Friday, July 1, 2022

ದಿ. ಭಾಗವತ ಬಲಿಪ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಮೂಲ್ಕಿ: ಅನಾರೋಗ್ಯದ ಕಾರಣದಿಂದ ಅಸಂಖ್ಯಾತ ಯಕ್ಷಗಾನ ಅಭಿಮಾನಿಗಳನ್ನು ಅಗಲಿದ ಕಟೀಲು ಮೇಳದ ಪ್ರಸಿದ್ಧ ಭಾಗವತರಾದ ಪ್ರಸಾದ್ ಭಟ್ ಬಲಿಪ ಕುಟುಂಬಕ್ಕೆ

ಕಟೀಲು ಮೇಳದ ಪತ್ತನಾಜೆಯ ಯಕ್ಞಗಾನ ಸಂದರ್ಭ ಅತಿಥಿ -ಗಣ್ಯರ ಸಮ್ಮುಖದಲ್ಲಿ “ಸಾಂತ್ವನ ಸಂತಾಪ” ನಿಧಿಯ ರೂಪದಲ್ಲಿ ಒಟ್ಟುಗೂಡಿಸಿದ ಸಹಾಯ ಧನವನ್ನು ಹಸ್ತಾಂತರಿಸಲಾಯಿತು.


ಈ ವೇಳೆ ಕಲಾವಿದ ಸುಣ್ಣoಬಳ ವಿಶ್ವೇಶ್ವರ ಭಟ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ,

ಕಲಾ ಸಾಧಕರಾದ ಭಾಗವತ ಪ್ರಸಾದ್ ಭಟ್ ಬಲಿಪ ಅವರನ್ನು ನಾವು ಇಂದು ಕಳೆದುಕೊಂಡಿದ್ದೇವೆ. ಹೀಗಾಗಿ ಅವರ ಮಕ್ಕಳಿಗೆ ಸಹಾಯ ಒದಗಿಸುವ ನಿಟ್ಟಿನಲ್ಲಿ ಕಲಾವಿದರು,

ಅಭಿಮಾನಿಗಳ ಸಹಾಕರದಿಂದ ಒಟ್ಟು ಗೂಡಿಸಿದ ಸುಮಾರು ಒಟ್ಟು 20 ಲಕ್ಷದ 50 ಸಾವಿರ ರೂಪಾಯಿ ಹಣವನ್ನು ಹಸ್ತಾಂತರ ಮಾಡಿದ್ದೇವೆ ಎಂದರು.


ಕಾರ್ಯಕ್ರಮದಲ್ಲಿ ಕಟೀಲು ದೇವಸ್ಥಾನದ ಆಡಳಿತ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು, ಮೇಳದ ಸಂಚಾಲಕ ಕಲ್ಲಾಡಿ ದೇವಿಪ್ರಸಾದ್ ಶೆಟ್ಟಿ, ಭಾಗವತ ಶಿವಶಂಕರ ಬಲಿಪ, ಕಟೀಲು ವಾಸುದೇವ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತ ಪದ್ಮನಾಭ ಆಸ್ರಣ್ಣ,

ಕಮಲಾದೇವಿ ಪ್ರಸಾದ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಹರೀನಾರಾಯಣದಾಸ ಆಸ್ರಣ್ಣ, ಐಕಳ ಗಣೇಶ್ ಶೆಟ್ಟಿ, ಬಜಪೆ ರಾಘವೇಂದ್ರ ಆಚಾರ್ಯ, ಮಿಥುನ್ ಕೊಡೆತ್ತೂರು ಗುತ್ತು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...