Wednesday, October 5, 2022

ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಮೂತ್ರ ವಿಸರ್ಜನೆಗೂ ಬಿಡದೇ ಕೂಡಿಹಾಕಿದ ಫೈನಾನ್ಸ್‌ ಸಿಬ್ಬಂದಿ

ಯಾದಗಿರಿ: ಖಾಸಗಿ ಫೈನಾನ್ಸ್​ನಲ್ಲಿ ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಕೂಡಿ ಹಾಕಿ ಕಿರುಕುಳ ನೀಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ.


ಮಹ್ಮದ್ ಎನ್ನುವವರು ಶಿವಶಂಕರ್ ಫೈನಾನ್ಸ್​ನಿಂದ 3 ಲಕ್ಷ ರೂ. ಸಾಲ ಪಡೆದಿದ್ದರು. ಸಮಯಕ್ಕೆ ಸರಿಯಾಗಿ ಅಸಲು ಮತ್ತು ಬಡ್ಡಿಯನ್ನೂ ಕಟ್ಟಿದ್ದರು.

ಹೀಗಿದ್ದರೂ ಸಹ ಫೈನಾನ್ಸ್​​ನವರು ಹೆಚ್ಚು ಬಡ್ಡಿ ನೀಡುವಂತೆ ಸಾಲಗಾರರಿಗೆ ಒತ್ತಾಯಿಸುತ್ತಿದ್ದರು.

ಇದಕ್ಕೆ ದಂಪತಿ ಒಪ್ಪದ ಕಾರಣಕ್ಕೆ ಫೈನಾನ್ಸ್​ ಮಾಲೀಕ ಸಾಲಗಾರ ಮಹ್ಮದ್​ ಹೆಂಡತಿ ರಿಜ್ವಾನ್​ ಬೇಗಂಳನ್ನು ತನ್ನ ಕಚೇರಿಗೆ ಕರೆದುಕೊಂಡು ಹೋಗಿ ಒತ್ತೆಯಾಳಾಗಿಸಿಕೊಂಡಿದ್ದಾನೆ.

ಮಹಿಳೆಯನ್ನು ಕೂಡಿಹಾಕಿರುವುದಲ್ಲದೇ, ಮೂತ್ರ ವಿಸರ್ಜನೆಗೂ ಹೊರಗೆ ಬಿಟ್ಟಿಲ್ಲ. ಈ ಘಟನೆ ಇದೇ 24ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಶಿವಶಂಕರ್, ಚಂದ್ರಕಲಾ, ಶಿವಮ್ಮ ಮತ್ತು ಪಾರ್ವತಿ ಎಂಬುವವರು ಈ ಕೃತ್ಯ ಎಸಗಿದ್ದಾರೆ. ಫೈನಾನ್ಸ್​​ ಕಚೇರಿಯಲ್ಲಿ ಕೂಡಿಹಾಕಿ ನಂತರ ಸಂಜೆ 7.30ಕ್ಕೆ ಮಹಿಳೆಯನ್ನು ಬಿಡುಗಡೆ ಮಾಡಿದ್ದಾರೆ. ಉಳಿದ ಸಾಲ ಕೊಡುತ್ತೇವೆ ಎಂದು ಹೇಳಿದ ಬಳಿಕ ಮಹಿಳೆ ಮನೆಗೆ ಹೋಗಲು ಬಿಟ್ಟಿದ್ದಾರೆ.

ಹಣ ಕೊಟ್ಟರೆ ಸರಿ ಇಲ್ಲದಿದ್ದರೆ ಕೊಲೆ ಮಾಡುತ್ತೇವೆ ಎಂದು ಫೈನಾನ್ಸ್​ನವರು ಜೀವ ಬೆದರಿಕೆಯನ್ನೂ ಸಹ ಹಾಕಿದ್ದರು ಎಂದು ತಿಳಿದು ಬಂದಿದೆ.

ನಂತರ ಘಟನೆ ನಡೆದ ಮರುದಿನವೇ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ. ಶಿವಶಂಕರ್, ಶಿವಮ್ಮ ಬಂಧಿತ ಆರೋಪಿಗಳು. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಇದೇ 25 ರಂದು ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...