗಳನ್ನು ಆರ್ಡರ್​ ಮಾಡಿದ್ದೆ, ನಾನು ಬಟರ್​ಸ್ಕಾಚ್​ ಐಸ್​ ಕ್ರೀಮ್ ತಿನ್ನುತ್ತಿದ್ದೆ ಆಗ ಇದ್ದಕ್ಕಿದ್ದಂತೆ ಹಲ್ಲಿಗೇನೋ ತಾಗಿದಂತಾಯಿತು. ನಾನು ವಾಲ್ನಟ್ ಅಥವಾ ಚಾಕೊಲೇಟ್​ ಇರಬೇಕು ಎಂದುಕೊಂಡೆ, ಬಳಿಕ ಉಗುಳಿದಾಗ ಅದು ವಾಲ್ನಟ್ ಆಗಿರಲಿಲ್ಲ, ಮನುಷ್ಯನ ಬೆರಳಾಗಿದ್ದು, ಅದನ್ನು ನೋಡಿ ಒಮ್ಮೆ ದಿಗ್ಭ್ರಮೆಗೊಂಡೆ. ನಾನು ವೈದ್ಯನಾಗಿರುವ ಕಾರಣ ಇದು ಹೆಬ್ಬರಳಿನ ಭಾಗ ಎಂಬುದು ನಾನು ಅರ್ಥಮಾಡಿಕೊಂಡೆ ಅದರಲ್ಲಿ ಉಗುರು ಕೂಡ ಇದೆ ಎಂದರು. ನಾನು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದೆ ಎಂದು ವೈದ್ಯೆ ಹೇಳಿದ್ದಾರೆ.

    ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದಾರೆ, ಐಸ್​​ಕ್ರೀಂ ಬ್ರ್ಯಾಂಡ್​ ವಿರುದ್ಧ ಕಲಬೆರಕೆ ಮತ್ತು ಜನರ ಜೀವಕ್ಕೆ ಅಪಾಯ ತಂದಿರುವ ಆರೋಪದಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಬೆರಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ, ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಐಸ್​ಕ್ರೀಂನಲ್ಲಿ ಬೆರಳು ಎಲ್ಲಿಂದ ಬಂತು ಎಂಬುದನ್ನೂ ಪತ್ತೆ ಮಾಡುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದೆ. Yummo ಐಸ್ ಕ್ರೀಮ್ ಒಂದು ಹೆಸರಾಂತ ಬ್ರ್ಯಾಂಡ್ ಎಂದು ಹೇಳಲಾಗುತ್ತಿದೆ. ಈಗ ಪೊಲೀಸರು ಮುಂದಿನ ಕ್ರಮ ಏನು ಎಂಬುದು ವರದಿ ಬಂದ ನಂತರವೇ ತಿಳಿದುಬರಲಿದೆ.

    Continue Reading

    LATEST NEWS

    ಇನ್ಮುಂದೆ ತಿರುಮಲ ಬೆಟ್ಟದಲ್ಲಿ ‘ಗೋವಿಂದ..ಗೋವಿಂದ’ ಘೋಷ ಮಾತ್ರ ಮೊಳಗಬೇಕು-ಸಿಎಂ ನಾಯ್ಡು

    Published

    on

    ಆಂಧ್ರಪ್ರದೇಶ/ಮಂಗಳೂರು: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ತಿರುಪತಿ ತಿಮ್ಮಪ್ಪನ ಬೆಟ್ಟಕ್ಕೆ ಕುಟುಂಬ ಸಮೇತರಾಗಿ ತೆರಳಿ ದೇವರ ದರ್ಶನ ಪಡೆದಿದ್ದಾರೆ.

    ತಿರುಮಲ ಒಂದು ಪವಿತ್ರ ದೇವಸ್ಥಾನವಾಗಿದ್ದು ಇಲ್ಲಿನ ಪಾವಿತ್ರ್ಯತೆ ಕಾಪಾಡಬೇಕಾಗಿದೆ. ಹಾಗಾಗಿ ಇನ್ಮುಂದೆ ದೇವಸ್ಥಾನದಲ್ಲಿ ‘ಏಕಕುಂಡಲವಾಡ ಸ್ವಾಮಿ ಗೋವಿಂದ.. ಗೋವಿಂದ ‘ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

    Read More.; ಮೊಣಕಾಲಿನಲ್ಲಿ ತಿರುಮಲ ಬೆಟ್ಟ ಏರಿದ ಬಾಲಿವುಡ್ ನಟಿ ಜಾಹ್ನವಿ ಕಪೂರ್..!!

    ಅವರು ತಿರುಮಲ ಬೆಟ್ಟದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಇನ್ನು ಮುಂದೆ ಬೆಟ್ಟದಲ್ಲಿ ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು. ಕೇವಲ ‘ಗೋವಿಂದ.. ಗೋವಿಂದ’ ಎಂಬ ಘೋಷ ಮಾತ್ರ ಕೇಳಿಬರಬೇಕು. ಇದು ಹಿಂದೂಗಳ ಪವಿತ್ರ ದೇವಸ್ಥಾವಾಗಿದ್ದು ಇಲ್ಲಿನ ಪಾವಿತ್ರ್ಯತೆಯನ್ನು ನಾವು ಕಾಪಾಡಬೇಕು. ಇಲ್ಲಿಗೆ ಬರುವ ಭಕ್ತರಿಗೆ ದೇವರ ದರ್ಶನ ಹಾಗೂ ಶಾಂತಿಯುವಾದ ವ್ಯವಸ್ಥೆಯನ್ನು ಕಲ್ಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.

