Saturday, November 27, 2021

ಉಡುಪಿಯ ‘ದುರ್ಗಾ ದೌಡ್’ ಪಾದಾಯಾತ್ರೆ: ಸಂಘಟಕರ ವಿರುದ್ಧ ಎಫ್‌ಐಆರ್‌

ಉಡುಪಿ: ಕಳೆದ ಶುಕ್ರವಾರ ಉಡುಪಿಯಲ್ಲಿ ‘ದುರ್ಗಾ ದೌಡ್’ ಪಾದಯಾತ್ರೆ ನಡೆಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಉಡುಪಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಯಾವುದೇ ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಪಾದಯಾತ್ರೆ ಯನ್ನು ನಡೆಸಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ಉಡುಪಿ ನಗರಸಭೆ ಪೌರಾಯುಕ್ತ ಹಾಗೂ ಕೋವಿಡ್ ನೋಡೆಲ್ ಅಧಿಕಾರಿ ಡಾ.ಉದಯ ಕುಮಾರ್ ಶೆಟ್ಟಿ ದೂರು ನೀಡಿದ್ದಾರೆ.
ಅದರಂತೆ ಹಿಂಜಾವೇ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 188, 269 ಐಪಿಸಿ ಕಲಂ: 5(1), 5(4) ದ ಕರ್ನಾಟಕ ಅಪಿಡಮಿಕ್ ಡಿಸಿಸ್ ಆ್ಯಕ್ಟ್ 2020ರಂತೆ ಪ್ರಕರಣ ದಾಖಲಿಸಲಾಗಿದೆ.


ಸರಕಾರದ ಆದೇಶದಂತೆ 400ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ.

ಅಲ್ಲದೆ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಈ ಎಲ್ಲ ಕಾನೂನು ಉಲ್ಲಂಘಿಸಿ ಸಾವಿರಾರು ಮಂದಿಯನ್ನು ಸೇರಿಸಿ ಮೆರವಣಿಗೆ ಮಾಡಲಾಗಿದೆ.

ನಿಷೇಧಿತ ಪ್ರದೇಶಗಳಾಗಿರುವ ಕ್ಲಾಕ್ ಟವರ್ ಬಳಿ ಕೂಡ ಮೆರವಣಿಗೆ ನಡೆಸಲಾಗಿದೆ. ಅಲ್ಲದೆ ವಾಹನ ಸಂಚಾರಕ್ಕೂ ತಡೆಯೊಡ್ಡಲಾಗಿದೆ.

ಈ ಹಿನ್ನೆಲೆಯಲ್ಲಿ ನೋಡೆಲ್ ಅಧಿಕಾರಿ ನೀಡಿದ ದೂರಿನಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಮುಖರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...