DAKSHINA KANNADA
ಮಂಗಳೂರು: ಸಂಜೀವರಾಮ ಪೂಜಾರಿಯವರಿಗೆ ವಾಗೀಶ್ವರೀ ಪ್ರಶಸ್ತಿ
ಮಂಗಳೂರು: ‘ಅಧ್ಯಾತ್ಮಿಕ, ಧಾಸಅರ್ಮಿಕ, ಸಾಂಸ್ಕೃತಿಕ ಸತ್ವಗಳಿಂದ ಸಮೃದ್ದವಾದ ವಿಶಿಷ್ಠ ಕಲೆ ಯಕ್ಷಗಾನ. ಅದನ್ನು ಪ್ರತಿಫಲಾಪೇಕ್ಷೆ ಇಲ್ಲದೆ ಅರಾಧಿಸುವ ಹವ್ಯಾಸಿ ಕಲಾವಿದರು ಅಭಿನಂದನೀಯರು’ ಎಂದು ಮಹಾಮಾಯಾ ದೇವಸ್ಥಾನದ ಅರ್ಚಕ ವಿಠಲ ಭಟ್ ಅವರು ಹೇಳಿದರು.
ಅವರು ಶ್ರೀ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಶ್ರೀ ವಾಗೀಶ್ವರಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀ ವಾಗೀಶ್ವರೀ ಶತಮಾನೋತ್ಸವ ಸಂಮಾನ ಪ್ರಶಸ್ತಿ ಸ್ವೀಕರಿಸಿದ ಹಿರಿಯ ಕಲಾವಿದ ಸಂಜೀವ ರಾಮ ಪೂಜಾರಿ ಹೊಯಿಗೆಬೈಲ್ ಅವರನ್ನು ಅಭಿನಂದಿಸಿ ಮಾತನಾಡಿದರು.
ಕಳೆದ ಆರು ದಶಕಗಳಿಂದ ಮಂಗಳೂರು ಪರಿಸರದ ಬಹುತೇಕ ಯಕ್ಷಗಾನ ತಾಳಮದ್ದಳೆ ಸಂಘಗಳಲ್ಲಿ ಭಾಗವತಿಗೆ ,ಚೆಂಡೆ ಮದ್ದಳೆ ವಾದಕರಾಗಿ ,ಅರ್ಥಧಾರಿಯಾಗಿ ,ಭಜನಾ ಕಲಾವಿದನಾಗಿ ಕಲಾಸೇವೆಗೈದ ಹಿರಿಯ ಕಲಾವಿದ ಸಂಜೀವ ಪೂಜಾರಿ (89) ಯವರನ್ನು ಸಂಮಾನಿಸಲಾಯಿತು.
ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಅಧ್ಯಕ್ಷರಾಗಿ ಎರಡು ದಶಕಗಳ ಕಾಲ ಮುನ್ನಡೆಸಿದ್ದ ದಿ.ಕದ್ರಿ ನರಸಿಂಹ ಪ್ರಭು ಅವರ ಸಂಸ್ಮರಣೆ ಹಾಗೂ ಸಂಜೀವ ರಾಮ ಪೂಜಾರಿಯವರನ್ನು ಸಂಜಯ ಕುಮಾರ್ ರಾವ್ ಅಭಿನಂದಿಸಿದರು.
ಶತಮಾನೋತ್ಸವ ಸಮಿತಿ ಅಧ್ಯಕ್ಷ ಸಿ.ಎಸ್.ಭಂಢಾರಿ ಅಧ್ಯಕ್ಷತೆ ವಹಿಸಿದ್ದರು ,ಶ್ರೀಮತಿ ಪ್ರಪುಲ್ಲಾ ನಾಯಕ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.
ಸಂಘದ ಅಧ್ಯಕ್ಷ ಶ್ರೀನಾಥ್ ಪ್ರಭು,ಕಾರ್ಯಾಧ್ಯಕ್ಷ ನಾಗೇಶ್ ಪ್ರಭು, ಅಶೋಕ್ ಬೋಳೂರು ,ಪ್ರಭಾಕರ ಕಾಮತ್ ಉಪಸ್ಥಿತರಿದ್ದರು.ಪ್ರಧಾನ ಸಂಚಾಲಕ ಕದ್ರಿ ನವನೀತ ಶೆಟ್ಟಿ ನಿರೂಪಿಸಿದರು.
ಸಂಘದ ಕಲಾವಿದರಿಂದ ಶ್ರೀರಾಮ ಚರಿತಾಮೃತ ಸರಣಿಯ ” ಪುತ್ರೋತ್ಸವ ” ತಾಳಮದ್ದಳೆ ನಡೆಯಿತು.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.
DAKSHINA KANNADA
ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.
ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.
DAKSHINA KANNADA
ನರ್ಸ್ಗೆ ಶಾಕ್ ನೀಡಿದ ಅಂಬ್ಯುಲೆನ್ಸ್..! ಇದು ಮನಕಲಕುವ ಘಟನೆ..!
ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.
ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.
ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.