Connect with us

LATEST NEWS

ಹಣದ ಅಡಚಣೆಗಾಗಿ ಸ್ವಂತ ಕಟ್ಟಡಗಳನ್ನು ಅಡವಿಟ್ಟು ಸಾಲ ತೆಗೆದ ಸಾರಿಗೆ ಸಂಸ್ಥೆ

Published

on

ಬೆಂಗಳೂರು: ಸಾರಿಗೆ ನೌಕರರಿಗೆ ಪಿಂಚಣಿ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಾಣಿಜ್ಯ ಕಟ್ಟಡಗಳನ್ನು ಅಡಮಾನ ಇರಿಸಿ ಸಾಲ ಪಡೆದಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಮಾಹಿತಿ ನೀಡಿದ್ದಾರೆ.


ವಿಧಾನಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಎಸ್ಆರ್​ಟಿಸಿಯಿಂದ ಯಾವುದೇ ವಾಣಿಜ್ಯ ಕಟ್ಟಡವನ್ನು ಅಡಮಾನ ಇಟ್ಟಿಲ್ಲ. ಆದರೆ, ಬಿಎಂಟಿಸಿಯಿಂದ ಶಾಂತಿನಗರ ವಾಣಿಜ್ಯ ಕಟ್ಟಡ ಅಡಮಾನ ಇಟ್ಟು ₹390 ಕೋಟಿ ಸಾಲ ಪಡೆಯಲಾಗಿದೆ.

ಅಡಮಾನ ಹಣ ಭವಿಷ್ಯ ನಿಧಿ ಸಲುವಾಗಿ ಬಳಸಲಾಗಿದೆ. ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ 16.39 ಎಕರೆ ಜಾಗ ಅಡಮಾನ ಇಟ್ಟು ₹100 ಕೋಟಿ ಸಾಲ ಪಡೆಯಲಾಗಿದೆ. ಅದನ್ನ ಭವಿಷ್ಯ ನಿಧಿಗೆ ಬಳಸಲಾಗಿದೆ.

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಾಣಿಜ್ಯ ಕಟ್ಟಡ ಅಡಮಾನ ಇಟ್ಟು ₹50 ಕೋಟಿ ಸಾಲ ಪಡೆದು ಭವಿಷ್ಯ ನಿಧಿಗೆ ವಿನಿಯೋಗಿಸಲಾಗಿದೆ.

ಕೋವಿಡ್ ವೇಳೆ ಸರ್ಕಾರ ಸಾರಿಗೆ ಸಿಬ್ಬಂದಿ ವೇತನ,ನಿರ್ವಹಣೆಗೆ ಸಹಾಯ ಮಾಡಿದೆ. ಆದರೂ ಭವಿಷ್ಯ ನಿಧಿಗಾಗಿ ಸಾಲ ಮಾಡಬೇಕಾಗಿದೆ ಎಂದರು.
ವಾಣಿಜ್ಯದ ದೃಷ್ಟಿಯಿಂದ ನಮ್ಮ ಸಾರಿಗೆ ಸಂಸ್ಥೆಯನ್ನು ನಡೆಸುತ್ತಿಲ್ಲ. ಸೇವಾ ದೃಷ್ಟಿಯಿಂದ ಸೇವೆ ಒದಗಿಸಲಾಗುತ್ತಿದೆ. ಹಾಗಾಗಿ, ಸಾಲ ಮಾಡಬೇಕಾದ ಸನ್ನಿವೇಶ ಬಂದಿದೆ.

ನಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳನ್ನು ಆದಷ್ಟು ಶೀಘ್ರ ಲಾಭದತ್ತ ತರಲು ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ರಚನೆ ಮಾಡಲಾಗಿದೆ. ಆದಷ್ಟು ಬೇಗ ಸಂಸ್ಥೆಯನ್ನು ಲಾಭದತ್ತ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದರು.

LATEST NEWS

ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

Trending