Saturday, May 15, 2021

ಕೊರೊನಾಗೆ ಹಿರಿಯ ನಿರ್ಮಾಪಕ ಚಂದ್ರಶೇಖರ್ ಬಲಿ

ಬೆಂಗಳೂರು : ಕೊರೊನಾ ತನ್ನ ಮರಣ ಮೃದಂಗ ಮಂದುವರೆಸಿದ್ದು, ಇತ್ತೀಚೆಗಷ್ಟೆ ನಿರ್ಮಾಪಕ ರಾಮು ಕೊರೊನಾಗೆ ಬಲಿಯಾದ ಬೆನ್ನಲ್ಲೆ ಮತ್ತೊಬ್ಬ ನಿರ್ಮಾಪಕ ಕೊರೊನಾಗೆ ಬಲಿಯಾಗಿದ್ದಾರೆ. ರನ್ನ ಖ್ಯಾತಿಯ ನಿರ್ಮಾಪಕ ಚಂದ್ರಶೇಖರ್ ಅವರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ.


23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿತ್ತು. ಹೀಗಾಗಿ ಅವರನ್ನು ಮಣಿಪಾಲ್ ಸೆಂಟರ್ ಗೆ ದಾಖಲು ಮಾಡಲಾಗಿತ್ತು. ಕೋವಿಡ್ ವಾಸಿಯಾಗಿತ್ತಾದ್ರೂ, ಇದ್ದಕ್ಕಿದ್ದಂತೆ ಶ್ವಾಸಕೋಶದಲ್ಲಿ ಉಲ್ಬಣಗೊಂಡು ಇಂದು ಬೆಳಗ್ಗಿನ ಜಾವ ಸುಮಾರು 4 ಗಂಟೆ ವೇಳೆಗೆ ಇಹಲೋಕ ತ್ಯಜಿಸಿದ್ದಾರೆ.


ಚಂದ್ರಶೇಖರ್ ಅವರು ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಸಿನಿಮಾವೊಂದನ್ನ ಅನೌನ್ಸ್ ಮಾಡಿದ್ರು. ಆದರೆ ವಿಧಿಯಾಟ ಬೇರೆನೇ ಆಗಿದ್ದು, ಕೊರೊನಾದಿಂದ ಗುಣಮುಖರಾದರೂ ಕೂಡ ಸಾವು ಅವರನ್ನು ಬಿಡಲಿಲ್ಲ

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...