Home ಪ್ರಮುಖ ಸುದ್ದಿ ರಕ್ಷಿತ್​ ಶೆಟ್ಟಿ ಮೇಲೆ ಜಾಮೀನು ರಹಿತ ವಾರೆಂಟ್ ಜಾರಿ

ರಕ್ಷಿತ್​ ಶೆಟ್ಟಿ ಮೇಲೆ ಜಾಮೀನು ರಹಿತ ವಾರೆಂಟ್ ಜಾರಿ

ರಕ್ಷಿತ್​ ಶೆಟ್ಟಿ ಮೇಲೆ ಜಾಮೀನು ರಹಿತ ವಾರೆಂಟ್ ಜಾರಿ

ಸ್ಯಾಂಡಲ್​ವುಡ್​ ಖ್ಯಾತ ನಟ ನಿರ್ದೇಶಕ ರಕ್ಷಿತ್​ ಶೆಟ್ಟಿ ವಿರುದ್ಧ ಬಂಧನಕ್ಕೆ ವಾರೆಂಟ್​ ಜಾರಿ ಮಾಡಲಾಗಿದೆ. ಕಿರಿಕ್‌ ಪಾರ್ಟಿ ಸಿನಿಮಾಗೆ ಕಾಪಿ ರೈಟ್ಸ್‌ ಇಲ್ಲದೆ ಲಹರಿ ಸಂಸ್ಥೆಯ ಹಾಡು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ, ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್‌ ದಾಖಲಾಗಿತ್ತು.

ಈ ಹಿನ್ನಲೆ 9ನೇ ಎಸಿಎಂಎಂ ಕೋರ್ಟ್‌ ಸಮನ್ಸ್ ಜಾರಿ ಮಾಡಿತ್ತು. ಆದರೆ ರಕ್ಷಿತ್​ ಶೆಟ್ಟಿ ನ್ಯಾಯಾಲಯದ ಸಮನ್ಸ್​ಗೆ ಲಿಖಿತ ಉತ್ತರ ನೀಡಿರಲಿಲ್ಲ. ವಿಚಾರಣೆಗೂ ಹಾಜರಾಗಿರಲಿಲ್ಲ. ಹೀಗಾಗಿ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್‌ಜಾರಿ ಮಾಡಲಾಗಿದೆ. 2016ರಲ್ಲಿ ಕಿರಿಕ್​ ಪಾರ್ಟಿ’ ಸಿನಿಮಾ ಬಿಡುಗಡೆಯಾಗಿತ್ತು.

ಆದರೆ, ಈ ಸಿನಿಮಾ ಬಿಡುಗಡೆಗೆ ಇನ್ನೂ 2 ದಿನ ಬಾಕಿ ಇರುವ ಸಂದರ್ಭದಲ್ಲಿ ಚಿತ್ರದಲ್ಲಿರುವ “ಹೇ…. ಹೂ ಆರ್​ ಯೂ” ಹಾಡು ಸಾಕಷ್ಟು ವಿವಾದಕ್ಕೀಡಾಗಿತ್ತು. ರವಿಚಂದ್ರನ್​ ನಟನೆಯ ‘ಶಾಂತಿ ಕ್ರಾಂತಿ‘ ಚಿತ್ರಕ್ಕೆ ಬಳಸಿದ್ದ ‘ಮಧ್ಯರಾತ್ರಿಲಿ‘ ಹಾಡಿನ ಮ್ಯೂಸಿಕ್​ ಟ್ರ್ಯಾಕ್​ ಅನ್ನು ನಕಲು ಮಾಡಿ ಈ ಚಿತ್ರಕ್ಕೆ ಬಳಸಿಕೊಳ್ಳಲಾಗಿದೆ ಎಂದು ಲಹರಿ ಆಡಿಯೋ ಸಂಸ್ಥೆ ಚಿತ್ರ ತಂಡದ ಮೇಲೆ 2017ರಲ್ಲಿ ಆಪಾದನೆ ಹೊರಿಸಿತ್ತು. ಅಲ್ಲದೆ, ಸಂಸ್ಥೆಯ ಮುಖ್ಯಸ್ಥ ಲಹರಿ ವೇಲು ಈ ಕುರಿತು ನ್ಯಾಯಕೇಳಿ ಕೋರ್ಟ್​ ಮೆಟ್ಟಿಲೇರಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಹಲವಾರು ಬಾರಿ ನಟ ರಕ್ಷಿತ್​ ಶೆಟ್ಟಿ ಅವರಿಗೆ ಸಮನ್ಸ್​ ಜಾರಿ ಮಾಡಿತ್ತು. ರಕ್ಷಿತ್‌ಶೆಟ್ಟಿ ಉತ್ತರಿಸಿರಲಿಲ್ಲ. ಫೆ 20.ರಂದು ಕೋರ್ಟ್​ಗೆ ಹಾಜರಾಗುವಂತೆ ಮತ್ತೆ ನ್ಯಾಯಾಲಯ ಪರಮ್‍ವ್ಹಾ ಸ್ಟುಡಿಯೋಸ್ ಪ್ರೈವೆಟ್‌ಲಿಮಿಟೆಡ್‌​, ನಟ ರಕ್ಷಿತ್ ಶೆಟ್ಟಿ ಹಾಗೂ ಕಿರಿಕ್ ಪಾರ್ಟಿ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್​ಗೆ ಸಮನ್ಸ್​ ಜಾರಿ ಮಾಡಿತ್ತು. ಆದರೆ, ಈ ಬಾರಿಯೂ ವಿಚಾರಣೆಗೆ ಹಾಜರಾಗದ ಕಾರಣ ಇದೀಗ ಬಂಧನದ ವಾರೆಂಟ್​ ಹೊರಡಿಸಲಾಗಿದೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...