Connect with us

LATEST NEWS

ಓಣಂ ರಂಗೋಲಿಯನ್ನು ಅಳಿಸಿ ಹಾಕಿ ವಿಕೃತಿ ಮೆರೆದ ಮಹಿಳೆ ವಿರುದ್ಧ ಎಫ್‌ಐಆರ್‌..!

Published

on

ಬೆಂಗಳೂರು/ಮಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಥಣಿಸಂದ್ರದ ಮೋನಾರ್ಚ್ ಅಪಾರ್ಟ್‌ಮೆಂಟ್‌ನಲ್ಲಿ ಮಲೆಯಾಳಿಗರ ಓಣಂ ಹಬ್ಬದ ದಿನ ಮನೆ ಮುಂದೆ ಹಾಕಿದ್ದ ರಂಗೋಲಿ ಅಳಿಸಿಹಾಕಿ ವಿಕೃತಿ ಮೆರೆದಿದ್ದ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದೇಶ, ವಿದೇಶದ ಎಲ್ಲಾ ವರ್ಗ ಹಾಗೂ ಎಲ್ಲಾ ಧರ್ಮ, ಭಾಷೆ, ಜಾತಿಯುಳ್ಳ ಜನರು ವಾಸ ಮಾಡುತ್ತಿದ್ದಾರೆ. ಎಲ್ಲರೂ ಅವರವರದ್ದೇ ಧಾರ್ಮಿಕ ಆಚರಣೆ ಮಾಡಿಕೊಂಡು ಹೋಗುವುದಕ್ಕೆ ಸ್ವತಂತ್ರರಾಗಿದ್ದಾರೆ. ಇದಕ್ಕೆ ಸಂವಿಧಾನದಲ್ಲಿಯೇ ಅವಕಾಶ ನೀಡಿರುವಾಗ ಇಲ್ಲೊಬ್ಬ ಮಹಿಳೆ ಕೇರಳದ ಮೂಲ ನಿವಾಸಿಗಳು ಬೆಂಗಳೂರಿನಲ್ಲಿ ವಾಸವಾಗಿದ್ದು, ಓಣಂ ಆಚರಣೆಗೆ ಮನೆ ಮುಂದೆ ಹಾಕಿಕೊಂಡಿದ್ದ ರಂಗೋಲಿಯಲ್ಲಿ ಕಾಲಿನಿಂದ ತುಳಿದು ಕೆಡಿಸಿದ್ದ ಮಹಿಳೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲಿಯೇ ರಂಗೋಲಿ ಕೆಡಿಸಿದ ಮಹಿಳೆಯ ವಿರುದ್ಧ ಅಪಾರ್ಟ್‌ಮೆಂಟ್ ನಿವಾಸಿಗಳು ದೂರು ನೀಡಿದ್ದು, ಪೊಲೀಸರು ಆಕೆಯ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

ಮಹಿಳೆಯಿಂದ ಓಣಂ ಹಬ್ಬಕ್ಕೆ ಬಿಡಿಸಿದ್ದ ರಂಗೋಲಿ ಹಾಳು ಮಾಡಿದ‌ ವಿಚಾರವಾಗಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಮಹಿಳೆ ವಿರುದ್ದ FIR ದಾಖಲು ಆಗಿದೆ. ಸಿಮಿ ನಾಯರ್ ಎಂಬ ಮಹಿಳೆಯ ವಿರುದ್ಧ ಬೆಂಗಳೂರಿನಲ್ಲಿರುವ ಓಣಂ ಸಮಿತಿ ದೂರು ನೀಡಿದ್ದ ಹಿನ್ನೆಲೆಯಲ್ಲಿ ಕೇಸ್ ದಾಖಲಿಸಲಾಗಿದೆ.

LATEST NEWS

ರಾಜ್ಯದಲ್ಲಿ ಪೈಶಾಚಿಕ ಕೃ*ತ್ಯ; ವೃದ್ಧನಿಂದ ಬಾಲಕಿಯ ಅ*ತ್ಯಾಚಾರ !!

Published

on

ಮಂಗಳೂರು/ಕಲಬುರ್ಗಿ : 15 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಅ*ತ್ಯಾಚಾರ ಎಸಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ನರೋಣ ಪಟ್ಟಣದಲ್ಲಿ ನಡೆದಿದೆ.

ಗೋರಕ್ ನಾಥ ಚೌವ್ಹಾಣ (65) ಆರೋಪಿ ಎಂಬುವುದು ಗುರುತಿಸಲಾಗಿದೆ.

ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ 15 ವರ್ಷದ ಬಾಲಕಿಯ ಮೇಲೆ ಪಾಪಿ ವೃದ್ಧ ಅ*ತ್ಯಾಚಾರ ಎಸಗಿರುವುದು ಸಾಬೀತಾಗಿದೆ.

 

ಇದನ್ನೂ ಓದಿ: ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಯುವಕನ ಮೇಲೆರಗಿ ಬಾಲಕಿಯ ರಕ್ಷಿಸಿದ ಕೋತಿಗಳು!

 

ಆರೋಪಿ ಗೌರವತ್ನಾಥ್‌ನನ್ನು ಪೊಲೀಸರು ಬಂಧಿಸಿದ್ದು, ಘಟನೆ ಕುರಿತಂತೆ ಪೋಕ್ಸೋ ಕಾಯ್ದೆಯಡಿ ನರೋಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ `FIR’ ದಾಖಲು.!

