Thursday, December 2, 2021

ಭಟ್ಕಳ: ಮೋಜು-ಮಸ್ತಿಗೆ ಸಮುದ್ರಕ್ಕಿಳಿದರು, ಒರ್ವ ಸಾವು- ಇನ್ನೊಬ್ಬ ಗಂಭೀರ

ಭಟ್ಕಳ: ಬೆಂಗಳೂರು ಕನಕಪುರದಿಂದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದರು.

ಈ ವೇಳೆ ಮುರುಡೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆತ ಹೊಡೆತಕ್ಕೆ ಈರ್ವರು ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಓರ್ವನನ್ನು ರಕ್ಷಣೆ ಮಾಡಲಾಗಿದೆ.

ಮೃತಪಟ್ಟವನನ್ನು ರಘುನಂದನ (17) ಕನಕಪುರ ಎಂದು ಗುರುತಿಸಲಾಗಿದೆ. ಇನ್ನೊರ್ವ ಪ್ರವಾಸಿಗ ಬಸವರಾಜು(21) ಎನ್ನುವವರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ರಘುನಂದನ್ ಮಾತ್ರ ಅಲೆಯಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿದ್ದು,

ಕೆಲ ತಾಸುಗಳ ಬಳಿಕ ರಘುನಂದನ್ ಮೃತದೇಹ ಪತ್ತೆಯಾಗಿದೆ. ರಕ್ಷಣೆ ಮಾಡಿದ ಬಸವರಾಜ್ ಗೆ ಪ್ರಥಮ ಚಿಕಿತ್ಸೆ ನೀಡಿ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ.

ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...