Connect with us

    LATEST NEWS

    ಫೆಂಗಲ್ ಚಂಡಮಾರುತ ಅಬ್ಬರ; ವಿದ್ಯುದಾ*ಘಾತ, ಭೂ*ಕುಸಿತದಿಂದ 3 ಸಾ*ವು

    Published

    on

    ಮಂಗಳೂರು/ತಮಿಳುನಾಡು : ಫೆಂಗಲ್ ಚಂಡಮಾರುತದ ಇಂದು (ಡಿ.1) ಮುಂಜಾನೆ 2 ಗಂಟೆಗೆ ತಮಿಳುನಾಡು ಕರಾವಳಿಯನ್ನು ತಲುಪಿದೆ.

    ವಿದ್ಯುದಾ*ಘಾತ ಹಾಗೂ ಭೂ*ಕುಸಿತದಿಂದಾಗಿ ಮೂವರು ಸಾ*ವನ್ನಪ್ಪಿದ್ದಾರೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. 16 ಗಂಟೆಗಳ ಬಳಿಕ ಏರ್​ಪೋರ್ಟ್​ ತೆರೆಯಲಾಗಿದ್ದು, ವಿಮಾನಗಳ ಕಾರ್ಯಾಚರಣೆ ಆರಂಭವಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡು, ಆಂಧ್ರಪ್ರದೇಶ ಮತ್ತು ಪುದುಚೇರಿಯ ಹಲವು ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಪ್ರದೇಶದಲ್ಲಿ ಹವಾಮಾನ ಬದಲಾವಣೆ, ಉಬ್ಬರವಿಳಿತ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ.

    14 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್  :

    ಚೆನ್ನೈ ಮತ್ತು ನಗರದ ಮೂರು ನೆರೆಯ ಜಿಲ್ಲೆಗಳು ಸೇರಿದಂತೆ 13 ಜಿಲ್ಲೆಗಳಿಗೆ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗಲಿದ್ದು, ವಿಲ್ಲುಪುರಂ, ಕಲ್ಲಕುರಿಚಿ ಮತ್ತು ಕಡಲೂರು ಭೂ*ಕುಸಿತದ ಸ್ಥಳಕ್ಕೆ ಸಮೀಪದಲ್ಲಿರುವುದರಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ಹಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಫೆಂಗಲ್ ಚಂ*ಡಮಾರುತವು ಭೂ*ಕುಸಿತವನ್ನು ಉಂಟುಮಾಡಿತ್ತು, ಭಾನುವಾರ ಮುಂಜಾನೆ 4.00 ಗಂಟೆಗೆ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗಳು ಪುನರಾರಂಭಗೊಂಡವು. ಚಂಡಮಾರುತದ ಪ್ರಭಾವದಿಂದಾಗಿ ಅಧಿಕಾರಿಗಳು ನಿನ್ನೆ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದ್ದರು.

     

    ಇದನ್ನೂ ಓದಿ : ಫೆಂಗಲ್ ಚಂಡಮಾರುತ ಭೀತಿ; ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

     

    ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯ ಕಾರೈಕಲ್‌ ಮತ್ತು ಮಹಾಬಲಿಪುರಂ ನಡುವೆ ಫೆಂಗಲ್‌ ಚಂಡಮಾರುತ ಹಾದು ಹೋಗಲಿದ್ದು, ಗಂಟೆಗೆ 70-80 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ವಿವರಿಸಿದೆ. ಚೆನ್ನೈನಲ್ಲಿ ಭಾರೀ ಮಳೆಯಿಂದಾಗಿ ಎಟಿಎಂಗೆ ತೆರಳಿದ್ದ ವ್ಯಕ್ತಿಯೊಬ್ಬನಿಗೆ ವಿದ್ಯುತ್‌ ಶಾಕ್‌ ತಗುಲಿ ಸಾ*ವನ್ನಪ್ಪಿದ್ದಾನೆ. ಚೆನ್ನೈ, ತಿರುವಳ್ಳೂರ್‌, ಕಾಂಚೀಪುರಂ, ಕಲ್ಲಕುರಿಚಿ ಹಾಗೂ ಕಡಲೂರು, ಪಾಂಡಿಚೇರಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತದಿಂದಾಗಿ ಹವಾಮಾನ ಬದಲಾವಣೆಯಾಗಲಿದ್ದು, ವಿಮಾನ ಮತ್ತು ಸ್ಥಳೀಯ ರೈಲು ಓಡಾಟದ ಮೇಲೆ ಪರಿಣಾಮ ಬೀರಿರುವುದಾಗಿ ವರದಿ ತಿಳಿಸಿದೆ. ಇಂದು ರಾತ್ರಿ 7 ಗಂಟೆವರೆಗೆ ಚೆನ್ನೈ ವಿಮಾನ ನಿಲ್ದಾಣ ಮುಚ್ಚಲಿದ್ದು, ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