Published

on

ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಕೆ.ಎಸ್. ಈಶ್ವರಪ್ಪ ಅವರು, ಸಿಎಂ ಸಿದ್ದರಾಮಯ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರಿಗೆ ಶೇಕಡಾ 4 ರಷ್ಟು ಮಿಸಲಾತಿ ಘೋಷಣೆ ಮಾಡಲು ಹೊರಟಿದ್ದಾರೆ. ಇವರೇನು ಹಿಂದುಸ್ಥಾನವನ್ನು ಪಾಕಿಸ್ಥಾನ ಮಾಡಲು ಹೊರಟಿದ್ದಾರ? ಇದು ಹೀಗೆ ಮುಂದುವರೆದರೆ ಕಾಂಗ್ರೆಸಿಗರನ್ನು ಹುಡುಕಿ ಹೊಡೆದು ಕೊಲ್ಲುವಂತಹ ದಿನಗಳು ಬಂದರೂ ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಹೆಚ್.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿದ್ದಾರೆ.

Continue Reading

LATEST NEWS

ವರನ ಸೋಗಿನಲ್ಲಿ ಯುವತಿಯರಿಗೆ ವಂಚನೆ; ಆರೋಪಿ ಬಂಧನ

Published

on

ಮಂಗಳೂರು/ದಾವಣಗೆರೆ: ವರನ ಸೋಗಿನಲ್ಲಿ ಅಮಾಯಕ ಯುವತಿಯರಿಗೆ 62 ಲಕ್ಷ ರೂ. ವಂಚಿಸಿದ್ದ ಆರೋಪಿಯನ್ನು ದಾವಣಗೆರೆ ಸಿಇಎನ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

 

ಮಂಡ್ಯ ತಾಲೂಕಿನ ಮಾಚನಹಳ್ಳಿ ನಿವಾಸಿ ಎಂ.ಮಧು (31) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ವಧು-ವರ ಶೋಧ ತಾಣಗಳಾದ ಮ್ಯಾಟ್ರಿಮೋನಿಯಲ್ಲಿ ಯುವತಿಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದನು. ಬಳಿಕ, “ನಿಮಗೆ ಸರ್ಕಾರಿ ನೌಕರಿ ಕೊಡಿಸಿ, ನಂತರ ಮದುವೆ ಆಗುತ್ತೇನೆ” ಎಂದು ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ್ದಾನೆ.

ದಾವಣಗೆರೆ ಮೂಲದ ಯುವತಿಯೊಬ್ಬಳಿಗೆ ಮೈಸೂರು ರೇಲ್ವೆ ವರ್ಕಶಾಪ್​ನಲ್ಲಿ ಕೆಲಸ ಕೊಡಿಸುವುದಾಗಿ ಆರೋಪಿ ಮಧು 21 ಲಕ್ಷ ರೂಪಾಯಿ ತನ್ನ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡಿದ್ದಾನೆ. ಹಣ ಖಾತೆಗೆ ಬಂದ ಬಳಿಕ ಸಂಪರ್ಕಕ್ಕೆ ಸಿಕ್ಕಿಲ್ಲ. ತಾನು ವಂಚನೆಗೆ ಒಳಗಾಗಿರವುದಾಗು ಯುವತಿ ದಾವಣಗೆರೆ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ.

ಆರೋಪಿ ಮಧು, ಚಿಕ್ಕಮಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಯುವತಿಯಿಂದ 3.80 ಲಕ್ಷ ರೂ., ಮಂಡ್ಯ ಸಿಇಎನ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿನ ಯುವತಿಯಿಂದ 26 ಲಕ್ಷ ರೂ., ಬೆಂಗಳೂರು ಕಾಟನ್ ಪೇಟ್​ ಠಾಣೆ ವ್ಯಾಪ್ತಿಯಲ್ಲಿನ ಯುವತಿಯಿಂದ 2.8 ಲಕ್ಷ ರೂ., ಮೈಸೂರು ಸಿಇಎನ್ ಠಾಣೆಯ ಸೇರಿದಂತೆ ಏಳು ‌ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿನ ಯುವತಿರಿಂದ ಒಟ್ಟು 62 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.

ಮ್ಯಾಟ್ರಿಮೋನಿಗಳ ಮೂಲಕ ವಂಚಕರು ಪರಿಚಯ ಮಾಡಿಕೊಂಡು ಹೆಣ್ಣು ಮಕ್ಕಳಿಗೆ ನಯವಾಗಿ ಮಾತನಾಡಿ ವಂಚಿಸುವವರ ಬಗ್ಗೆ ಹಾಗೂ ನೌಕರಿ ಕೊಡಿಸುವುದಾಗಿ ನಂಬಿಸಿ ಹಣ ಹಾಕಿಸಿಕೊಂಡು ವಂಚಿಸುವವರ ಬಗ್ಗೆ ಜಾಗೃತರಾಗಿರಿ. ಇಂತಹ ಘಟನೆಗಳು ಕಂಡುಬಂದರೆ ಕೂಡಲೇ ಸ್ಥಳೀಯ ಠಾಣೆಗೆ ಹೋಗಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Continue Reading

LATEST NEWS

Trending

Exit mobile version