Saturday, September 18, 2021

ಅಮೇರಿಕಾದಲ್ಲಿ ಕಾಳ್ಗಿಚ್ಚು: ಹಲವು ಗ್ರಾಮದಿಂದ ಜನ-ಜಾನುವರು ಸ್ಥಳಾಂತರ

ಸ್ಯಾನ್​ಫ್ರಾನ್ಸಿಸ್​ಕೊ: ಅಮೆರಿಕದ ಹಲವೆಡೆ ಉಷ್ಣಾಂಶ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಒಳನಾಡು ಮತ್ತು ಮರುಭೂಮಿ ಪ್ರದೇಶಗಳಲ್ಲಿ ಉಷ್ಣಾಂಶ ಒಂದೇ ಸಮನೆ ಏರಿಕೆ ಕಾಣುತ್ತಿದೆ. ಹಲವೆಡೆ ಬೆಂಕಿಯ ಕೆನ್ನಾಲಿಗೆ ಹಚ್ಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹಲವು ಗ್ರಾಮ, ನಗರಗಳಿಂದ ಜನರನ್ನು ಸ್ಥಳಾಂತರಿಸಲಾಗುತ್ತಿದೆ.

ಅಮೆರಿಕದ ಪಶ್ಚಿಮ ಪ್ರಾಂತ್ಯಗಳಲ್ಲಿ ಬೆಂಕಿ ಹೆಚ್ಚಾಗಿದ್ದು, ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯಲ್ಲಿ ಶನಿವಾರ ಉಷ್ಣಾಂಶ 53 ಡಿಗ್ರಿ ಸೆಂಟಿಗ್ರೇಡ್ ತಲುಪಿತ್ತು. ಭಾನುವಾರ 54 ಡಿಗ್ರಿ ಸೆಂಟಿಗ್ರೇಡ್​ ಉಷ್ಣಾಂಶ ವರದಿಯಾಗಿತ್ತು. ಜುಲೈ 1913ರಲ್ಲಿ ದಾಖಲಾಗಿದ್ದ 57 ಡಿಗ್ರಿ ಉಷ್ಣಾಂಶ ಈವರೆಗಿನ ಅತ್ಯುಧಿಕ ಉಷ್ಣಾಂಶ ಎನಿಸಿದೆ.

ನೆವಾಡ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕುರುಚಲು ಕಾಡುಗಳಲ್ಲಿ ಕಾಳ್ಗಿಚ್ಚು ವ್ಯಾಪಿಸಿದೆ. ದಟ್ಟಕಾಡಿನತ್ತ ವೇಗವಾಗಿ ಮುನ್ನುಗ್ಗುತ್ತಿರುವ ಕಾಳ್ಗಿಚ್ಚಿನ ವೇಗವನ್ನು ಕಡಿಮೆ ಮಾಡುವ ಉಪಾಯಗಳು ಫಲ ನೀಡುತ್ತಿಲ್ಲ. ನೆವಾಡ ರಾಜ್ಯದ ವಾಶೊಯ್ ಕೌಂಟಿ ಪ್ರದೇಶದಲ್ಲಿ ಜನರ ಜೀವ ಮತ್ತು ಆಸ್ತಿಗೆ ಧಕ್ಕೆಯೊದಗುವ ಅಪಾಯ ಎದುರಾಗಿದೆ. ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ.

ಈ ಪ್ರದೇಶದಲ್ಲಿ ಬೀಸುತ್ತಿರುವ ಪ್ರಬಲ ಗಾಳಿಯು ಕಾಳ್ಗಿಚ್ಚು ವೇಗವಾಗಿ ಹಬ್ಬಲು ನೆರವಾಗುತ್ತಿದೆ. ಕೇವಲ ಮೂರು ದಿನಗಳಲ್ಲಿ 311 ಚದರ ಕಿಲೋಮೀಟರ್​ಗಳಷ್ಟು ಪ್ರದೇಶಕ್ಕೆ ಕಾಳ್ಗಿಚ್ಚು ವಿಸ್ತರಿಸಿದೆ. ವಾತಾವರಣದ ಉಷ್ಣಾಂಶ ಮತ್ತು ಕಾಳ್ಜಿಚ್ಚಿನಿಂದ ಉಷ್ಣ ಸಂಬಂಧಿ ಕಾಯಿಲೆಗಳು ಹೆಚ್ಚಾಗಬಹುದು ಎಂದು ರಾಷ್ಟ್ರೀಯ ಹವಾಮಾನ ಸೇವೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...