    BELTHANGADY

    ಅರಣ್ಯ ವಾಸಿಗಳ ಸಮಸ್ಯೆ ಬಗೆಹರಿಸಲು ಅರಣ್ಯ ಸಚಿವರಿಗೆ ಮನವಿ..!

    Published

    on

    ಮಂಗಳೂರು : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯದ ಅರಣ್ಯ ಮತ್ತು ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಿದರು.

    ಅರಣ್ಯ ಮತ್ತು ಕಂದಾಯ ಜಮೀನಿನ ಬಗ್ಗೆ ಇರುವ ಗೊಂದಲಗಳನ್ನು ಬಗೆಹರಿಸಬೇಕು . ಜಂಟಿ ಸರ್ವೇ ನಡೆಸಿ , ಕೃಷಿ ಚಟುವಟಿಕೆಗಳನ್ನು ನಡೆಸಿರುವ ಅರಣ್ಯವಾಸಿಗಳಿಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಗಳನ್ನು ಇತ್ಯರ್ಥಪಡಿಸಿ ಹಕ್ಕುಪತ್ರ ವಿತರಣೆ ಮಾಡಬೇಕು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಆದಿವಾಸಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಮತ್ತು ಇತರರಿಗೆ ಅರಣ್ಯ ಉತ್ಪನ್ನಗಳನ್ನು ಸಂಗ್ರಹಿಸಲು ಅವಕಾಶ ನಿರಾಕರಣೆ ಮಾಡಬೇಕು.  ಕಸ್ತೂರಿ ರಂಗನ್ ವರದಿ ಸೇರಿದಂತೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ , ಆನೆ ಕಾರಿಡಾರ್ , ಅರಣ್ಯ ಸೂಕ್ಷ್ಮ ವಲಯ , ಹುಲಿ ಸಂರಕ್ಷಿತ ವಲಯ ಸೇರಿದಂತೆ ವಿವಿಧ ಯೋಜನೆಗಳ ಹೆಸರಿನಲ್ಲಿ ಅರಣ್ಯವಾಸಿಗಳಿಗೆ ತೊಂದರೆ ಉಂಟುಮಾಡುವ ಯಾವುದೇ ತೀರ್ಮಾನ ರಾಜ್ಯ ಸರ್ಕಾರ ಕೈಗೊಳ್ಳಬಾರದು . ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳಲ್ಲಿ ಅರಣ್ಯವಾಸಿಗಳಿಗೆ ಪ್ರಾಶಸ್ತ್ಯ ನೀಡುವ ವಿಚಾರ  ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಸಚಿವರ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು. ಸಮಸ್ಯೆಗಳನ್ನು ಕಾನೂನಿನ ಪರಿಮಿತಿಯಲ್ಲಿ ಬಗೆಹರಿಸಲು ಸಹಾಯ ಮಾಡುವಂತೆ ಸಚಿವರು ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಇತರ ರಾಜ್ಯ ಮಟ್ಟದ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದರು.  ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಜಯಾನಂದ ಪಿಲಿಕಲ , ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ನೆರಿಯ , ಸಂಚಾಲಕ ಶೇಖರ್ ಲಾಯಿಲ ಉಪಸ್ಥಿತರಿದ್ದರು.

