Thursday, September 29, 2022

”ನನ್ನ ಗಂಡನನ್ನು ಹುಡುಕಿಕೊಡಿ”-ಮಂಗಳೂರು ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ ಮೇಘಶ್ರೀ

ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಪ್ರೀತಿಸಿ ಮದುವೆಯಾಗಿರುವ ಮಂಗಳೂರಿನ ವಾಮಂಜೂರು ನೀರಾಳ ಬೊಂಡಂತಿಲದ ನಿವಾಸಿ ಲಿಖಿತ್‌ ಎಂಬಾತ ಈಗ ತನ್ನನ್ನು ಮನೆಗೆ ಸೇರಿಸಿಕೊಳ್ಳದೇ ಹೊರದಬ್ಬಿ ಪರಾರಿಯಾಗಿದ್ದಾನೆ. ತನ್ನ ಗಂಡನನ್ನು ಹುಡುಕಿಕೊಡಿ ಎಂದು ಶಿವಮೊಗ್ಗ ಮೂಲದ ಗಾಡಿಕೊಪ್ಪದ ಯುವತಿ ಮೇಘಶ್ರೀ ಎಂಬಾಕೆ ಇದೀಗ ಮಂಗಳೂರಿಗೆ ಆಗಮಿಸಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಲೇರಿದ್ದಾಳೆ.


ತನ್ನನ್ನು ತುಂಬಾ ಪ್ರೀತಿಸುತ್ತಿದ್ದ ಲಿಖಿತ್‌ ಆರ್ಯ ಸಮಾಜದಲ್ಲಿ ಮದುವೆಯಾಗಿದ್ದ. ಆ ಸಂದರ್ಭ ಬಂಗಾರ, ಹಣ ಎಲ್ಲಾ ಕೊಟ್ಟಿದ್ದೇವೆ. ಈಗ ತನ್ನ ಗಂಡನ ಮನೆ ಹತ್ತಿರ ಹೋದರೆ ಅವರ ಅಪ್ಪ , ಅಮ್ಮ ತನ್ನನ್ನು ದೂರ ಮಾಡುತ್ತಿದ್ದಾರೆ.


ಜುಲೈ 2ರಂದು ತನ್ನನ್ನು ಮದುವೆಯಾಗಿರುವ ಲಿಖಿತ್‌ ಉರ್ವ ಮಠದ ಕಿಣಿ ಬಳಿ ಬಾಡಿಗೆ ಮನೆ ಮಾಡಿ ಮೊದಲು ಚೆನ್ನಾಗಿಯೇ ನೋಡಿಕೊಂಡಿದ್ದ. ಬಳಿಕ ತನ್ನನ್ನು ದೂರ ಮಾಡತೊಡಗಿದ್ದಾನೆ ಎಂದು ದೂರಿದ್ದಾಳೆ.


ತನಗೆ ಹೊಡೆದು ಮಾನಸಿಕ ಹಾಗು ದೈಹಿಕ ಹಿಂಸೆ ನೀಡಿದ್ದಲ್ಲದೇ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾನೆ. ನನ್ನ ಗಂಡನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆತನನ್ನು ಹುಡುಕಿ ಒಂದಾಗಿಸಿ ತನಗೆ ನ್ಯಾಯ ಕೊಡಿಸಿ ಎಂದು ಪೊಲೀಸರಿಗೆ ಮೊರೆ ಇಟ್ಟಿದ್ದಾಳೆ.


ಮಗಳು ಚೆನ್ನಾಗಿರಲಿ ಎಂದು ಫ್ಲ್ಯಾಟ್‌ ಮಾಡಿ ಕೊಡಿಸಿ ಎಲ್ಲಾ ವ್ಯವಸ್ಥೆ ಮಾಡಿದರೂ ಆತ ಮಗಳನ್ನು ಚೆನ್ನಾಗಿ ನೋಡಿಕೊಳ್ಳದೇ ಹಿಂಸೆ ನೀಡತೊಡಗಿದ ಹಿನ್ನೆಲೆಯಲ್ಲಿ ದೂರು ನೀಡಿದ್ದೇವೆ.


ನನ್ನ ಮಗಳಿಗೆ ನ್ಯಾಯ ಕೊಡಿಸಿ ಎಂದು ಮೇಘನಾ ತಾಯಿ ಜಯಲಕ್ಷ್ಮೀ ಕೂಡಾ ಒತ್ತಾಯಿಸಿದ್ದಾರೆ. ಈ ಬಗ್ಗೆ ಈಗಾಗಲೇ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿರುವ ಅಧಿಕಾರಿಗಳು ಲಿಖಿತ್ ವಿರುದ್ಧ ಎಫ್‌ಐಆರ್‌ ದಾಖಲಿಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...

ಪುತ್ತೂರಿನಲ್ಲಿ ಜಾಗದ ತಕರಾರು: V.A ಕಚೇರಿಗೆ ನುಗ್ಗಿ ದಾಂಧಲೆ-ಮಾರಕಾಸ್ತ್ರಗಳಿಂದ ಹತ್ಯೆ ಯತ್ನ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ, ಕಲ್ಲು ಎತ್ತುಹಾಕಿ ಕೊಲೆಗೆ ಯತ್ನಿಸಿದ ಘಟನೆ ಪುತ್ತೂರಿನ ಸವಣೂರು ಜಂಕ್ಷನ್ ನಲ್ಲಿ ಇಂದು ನಡೆದಿದೆ.ಸವಣೂರು ಗ್ರಾಮದ...

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...