Connect with us

    LATEST NEWS

    ರೈತರ ಮೇಲೆ ಕಾರು ಹರಿಸಿದ ಆರೋಪ: ಕೇಂದ್ರ ಸಚಿವರ ಮಗನ ವಿರುದ್ಧ ಕೊಲೆ ಪ್ರಕರಣ ದಾಖಲು

    Published

    on

    ಲಖನೌ: ನಿನ್ನೆ ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ ಆರೋಪದ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್​ ಕುಮಾರ್​ ಮಿಶ್ರಾ ಅವರ ಪುತ್ರ ಆಶೀಶ್​ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.


    ಆಶೀಶ್​ ಮಿಶ್ರಾ ಸೇರಿ ಹಲವರ ಹೆಸರು ಎಫ್ಐಆರ್​​ನಲ್ಲಿದೆ.

    ನಿನ್ನೆ ಹಲವು ರೈತರು ಉತ್ತರಪ್ರದೇಶ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಕೇಂದ್ರ ಸಚಿವ ಅಜಯ್​ ಮಿಶ್ರಾ ಭೇಟಿ ವಿರೋಧಿಸಿ ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

    ಆ ಸಮಯದಲ್ಲಿ ಅವರ ಮೇಲೆ ಎರಡು ಕಾರುಗಳು ಹರಿದಿದ್ದವು. ಅದು ಅಜಯ್​ ಮಿಶ್ರಾ ಬೆಂಗಾವಲು ಪಡೆಯ ವಾಹನ ಮತ್ತು ಆಶೀಶ್​ ಮಿಶ್ರಾರ ಕಾರು ಎಂದೂ ವರದಿಯಾಗಿತ್ತು.

    ಕಾರು ಹರಿದು ಇಬ್ಬರು ರೈತರು ಮೃತಪಟ್ಟ ಬೆನ್ನಲ್ಲೇ ಸ್ಥಳದಲ್ಲಿ ಹಿಂಸಾಚಾರ ಭುಗಿಲೆದ್ದು,

    ಒಬ್ಬ ಪತ್ರಕರ್ತ, ನಾಲ್ವರು ರೈತರು ಸೇರಿ ಎಂಟು ಮಂದಿ ಜೀವ ಕಳೆದುಕೊಂಡಿದ್ದಾರೆ. ಈಗ ಕೂಡ ಲಖಿಂಪುರ ಖೇರಿಯಲ್ಲಿ ಉದ್ವಿಗ ಪರಿಸ್ಥಿತಿ ಇದ್ದು, ಪೊಲೀಸ್​ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.


    ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರೈತ ಒಕ್ಕೂಟದ ಮುಖಂಡ ಡಾ. ದರ್ಶನ್​ ಪಾಲ್​, ರೈತರ ಮೇಲೆ ಹರಿದ ಕಾರಿನಲ್ಲಿ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇದ್ದಿದ್ದನ್ನು

    ನಾವು ನೋಡಿದ್ದೇವೆ ಎಂದಿದ್ದಾರೆ. ನಾವು ಪ್ರತಿಭಟನೆ ನಡೆಸುವ ಸ್ಥಳಕ್ಕೆ ಆಗಮಿಸಲು ಮುಂದಾಗಿದ್ದ ಸಚಿವರ ಭೇಟಿ ವಿರೋಧಿಸಿದ್ದೆವು. ಹೆಲಿಪ್ಯಾಡ್​​ಗೆ ಘೇರಾವ್​ ಹಾಕುವ ಪ್ರಯತ್ನ ನಮ್ಮದಾಗಿತ್ತು.

    ಈ ಪ್ರತಿಭಟನೆ ಮುಗಿಸಿ ರೈತರೆಲ್ಲ ವಾಪಸ್​ ಹೋಗುವ ವೇಳೆ ಒಟ್ಟು ಮೂರು ಕಾರುಗಳು ರೈತರ ಕಡೆಗೆ ಬಂದವು.

    ಒಬ್ಬ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸಲಿಲ್ಲ ಎಂದು ಹೇಳಿದ್ದಾರೆ.

    ಆದರೆ ಅಜಯ್​ ಮಿಶ್ರಾ ಇದರಲ್ಲಿ ತನ್ನ ಮಗನ ತಪ್ಪಿಲ್ಲ ಎಂದು ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿದ ಸಂದರ್ಭದಲ್ಲಿ ಅಲ್ಲಿ ನನ್ನ ಪುತ್ರ ಇರಲಿಲ್ಲ.