    Continue Reading

    LATEST NEWS

    ಪೂಜಾ ಖೇಡ್ಕರ್ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್ !

    Published

    on

    ಮಂಗಳೂರು/ನವದೆಹಲಿ: ನೇಮಕಾತಿ ರದ್ದಾಗಿರುವ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ಇಂದು (ಸೋಮವಾರ) ದೆಹಲಿ ಹೈಕೋರ್ಟ್ ನಿರಾಕರಿಸಿದೆ.

    ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ ಸಿ) ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಅಂಗವೈಕಲ್ಯತೆ ಸಮಸ್ಯೆಯಿಂದ ಬಳಲುತ್ತಿರುವಂತೆ ನಕಲಿ ದಾಖಲೆಗಳನ್ನು ನೀಡಿ ಮೀಸಲಾತಿಯ ದುರುಪಯೋಗಪಡಿಸಿಕೊಂಡಿರುವ ಆರೋಪ ಪೂಜಾ ಮೇಲಿದೆ.

    ಪೂಜಾ ಖೇಡ್ಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ನ್ಯಾಯಮೂರ್ತಿ ಚಂದ್ರಧಾರಿ ಸಿಂಗ್ ಹೇಳಿದ್ದಾರೆ.

    ಇದನ್ನೂ ಓದಿ: ಇವರು 50 ವರ್ಷಗಳಿಂದ ಅಂಗಿ ಹಾಕಿಲ್ಲ; ಕಾರಣ ಏನು ಗೊತ್ತಾ ?

    ಪೂಜಾ ಖೇಡ್ಕರ್ ಅವರ ವಿರುದ್ದ ಪ್ರಬಲವಾದ ಪ್ರಕರಣ ದಾಖಲಾಗಿದ್ದು, ಪ್ರಕರಣದ ಸತ್ಯಾಸತ್ಯತೆ ತಿಳಿಯಬೇಕಾದರೆ ಸೂಕ್ತ ತನಿಖೆಯ ಅಗತ್ಯವಿದೆ. ಹಾಗಾಗಿ ಪೂಜಾ ಅವರು ತನಿಖೆಗೆ ಸಹಕರಿಸಬೇಕು’ ಎಂದೂ ನ್ಯಾಯಮೂರ್ತಿ ಸಿಂಗ್ ತಿಳಿಸಿದ್ದಾರೆ.

    ಯುಪಿಎಸ್ ಸಿ ಪರ ಹಿರಿಯ ವಕೀಲ ನರೇಶ್ ಕೌಶಿಕ್ ಮತ್ತು ವಕೀಲ ವರ್ಧಮಾನ್ ಕೌಶಿಕ್ ವಾದ ಮಂಡಿಸಿದ್ದರು.

    ಪ್ರಕರಣ ಸಂಬಂಧ ಕೆಲವು ದಿನಗಳ ಹಿಂದೆ ಪೂಜಾ ಖೇಡ್ಕರ್ ವಿರುದ್ದ ದೆಹಲಿ ಪೊಲೀಸರು ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ವಿಕಲಚೇತನರ ಹಕ್ಕು ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಿದ್ದರು.

     

    Continue Reading

    BELTHANGADY

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ

    Published

    on

    ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪತ್ನಿ ಗೀತಾ ಖಂಡ್ರೆ ಮಗ ಬಿದ‌ರ್ ಸಂಸದ ಸಾಗರ್ ಖಂಡ್ರೆ ಹಾಗೂ ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್‌ ಎಸ್.ಪಿ.ಪಿ ವಿಜಯ್ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

    ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ ಬೆಲ್ಲ ಮತ್ತು ಕಡ್ಲೆ ಬೇಳೆಯಿಂದ ಧರ್ಮಾಧಿಕಾರಿಗಳ ಮುಂದೆ ತುಲಭಾರ ಸೇವೆ ಮಾಡಿಸಿದರು. ಬಳಿಕ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

    ಸಚಿವರ ಭೇಟಿ ವೇಳೆ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು DCF ಶ್ರೀಕಾಂತ್‌ ಖಣದಾಳಿ ಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.

    Continue Reading

    LATEST NEWS

    Trending