Connect with us

    International news

    ಟರ್ಕಿಯ ಸ್ಕಿ ರೆಸಾರ್ಟ್‌ನಲ್ಲಿ ಅಗ್ನಿ ಅವಘಡ; ಮೃತರ ಸಂಖ್ಯೆ 76ಕ್ಕೆ ಏರಿಕೆ

    Published

    on

    ಮಂಗಳೂರು/ ಅಂಕಾರ : ವಾಯುವ್ಯ ಟರ್ಕಿಯಲ್ಲಿನ ಜನಪ್ರಿಯ ಸ್ಕೀ ರೆಸಾರ್ಟ್‌ನಲ್ಲಿ ನಡೆದ ಭಾರೀ ಅಗ್ನಿ ಅವಘಡದಲ್ಲಿ ಮೃತರ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

    ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್‌ನಲ್ಲಿರುವ 12 ಅಂತಸ್ಥಿತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಹೋಟೆಲ್ ಬೆಂಕಿಗೆ ಆಹುತಿಯಾಯಿತು. ಬೆಂಕಿಯ ಕಾರಣ ಇನ್ನೂ ತಿಳಿದುಬಂದಿಲ್ಲ.

    ಘಟನೆಗೆ ಪ್ರಮುಖ ಕಾರಣ ಇನ್ನೂ ತಿಳಿದುಬಂದಿಲ್ಲ. ರೆಸಾರ್ಟ್‌ನಲ್ಲಿದ್ದ ಇಬ್ಬರೂ ಭಯಭೀತರಾಗಿ ಕಟ್ಟಡದಿಂದ ಹಾರಿ ಸಾವನ್ನಪ್ಪಿದ್ದಾರೆ. ಕೆಲವು ಜನರು ಬೆಡ್‌ರೂಂನ ಬೆಡ್‌ಶೀಟ್‌ಗಳನ್ನು ಬಳಸಿ ತಮ್ಮ ಕೋಣೆಗಳಿಂದ ಕೆಳಗೆ ಇಳಿಯಲು ಪ್ರಯತ್ನಿಸಿದ್ದಾರೆ. ಹೋಟೆಲ್‌ನಲ್ಲಿ 234 ಅತಿಥಿಗಳು ತಂಗಿದ್ದರು ಎಂದು ಸ್ಥಳಿಯ ಮಾಧ್ಯಮಗಳು ಹೇಳಿವೆ.

    ಇದನ್ನೂ ಓದಿ: ಅರೆಬೈಲ್ ಘಾಟ್‌ನಲ್ಲಿ ತರಕಾರಿ ತುಂಬಿದ್ದ ಲಾರಿ ಪಲ್ಟಿ: 9 ಜನರ ಸಾವು

    ಅವಘಡದಲ್ಲಿ ಒಟ್ಟು 76 ಮಂದಿ ಸಾವನ್ನಪ್ಪಿದ್ದು, 51ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಹೋಟೆಲ್‌ನಲ್ಲಿ 234 ಅತಿಥಿಗಳು ತಂಗಿದ್ದರು. ಕಟ್ಟಡ ಕುಸಿಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದು ಹೋಟೆಲ್‌ನಲ್ಲಿದ್ದವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

    ಈ ನಡುವೆ ಅಗ್ನಿ ಅವಘಡಕ್ಕೆ ಕಾರಣ ಏನೆಂಬ ಬಗ್ಗೆ ತನಿಖೆ ಮುಂದುವರೆದಿದ್ದು, ತನಿಖೆಗಾಗಿ 6 ಪ್ರಾಸಿಕ್ಯೂಟರ್‌ಗಳನ್ನು ಸರ್ಕಾರ ನೇಮಿಸಿದೆ.

    ಮತ್ತೊಂದು ಅವಘಡ

    ಕೇಂದ್ರ ಟರ್ಕಿಯಲ್ಲಿ ಇರುವ ಮತ್ತೊಂದು ಸ್ಕಿ ರೆಸಾರ್ಟ್‌ನ ಹೋಟೆಲ್‌ವೊಂದರಲ್ಲಿ ಅಡುಗೆ ಅನಿಲ ಸ್ಪೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

     

    International news

    ಇಂದು ಟ್ರಂಪ್ ಪದಗ್ರಹಣ; ಎಪ್ರಿಲ್‌ನಲ್ಲಿ ಭಾರತಕ್ಕೆ ?

