Monday, May 23, 2022

ಮಂಗಳೂರು ಪೊಲೀಸ್ ಕಮೀಷನರ್ ಕಚೇರಿಗೆ ನಟಿ ರಚಿತಾ ರಾಮ್ ಭೇಟಿ….!!

ಮಂಗಳೂರು : ಕರಾವಳಿಯ ಪ್ರವಾಸದಲ್ಲಿರುವ ಖ್ಯಾತ ನಟಿ ರಚಿತಾ ರಾಮ್ ಇಂದು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ  ಭೇಟಿ ನೀಡಿದರು.

ಈ ಸಂದರ್ಭ ಅವರು ಮಂಗಳೂರು ನಗರ ಪೊಲೀಸರ ಜೊತೆ ಒಂದಷ್ಟು ಹೊತ್ತು ಮಾತುಕತೆ ನಡೆಸಿದರು. ನಂತರ ರಚಿತಾ ರಾಮ್ ಅವರನ್ನು ಈ ಸಂದರ್ಭ ಮಂಗಳೂರು ಕಮಿಷನರ್ ಶಶಿಕುಮಾರ್ ಸನ್ಮಾನಿಸಿ ಗೌರವಿಸಿದರು.

ಕೋವಿಡ್ ವೇಳೆ ಪ್ರಾಣದ ಹಂಗು ತೊರೆದು ಕೆಲಸ ಮಾಡಿದ ಪೊಲೀಸರಿಗೆ ರಚಿತಾ ರಾಮ್‌ ಶ್ಲಾಘನೆ ವ್ಯಕ್ತಪಡಿಸಿದರು. ಇದೇ ವೇಳೆ ನಟಿ ಅವರನ್ನು ಪೊಲೀಸ್ ಕಮಿಷನರೇಟ್ ವತಿಯಿಂದ ಅಭಿನಂದಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿಸೆಂಬರ್ 28ರಂದು ನಡೆಯುವ ಜಿಲ್ಲಾ ಪತ್ರಕರ್ತರ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನೂ ಕೂಡಾ ರಚಿತಾ ಬಿಡುಗಡೆ ಮಾಡಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...