    ಕಾರು ಹರಿದ ಸಂದರ್ಭದಲ್ಲಿ ಆ ಸ್ಥಳದಲ್ಲಿ ಅದೆಷ್ಟು ಕೆಟ್ಟಪರಿಸ್ಥಿತಿ ಇತ್ತು.

    ದುಷ್ಕರ್ಮಿಗಳು ಖಡ್ಗ, ಬಡಿಗೆಗಳನ್ನು ಹಿಡಿದು ಅಲ್ಲಿದ್ದವರಿಗೆಲ್ಲ ಥಳಿಸುತ್ತಿದ್ದರು. ಹಾಗೊಮ್ಮ ಆ ಸಂದರ್ಭದಲ್ಲಿ ನನ್ನ ಪುತ್ರ ಅಲ್ಲಿದ್ದಿದ್ದರೆ,

    ಅವನೂ ಕೂಡ ಜೀವಂತ ಬರುತ್ತಿರಲಿಲ್ಲ ಎಂದಿದ್ದಾರೆ.
    ಆಶೀಶ್​ ಮಿಶ್ರಾ ಹೇಳಿದ್ದೇನು?
    ಘಟನೆ ನಡೆದಾಗ ನಾನು ಲಖಿಂಪುರ ಖೇರಿಯಲ್ಲಿ ಇರಲಿಲ್ಲ. ಆ ಸಂದರ್ಭದಲ್ಲಿ ಬನ್ಬೀರ್​ಪುರದಲ್ಲಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದೆ.

    ಬೆಳಗ್ಗೆ 9ಗಂಟೆಯಿಂದಲೂ ನಾನು ಅಲ್ಲಿಯೇ ಇದ್ದೆ. ನನ್ನ ವಿರುದ್ಧ ಮಾಡಲಾದ ಆರೋಪಗಳು ಆಧಾರ ರಹಿತವಾಗಿವೆ.

    ನನ್ನ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಅಷ್ಟಕ್ಕೂ ಅಲ್ಲಿದ್ದ ಕೆಲವರೇ ನಮ್ಮ ಕಾರ್ಯಕರ್ತರಿಗೆ ಥಳಿಸಿದ್ದಾರೆ. ಹತ್ಯೆ ಮಾಡಿದ್ದಾರೆ ಎಂದು ಆಶೀಶ್​ ಮಿಶ್ರಾ ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.
    ಲಖೀಮ್​ಪುರ್​ನಲ್ಲಿ ನಡೆದ ಹಿಂಸಾಚಾರದಲ್ಲಿ 4 ಜನ ರೈತರು ಸೇರಿದಂತೆ ಒಟ್ಟು 8 ಜನ ಮೃತಪಟ್ಟಿದ್ದರು.

    ಆದರೆ, ನಿನ್ನೆ ಘಟನೆಯ ನಂತರ ಕಾಣೆಯಾಗಿದ್ದ ಸ್ಥಳೀಯ ಪತ್ರಕರ್ತನೊಬ್ಬ ಇಂದು ಮೃತಪಟ್ಟಿರುವುದು ಧೃಡವಾಗಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿದೆ.
    ಈ ನಡುವೆ ಇಂದು ಮುಂಜಾನೆ ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ್ದ ಪ್ರಿಯಾಂಕ ಗಾಂಧಿಯನ್ನು ಬಂಧಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರನ್ನು ಗೃಹ ಬಂಧನಕ್ಕೆ ಒಳಪಡಿಸಲಾಗಿತ್ತು.

    ಆದರೆ, ಅಖಿಲೇಶ್ ಯಾದವ್ ಘಟನೆಯನ್ನು ಖಂಡಿಸಿ ರಸ್ತೆಗಿಳಿದು ಹೋರಾಟ ನಡೆಸಿದ ಪರಿಣಾಮ ಇದೀಗ ಅವರನ್ನೂ ಸಹ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

    Published

    on

    ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

    Continue Reading

    DAKSHINA KANNADA

    ಅರ್ಜುನ್​ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!

    Published

    on

    ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್​ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.

    ಇಂದು ಅರ್ಜುನ್​ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್​​ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.

     

    ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.

    ಇಂದು ಅರ್ಜುನ್​ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.

    Continue Reading

    LATEST NEWS

    Trending