    Published

    on

    ಮಂಗಳೂರು/ವಾಷಿಂಗ್ಟನ್ : ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸಲಿದ್ದು, ಎಪ್ರಿಲ್‌ನಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ.

    ಟ್ರಂಪ್ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ಶ್ವೇತಭವನದಲ್ಲಿ 100ಕ್ಕೂ ಅಧಿಕ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಲಿದ್ದಾರೆ. ಟ್ರಂಪ್ ಅವರ ತಂಡವು ಈಗಾಗಲೇ ಅಗತ್ಯ ಸಿದ್ದತೆ ಮಾಡಿಕೊಂಡಿದ್ದು, ಓವಲ್ ಕಚೇರಿಯಲ್ಲಿರುವ ಡೆಸ್ಕ್‌ನಲ್ಲಿ ಆದೇಶ ಪ್ರತಿಗಳು ಸಿದ್ದಗೊಂಡಿದೆ. ಎರಡನೇ ಅವಧಿಗೆ ಅಧ್ಯಕ್ಷರಾಗುತ್ತಿದ್ದಂತೆಯೇ, ಒಂದು ನಿಮಿಷವೂ ವ್ಯರ್ಥ ಮಾಡದಂತೆ, ಚುನಾವಣೆ ಸಂದರ್ಭದಲ್ಲಿ ನೀಡಿದ ಹಲವು ಭರವಸೆಗಳನ್ನು ಈಡೇರಿಸುವ ನಿರೀಕ್ಷೆಗಳಿವೆ.

    ಟ್ರಂಪ್ ಭಾರತ ಪ್ರವಾಸ
    ಡೊನಾಲ್ಡ್ ಟ್ರಂಪ್ ಅವರು ಈ ವರ್ಷದ ಎಪ್ರಿಲ್‌ನಲ್ಲಿ ಭಾರತಕ್ಕೆ ಪ್ರವಾಸ ಕೈಗೊಳ್ಳುವ ಸಾಧ್ಯತೆಗಳಿವೆ. ಈ ಬಗ್ಗೆ ಅವರು ತಮ್ಮ ಸಲಹೆಗಾರರ ಜತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ತಿಂಗಳು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಮೆರಿಕ ಭೇಟಿ ವೇಳೆ ಈ ಕುರಿತು ಪ್ರಾಥಮಿಕ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

    ಚೀನ ಜತೆಗೆ ಉತ್ತಮ ಬಾಂಧವ್ಯ ಹೊಂದಲು ನಿರ್ಧರಿಸಿರುವ ಟ್ರಂಪ್, ಅಧಿಕಾರ ಸ್ವೀಕಾರ ಬಳಿಕ ಚೀನದ ರಾಜಧಾನಿ ಬೀಜಿಂಗ್‌ಗೆ ಭೇಟಿ ನೀಡಲು ಸಹ ಬಯಸಿರುವುದಾಗಿ ತಮ್ಮ ಸಲಹೆಗಾರರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

    ಭಾರತ ಕ್ವಾಡ್ ಶೃಂಗಸಭೆಯ ಆತಿಥ್ಯ
    ಭಾರತ, ಅಮೆರಿಕ, ಜಪಾನ್ ಒಳಗೊಂಡ ಕ್ವಾಡ್ ಶೃಂಗಸಭೆಯ ಆತಿಥ್ಯವನ್ನು ಈ ಬಾರಿ ಭಾರತ ವಹಿಸಲಿದೆ. ಹೀಗಾಗಿ ಟ್ರಂಪ್ ಭಾರತ ಭೇಟಿ ಎಪ್ರಿಲ್ ಅಥವಾ ಈ ವರ್ಷದ ಕೊನೆಗೆ ನಡೆಯಬಹುದು ಎನ್ನಲಾಗಿದೆ. ಜೊತೆಗೆ ಇದೇ ವರ್ಷದಲ್ಲಿ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೂಡ ಅಮೆರಿಕಕ್ಕೆ ಆಹ್ವಾನಿಸುವ ಸಾಧ್ಯತೆಗಳಿವೆ.

     

    Continue Reading

    International news

    ಪೆಟ್ರೋಲ್ ಟ್ಯಾಂಕರ್ ಸ್ಪೋ*ಟ: 70 ಮಂದಿ ಸಾ*ವು

    Published

    on

    ಮಂಗಳೂರು/ಮೈದುಗುರಿ (ನೈಜೀರಿಯಾ) : ಉತ್ತರ ನೈಜೀರಿಯಾದಲ್ಲಿ ಶನಿವಾರ ಪೆಟ್ರೋಲ್ ಟ್ಯಾಂಕರ್ ಸ್ಪೋ*ಟಗೊಂಡ ಪರಿಣಾಮ ಕನಿಷ್ಠ 70 ಜನ ಮೃ*ತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ದೇಶದ ರಾಷ್ಟ್ರೀಯ ತುರ್ತು ಏಜೆನ್ಸಿ ತಿಳಿಸಿದೆ.

    ವರದಿಗಳ ಪ್ರಕಾರ, ಘಟನೆಯಲ್ಲಿ 70ಕ್ಕೂ ಹೆಚ್ಚು ಮಂದಿ ಸಾ*ವಿಗೀಡಾಗಿದ್ದು, 56 ಜನ ಗಾಯಗೊಂಡಿದ್ದಾರೆ. 15ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿವೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಪ್ರಾಧಿಕಾರ ಹೇಳಿಕೆಯಲ್ಲಿ ತಿಳಿಸಿದೆ.

    ಇದನ್ನೂ ಓದಿ: ರಾಯಚೂರು ಡಿಸಿ ಆಗಿದ್ದವರು…ಸನ್ಯಾಸಿ ಆಗಿದ್ದು ಹೇಗೆ ?

    ಕಳೆದ ಅಕ್ಟೋಬರ್‌ನಲ್ಲಿ ಜಿಗಾವಾ ರಾಜ್ಯದಲ್ಲಿ ಇದೇ ರೀತಿಯ ಸ್ಪೋ*ಟ ಸಂಭವಿಸಿದ್ದು, 147 ಮಂದಿ ಸಾ*ವಿಗೀಡಾಗಿದ್ದರು.

     

    Continue Reading

    International news

    ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳ ಗುಂಡಿಕ್ಕಿ ಹ*ತ್ಯೆ

    Published

    on

    ಮಂಗಳೂರು/ಟೆಹ್ರಾನ್ : ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹ*ತ್ಯೆ ಮಾಡಿರುವ ಘಟನೆ ಟೆಹ್ರಾನ್‌ನಲ್ಲಿ ಇಂದು (ಶನಿವಾರ) ನಡೆದಿದೆ.

    ಈ ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ ‘ಮಿಜಾನ್’ ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ. ಆಯತುಲ್ಲಾ ಮೊಹಮ್ಮದ್ ಮೊಘಿಶೆ ಹಾಗೂ ಅಲಿ ರಝನಿ ಹ*ತ್ಯೆಗೀಡಾದ ನ್ಯಾಯಮೂರ್ತಿಗಳು.

    ಸುಪ್ರೀಂ ಕೋರ್ಟ್‌ನ ಹೊರಗೆ ನ್ಯಾಯಮೂರ್ತಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರ ಬಳಿಕ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಘಟನೆಯಲ್ಲಿ ನ್ಯಾಯಮೂರ್ತಿಯೊಬ್ಬರ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

    ಇದನ್ನೂ ಓದಿ: ಅಮೆರಿಕ ಗಡಗಡ… ಒಳಾಂಗಣದಲ್ಲಿ ಟ್ರಂಪ್ ಪ್ರಮಾಣವಚನ

    ನ್ಯಾಯಾಧೀಶರನ್ನು ಗುರಿಯಾಗಿಸಿಕೊಂಡು ದಾಳಿಗಳು ಅಪರೂಪವಾಗಿದ್ದರೂ, ಕಳೆದ ವರ್ಷ ಇರಾನ್‌ನ ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ಗುಂಡಿನ ದಾಳಿಗಳು ನಡೆದಿವೆ.

    ಏಪ್ರೀಲ್ 2023ರಲ್ಲಿ, ಅಬ್ಬಾಸ್‌ಅಲಿ ಸೊಲೈಮನಿ ಎಂದು ಗುರುತಿಸಲಾದ ಪ್ರಬಲ ಧರ್ಮಗುರುವನ್ನು ಕೂಡ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

    ಕಳೆದ ಅಕ್ಟೋಬರ್‌ನಲ್ಲಿ, ಕಜೆರೌನ್‌ನಲ್ಲಿ ಶುಕ್ರವಾರದ ಪ್ರಾರ್ಥನೆಯ ನೇತೃತ್ವ ವಹಿಸಿದ ಶಿಯಾ ಮುಸ್ಲಿಂ ಬೋಧಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.

    Continue Reading

    LATEST NEWS

    Trending