Friday, July 1, 2022

ಮುಲ್ಕಿ ಕೊಳ್ನಾಡ್ ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅಕಸ್ಮಿಕ..! ಪಾರಾದ ಚಾಲಕ..

ಮುಲ್ಕಿ ಕೊಳ್ನಾಡ್ ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅಕಸ್ಮಿಕ..! ಪಾರಾದ ಚಾಲಕ..

ಮಂಗಳೂರು :ಮಂಗಳೂರು ಹೊರವಲಯದ  ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ಚಲಿಸುತ್ತಿದ್ದಂತೆಯೇ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಈ ಸಂದರ್ಭ ಎಚ್ಚೆತ್ತ ಕಾರಿನ ಚಾಲಕ ಕಾರ್ನಾಡು ನಿವಾಸಿ ಮಹಮ್ಮದ್ ಫಯಾಝ್ ಎಂಬುವವರು ಕಾರು ಬದಿಗೆ ಸರಿಸಿ ತಕ್ಷಣ ಕಾರಿನಿಂದ ಹೊರ ಬಂದಿದ್ದಾರೆ. ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣ ಹೊತ್ತಿ ಉರಿಯಲಾರಂಭಿಸಿದೆ.

ಘಟನೆಯಿಂದ ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಗೊಂಡಿದೆ. ಕೂಡಲೇ ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಿಸಿ ಏಕಮುಖ ರಸ್ತೆಯಲ್ಲಿಯೇ ವಾಹನ ಸಂಚರಿಸುವಂತೆ ಅನುವು ಮಾಡಿದರು.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಹಳೆಯಂಗಡಿಯ ಪೂಜಾ ಅರೇಂಜರ್ಸ್ ಮಾಲಕ ಜಯಕೃಷ್ಣ ಸುವರ್ಣ ಎಂಬುವವರು ತಮ್ಮ ಟ್ಯಾಂಕರ್ ನಲ್ಲಿ ನೀರು ತರಿಸಿ ಕಾರಿಗೆ ಹೊತ್ತಿದ್ದ ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದಾರೆ,

ಬಳಿಕ ಕೆಲ ಹೊತ್ತಿನಲ್ಲಿ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here

Hot Topics

ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಕರ್ಯ ನೀಡದಿದ್ದರೆ ಉಗ್ರ ಹೋರಾಟ

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಬಲ್ಮಠ ಸರಕಾರಿ ಹಿರಿಯ ಪ್ರಾಥಮಿಕ (ಟಿಟಿಐ) ಶಾಲೆಯಲ್ಲಿ ಯಾವುದೇ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೆ ಅಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.ಈ ಶಾಲೆಯಲ್ಲಿ ಕಲಿಯುತ್ತಿರುವ ಒಂದನೇ ತರಗತಿಯಿಂದ ಏಳನೇ...

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ-ಸ್ತಬ್ಧರಾದ ಜನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ.ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು...