ಬೆಂಗಳೂರು: ‘ಕಾಂತಾರ’ ಚಿತ್ರದಲ್ಲಿ ಬರುವ ದೈವಾರಾಧನೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಬೆಂಗಳೂರಿನ ಸಾರ್ವಜನಿಕರು ನೀಡಿದ ದೂರಿನಂತೆ ಶೇಷಾದ್ರಿಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನಟ ಚೇತನ್ ಅವರು ‘ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ’ ಎನ್ನುವ ಹೇಳಿಕೆ ನೀಡಿ ಜನರ ಆಕ್ರೋಶಕ್ಕೆ ಕಾರಣವಾಗಿದ್ದರು.
ದೂರು ದಾಖಲಾದ ಹಿನ್ನೆಲೆ ನಟ ಚೇತನ್‌ಗೆ ಪೊಲೀಸರು ನೊಟಿಸ್ ನೀಡಿದ್ದು ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.