    ಕಳೆದ ಐದು ವರ್ಷಗಳಲ್ಲಿ ಪವಿತ್ರ ದೇವಾಲಯದ ಪಾವಿತ್ರ್ಯತೆ ಹಾಳಾಗಿದೆ, ಶಕ್ತಿಶಾಲಿಗಳ ಮನೆ ಬಾಗಿಲಿಗೆ ದೇವರನ್ನು ಕೊಂಡೊಯ್ಯುವುದನ್ನು ಎಂದಾದರೂ ನೀವು ಕೇಳಿದ್ದೀರಾ. ಇಲ್ಲಿ ಡ್ರಗ್ಸ್​, ಮದ್ಯ ಮಾಂಸ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು, ಕಳೆದ ಐದು ವರ್ಷಗಳಲ್ಲಿ ಬೆಟ್ಟದಲ್ಲಿ ಆಹಾರದ ಗುಣಮಟ್ಟವೂ ಹದಗೆಟ್ಟಿದೆ, ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ ಎಂದು ಹೇಳಿದ್ದಾರೆ.

    Continue Reading

    LATEST NEWS

    ಚಾರ್ಮಾಡಿ ಘಾಟ್​​​ನಲ್ಲಿ KSRTC ಬಸ್​ಗೆ ಅಡ್ಡನಿಂತ ಒಂಟಿ ಸಲಗ

    Published

    on

    ಚಿಕ್ಕಮಗಳೂರು: ಚಾರ್ಮಾಡಿ ಘಾಟ್​ನಲ್ಲಿ ಒಂಟಿ ಸಲಗದ ಆತಂಕ ಹೆಚ್ಚಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್​​​ ಬಳಿ ಕೆಎಸ್​ಆರ್​​ಟಿಸಿ ಬಸ್​ಗೆ ಒಂಟಿ ಸಲಗ ಅಡ್ಡನಿಂತು ಭಯ ಹುಟ್ಟಿಸಿದೆ. ಮಧ್ಯರಾತ್ರಿ ಒಂಟಿ ಸಲಗದ ಉಪಟಳಕ್ಕೆ ಪ್ರಯಾಣಿಕರು ಕಂಗಾಲಾದರು.

    ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್​ಗೆ ಅಡ್ಡಲಾಗಿ ಆನೆಯೊಂದು ಬಂದು ನಿಂತಿದ್ದು ಸುಮಾರು ಅರ್ಧ ಗಂಟೆಗಳ ಕಾಲ ದಾರಿಯೇ ಬಿಟ್ಟಿಲ್ಲ. ಅರ್ಧ ಗಂಟೆ ಚೂರೂ ಅಲುಗಾಡದೆ ಭಯದಲ್ಲೇ ಪ್ರಯಾಣಿಕರು ಕೂರುವಂತಾಗಿತ್ತು.

    ಚಾರ್ಮಾಡಿ ಘಾಟ್​ನಲ್ಲಿ ಪದೇಪದೇ ಒಂಟಿ ಸಲಗ ಕಾಣಿಸಿಕೊಳ್ಳುತ್ತಿದೆ. ಒಂಟಿ ಸಲಗದ ಸೆರೆಗೆ ಗ್ರಾಮಸ್ಥರು, ಪ್ರಯಾಣಿಕರು ಮನವಿ ಮಾಡಿದ್ದಾರೆ. ಈ ರೀತಿ ಆನೆಗಳು ಪ್ರಯಾಣಿಕರಿಗೆ ಕಾಟ ಕೊಡೋದು, ದಾಳಿ ಮಾಡೋದು ಹೊಸದೇನಲ್ಲ. ಆದರೆ ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು.

    ಎರಡು ದಿನಗಳ ಹಿಂದಷ್ಟೇ ಪುತ್ತೂರಿನಲ್ಲೂ ಆನೆ ಕಾಟ ಶುರುವಾಗಿತ್ತು. ಗುಂಪಿನಿಂದ ತಪ್ಪಿಸಿಕೊಂಡು ಬಂದ ಕಾಡಾನೆಯೊಂದು ಕಳೆದ ಹತ್ತು ದಿನಗಳಿಂದ ಪುತ್ತೂರು ತಾಲೂಕಿನ ಹತ್ತಾರು ಹಳ್ಳಿಗಳಲ್ಲಿ ಓಡಾಡುತ್ತಿದೆ. ಇದರಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಹೋದ ಕಡೆಯಲ್ಲೆಲ್ಲ ಹಾನಿ ಮಾಡುತ್ತಿದೆ.

    Continue Reading

    LATEST NEWS

    Trending