Connect with us

    BANTWAL

    ವಿಷಜಂತು ಕಡಿದು ನರಳುತ್ತಿರುವ ಬಂಟ್ವಾಳದ ಬಾಲೆಗೆ ಬೇಕಿದೆ ನೆರವಿನ ಹಸ್ತ

    Published

    on

    ಬಂಟ್ವಾಳ: ನಾಲ್ಕನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ವಿಷಜಂತುವೊಂದು ಕಡಿದ ಪರಿಣಾಮ ನಡೆದಾಡಲು ಸಾಧ್ಯವಾಗದಂತ ದಯನೀಯ ಸ್ಥಿತಿಯಲ್ಲಿದ್ದು,

    ಜೊತೆಗೆ ಈ ಕುಟುಂಬವು ತೀರಾ ಆರ್ಥಿಕವಾಗಿ ಹಿಂದುಳಿದಿದ್ದಾರೆ. ಆಡಿ ನಲಿದಾಡಬೇಕಿದ್ದ ವಯಸ್ಸಿನಲ್ಲಿ ವಿಷಜಂತು ಕಡಿತದಿಂದಾಗಿ ಹಾಸಿಗೆ ಹಿಡಿದಿರುವ ಈ ಬಾಲಕಿಗೆ ನಿಮ್ಮ ನೆರವಿನ ಹಸ್ತ ಬೇಕಾಗಿದೆ.

    ಇಲ್ಲಿನ ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಸರಸ್ವತಿ ಎಂಬವರ ಪುತ್ರಿ, ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಿಂಚನ (9)ವಿಷಜಂತು ಕಡಿತದಿಂದಾಗಿ ನಡೆದಾಡಲು ಸಾಧ್ಯವಾಗದಂತ ಸ್ಥಿತಿಯಲ್ಲಿದ್ದು.

    ಮಗಳ ಚಿಕಿತ್ಸೆಗಾಗಿ ಈಗಾಗಲೇ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವ ಆರ್ಥಿಕವಾಗಿ ಹಿಂದುಳಿದಿರುವ ಈ ಕುಟುಂಬವು ಮಗಳಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗದೆ ಇದೀಗ ಅಸಹಾಯಕರಾಗಿದ್ದಾರೆ.

    ಆಡಿ ನಲಿದಾಡಬೇಕಿದ್ದ ವಯಸ್ಸಿನಲ್ಲಿ ವಿಷಜಂತು ಕಡಿತದಿಂದಾಗಿ ಹಾಸಿಗೆ ಹಿಡಿದಿರುವ ಈ ಬಾಲಕಿಗೆ ನಿಮ್ಮ ನೆರವಿನ ಹಸ್ತ ಬೇಕಾಗಿದೆ.

    ಮಗಳನ್ನು ಗುಣಪಡಿಸಲು ನೆರವಾಗಿ ಎಂಬ ಆ ತಾಯಿಯ ಕೋರಿಕೆಗೆ ಸ್ಪಂದಿಸಿ ಈ ಕೆಳಗೆ ನೀಡಿರುವ ಸರಸ್ವತಿಯವರ ಬ್ಯಾಂಕ್ ಖಾತೆಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಬೇಕೆಂದು ವಿನಂತಿ.

    ಜೊತೆಗೆ ಕುಟುಂಬವು ಕೂಲಿ ನಾಲಿ ಮಾಡಿ ದಿನದೂಡುತ್ತಿದ್ದು, ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಾಲ ಮಾಡಿಕೊಂಡಿದ್ದಾರೆ. ತಾಯಿಯ ಕಣ್ಣೀರು ಒರೆಸುವ ಕೆಲಸ ಮಾಡಲು ಸಹೃದಯಿ ಜನ ಮುಂದೆ ಬರಬೇಕಾಗಿದೆ.
    ಅಕೌಂಟ್‌ ವಿವರ
    Account Details: Sarasavathi Bank of Baroda Polali Branch
    A/C NO: 70930100007206 IFSC CODE: BARBOVJPOLA
    Contact No: +91 94819 21574

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending