Thursday, April 22, 2021

ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ವೀರಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ಅಂತಿಮ ನಮನ..!

ಉಡುಪಿ: ಛತ್ತೀಸ್ ಗಢದ ದಟ್ಟಾರಣ್ಯದಲ್ಲಿ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಯ ಸಂದರ್ಭ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಸ್ಮರಣಾರ್ಥ ಐ.ಸಿ.ವೈ.ಎಂ ಉದ್ಯಾವರ ವತಿಯಿಂದ ಅಂತಿಮ ನಮನ ಸಲ್ಲಿಸಲಾಯಿತು.ಹುತಾತ್ಮ ವೀರ ಯೋಧರಿಗೆ ಅಂತಿಮ ನಮನದಲ್ಲಿ ಪುಷ್ಪಾರ್ಚನೆಗೈದು, ಮೊಂಬತ್ತಿ ಬೆಳಗಿಸಿ, ಮೌನ ಪ್ರಾರ್ಥನೆಯೊಂದಿಗೆ ಅಗಲಿದ ದಿವ್ಯಾತ್ಮಗಳಿಗೆ ಚಿರಶಾಂತಿ ಕೋರಲಾಯಿತು.ಉದ್ಯಾವರ ಗುಡ್ಡೆ ಅಂಗಡಿ ಸಮೀಪ ನಡೆದ ಕಾರ್ಯಕ್ರಮದಲ್ಲಿ ವೀರಯೋಧರು ದೇಶಕ್ಕೆ ಮಾಡಿದ ತ್ಯಾಗದ ಬಗ್ಗೆ ಜೆಸಿ ರಾಜೇಂದ್ರ ಭಟ್ ಗುಣಗಾನ ಮಾಡಿದರು.ಇದೇ ವೇಳೆ ಕಟಪಾಡಿ ಉಪ ಠಾಣೆಯ ಪೊಲೀಸ್ ಸಿಬ್ಬಂದಿಗಳು ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆ ಮಾಡಿದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...