Saturday, November 27, 2021

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ- ಪ್ರಾಣ ಉಳಿಸಿಕೊಳ್ಳಲು 19 ನೇ ಮಹಡಿಯಿಂದ ಜಿಗಿದ ವ್ಯಕ್ತಿ ಸಾವು

ಮುಂಬೈ: ಇಲ್ಲಿನ ಅಪಾರ್ಟ್​​ಮೆಂಟ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮುಂಬೈ ಕರೇ ರಸ್ತೆಯಲಿರುವ ಲೋವರ್ ಪರೇಲ್ ಏರಿಯಾದಲ್ಲಿರುವ 60 ಮಹಡಿ ಹೊಂದಿರುವ ಅವಿಘ್ನ ಅಪಾರ್ಟ್‌ಮೆಂಟ್​​ನ 19 ನೇ ಮಹಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು,ನೋಡ ನೋಡುತ್ತಿದ್ದಂತೆ ಫ್ಲ್ಯಾಟ್ ಹೊತ್ತಿ ಉರಿದಿವೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

ಇದ್ದಕ್ಕಿದ್ದಂತೆ 19ನೇ ಅಂತಸ್ತಿನಿಂದ ದಟ್ಟ ಹೊಗೆ ಬಂದಾಗ ಅಗ್ನಿ ಅವಘಡ ಬೆಳಕಿಗೆ ಬಂದಿದೆ. ಈ ಅಂತಸ್ತಿನಲ್ಲಿದ್ದ ವ್ಯಕ್ತಿ ಅಗ್ನಿ ಅನಾಹುತದಿಂದ ಬಚಾವಾಗಲು ಉಪಾಯವಿಲ್ಲದೇ ಕಟ್ಟಡದಿಂದ ಕೆಳಗೆ ಜಿಗಿದಿದ್ದಾನೆ.

ಮೃತ ವ್ಯಕ್ತಿಯನ್ನು30 ವರ್ಷದ ಅರುಣ್ ತಿವಾರಿ ಎಂದು ಗುರುತ್ತಿಸಲಾಗಿದೆ.

ಅಗ್ನಿ ಅವಘಡದ ಸ್ಥಳದಿಂದ ಕೆಳಗೆ ಬೀಳುತ್ತಿರುವ ದೃಶ್ಯ ಕೂಡ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಹುಮಹಡಿ ಕಟ್ಟಡದಿಂದ ದಟ್ಟ ಹೊಗೆ ಬರುತ್ತಿದ್ದು ಕಟ್ಟಡದೊಳಗೆ ಎಷ್ಟು ಮಂದಿ ಸಿಲುಕಿದ್ದಾರೆ ಎಂಬ ಖಚಿತ ಮಾಹಿತಿ ಇನ್ನು ಲಭ್ಯವಾಗಿಲ್ಲ.

14 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...