Monday, May 23, 2022

ಕಡಬ: ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಯುವಕ ನೀರುಪಾಲು

ಕಡಬ: ನದಿ ನೀರಿನ ಸೆಳೆತಕ್ಕೆ ಯುವಕನೋರ್ವ ನೀರುಪಾಲಾದ ಘಟನೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಇಂದು ಸಂಭವಿಸಿದೆ.


ನೀರುಪಾಲಾದ ಯುವಕನನ್ನು ಸ್ಥಳೀಯ ನಿವಾಸಿ ಶಫೀಕ್(19) ಎಂದು ಗುರುತಿಸಲಾಗಿದೆ. ವಿಪರೀತ ಮಳೆ ಸುರಿಯುತ್ತಿರುವುದರಿಂದ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ನೀರಿನಲ್ಲಿ ಕಣ್ಮರೆಯಾಗಿರುವುದಾಗಿ ತಿಳಿದುಬಂದಿದೆ.

ವಿಪರೀತ ಮಳೆ ಸುರಿಯುತ್ತಿದ್ದು, ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಈ ವೇಳೆ ಶಫೀಕ್ ಯಾಕೆ ನದಿಗೆ ತೆರಳಿದ ಎನ್ನುವ ಬಗ್ಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರರಿಂದ, ಶಫೀಕ್ ಗಾಗಿ ಹುಡುಕಾಟ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಊರವರ ಸಹಾಯದಿಂದ ಯುವಕನ ಶೋಧ ಕಾರ್ಯ ಆರಂಭಗೊಂಡಿದೆ.

LEAVE A REPLY

Please enter your comment!
Please enter your name here

Hot Topics

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಬಂಟ್ವಾಳ: ಅಡ್ಡಾದಿಡ್ಡಿ ಕಾರು ಚಾಲನೆ-ಚಾಲಕನನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಂಟ್ವಾಳ: ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಸಂದರ್ಭ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಬೊಬ್ಬೆ ಹಾಕಿದ್ದರಿಂದ ಕಾರು ನಿಲ್ಲಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ...