ಮಂಗಳೂರು: ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಇಲ್ಲಿನ ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು ಎನ್ನಲಾಗಿದೆ. ಆದರೆ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇನ್ನು ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಕದ್ರಿ ಅಗ್ನಿ ಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪಿಲಿಕುಳದ ಸಿಬ್ಬಂದಿಗಳೇ ಸೇರಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಅಂತಿಮವಾಗಿ ಅರ್ಧ ಗಂಟೆ ಬಳಿಕ ಕದ್ರಿ ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದೆ. ಅಲ್ಲದೆ ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ:ಪತಿ ಅ*ಗಲಿಕೆಯ ನೋ*ವಿನಿಂದ ಅಂಗನವಾಡಿ ಟೀಚರ್ ಬಾವಿಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಸೌಮ್ಯ(39) ಆ*ತ್ಮಹ*ತ್ಯೆ ಮಾಡಿಕೊಂಡ ಮಹಿಳೆ.
ಮಿಯ್ಯಾರು ಚರ್ಚ್ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಸೌಮ್ಯ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಪತಿ ಒಂದು ತಿಂಗಳ ಹಿಂದೆ ಮೃ*ತಪಟ್ಟಿದ್ದರು. ಇದರಿಂದ ಮಾ*ನಸಿಕವಾಗಿ ನೊಂದಿದ್ದ ಸೌಮ್ಯ, ಮನೆ ಸಮೀಪದ ಬಾವಿಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರು/ ಹಾಸನ : ಇಂಜಿನಿಯರ್ ವಧು ಶಿವಕುಮಾರ್ ಮತ್ತು ಮಂಡ್ಯ ನಿವಾಸಿ ಸಂಗೀತಾ ಅವರು ನವೆಂಬರ್ 11 ರಂದು ಸರಳ ವಿವಾಹವಾಗುವ ಮೂಲಕ ರೂ. 5 ಲಕ್ಷಕ್ಕೂ ಹೆಚ್ಚು ಹಣವನ್ನು ಉಳಿಸಿದ ಗಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ನಡೆದಿದೆ.
ಅತ್ಯಂತ ಅದ್ದೂರಿ
ಮತ್ತು ಆಡಂಭವಾಗಿ ಮದುವೆಯಾಗುವ ಈ ಕಾಲದಲ್ಲಿ, ಇಲ್ಲೊಂದು ಜೋಡಿ ಸರಳ ಮದುವೆಯಾಗಿದ್ದಾರೆ. ಜೊತೆಗೆ ತಮಗೆ ಬಂದ ಹಣದಿಂದ ವಿಶೇಷ ಕೊಡುಗೆ ಕೂಡ ನೀಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಈ ನವಜೋಡಿ ಉಳಿಸಿದ 5 ಲಕ್ಷಕ್ಕೂ ಹೆಚ್ಚಿನ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನಿಡುವ ಮೂಲಕ ಸಮಾಜ ಸೇವೆ ಗೈದಿದ್ದಾರೆ. ಈ ಸತ್ಕಾರ್ಯಕ್ಕೆ ನವಜೋಡಿಗೆ ರೈತಪರ ಹೋರಾಟಗಾರರಾದ ತಾತ ಹೊ.ತಿ.ಹುಚ್ಚಪ್ಪ ಪ್ರೇರಣೆ ಎಂದು ಹೇಳಿದ್ದಾರೆ.
ಹೊನ್ನವಳ್ಳಿ ಗ್ರಾಮದಲ್ಲಿ ಹೊ.ತಿ.ಹುಚ್ಚಪ್ಪ ತಾತ ದತ್ತು ಪಡೆದಿದ್ದ ಶಾಲೆ ಸೇರಿದಂತೆ ತಾಲೂಕಿನ ಕಸಬ ಹೋಬಳಿಯ 26 ಶಾಲೆಗಳಿಗೆ ಉಚಿತವಾಗಿ ಶುದ್ಧ ನೀರಿನ ಯಂತ್ರವನ್ನು ನೀಡಿದ್ದಾರೆ.
ಮಂಗಳೂರು : ‘ಪರಸಂಗದ ಗೆಂಡೆತಿಮ್ಮ’ ಸಿನಿಮಾದಲ್ಲಿ ಮರಕಣಿ ಪಾತ್ರದಲ್ಲಿ ನಟಿಸಿ ಜನಮನ ಗೆದ್ದಿದ್ದ ರೀಟಾ ರಾಧಾಕೃಷ್ಣ ಆಂಚನ್ ಬುಧವಾರ ನಿ*ಧನರಾದರು. ಅವರಿಗೆ 68 ವರ್ಷ ವಯಸ್ಸಾಗಿತ್ತು. ಕನ್ನಡ ಜೊತೆಗೆ ಅವರು ಹಿಂದಿ, ಪಂಜಾಬಿ ಹಾಗೂ ಗುಜರಾತಿ ಭಾಷೆಗಳ ಸಿನಿಮಾಗಳಲ್ಲಿ ನಟಿಸಿ ಖ್ಯಾತರಾಗಿದ್ದರು. ರೀಟಾ ಅಂಚನ್ ಕಳೆದ ಹಲವು ದಿನಗಳಿಂದ ಅ*ನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಮರಕಣಿಯಾಗಿ ಫೇಮಸ್ :
ನೋಟದಾಗೆ ನಗೆಯ ಮೀಟಿ…ಈ ಹಾಡು ಯಾರಿಗೆ ತಾನೆ ಗೊತ್ತಿಲ್ಲ. 1978ರಲ್ಲಿ ಲೋಕೇಶ್ ಮುಖ್ಯಭೂಮಿಕೆಯಲ್ಲಿದ್ದ ‘ಪರಸಂಗದ ಗೆಂಡೆತಿಮ್ಮ’ ಸಿನಿಮಾದ ಈ ಹಾಡು ಇಂದಿಗೂ ಜೀ*ವಂತ. ಈ ಚಿತ್ರದಲ್ಲಿ ಮರಕಣಿಯಾಗಿ ನಟಿಸಿದ್ದವರು ಬೇರ್ಯಾರೂ ಅಲ್ಲ. ರೀಟಾ ರಾಧಾಕೃಷ್ಣ ಅಂಚನ್ ಅವರು. ಈ ಸಿನಿಮಾದ ನಟನೆಗಾಗಿ ಅವರು ಸಾಕಷ್ಟು ಪ್ರಶಸ್ತಿಗಳನ್ನೂ ಪಡೆದುಕೊಂಡಿದ್ದರು
ಬಟ್ಟಲು ಕಂಗಳ ಚೆಲುವೆ ರೀಟಾ ಈ ಸಿನಿಮಾ ಮೂಲಕ ಜನಮನಸೂರೆಗೊಂಡಿದ್ದಾರೆ. ಪರಭಾಷಾ ಚಿತ್ರಗಳಲ್ಲೂ ಕಂಗೊಳಿಸಿದ್ದ ನಟಿ, ಏನ್ ಎನಾದರ್, ಬದ್ನಾಂ, ಗರ್ಲ್ ಜವಾನ್ ಹೋಗಯಾ, ಆತ್ಮ, ಫರ್ಜ್ ಊರ್ ಪ್ಯಾರ್ ಮತ್ತು ವಿಶು ಕುಮಾರ್ ಅವರ ಕೋಸ್ಟಲ್, ಗಿರೀಶ್ ಕಾರ್ನಾಡ್ ಅವರ ಕನಕಾಂಬರ ಮುಂತಾದ ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
ಬಿಲ್ಲವರ ಸಂಘದ ಮಾಜಿ ಅಧ್ಯಕ್ಷ ಮತ್ತು ಟಾಟಾ ಕಂಪನಿಯಲ್ಲಿ ಹಿರಿಯ ಅಧಿಕಾರಿ. ಟಿ.ಆಂಚನ್ ಅವರ ಪುತ್ರಿಯಾಗಿರುವ ರೀಟಾ ಅಂಚನ್ ವಿವಾಹವಾದ ಬಳಿಕ ರಾಧಾಕೃಷ್ಣ ಮಂಚಿಗಯ್ಯ ಅವರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಮದುವೆಯ ಬಳಿಕ ಸಿನಿಮಾರಂಗದಿಂದ ದೂರ ಉಳಿದಿದ್ದ ಅವರು ಪತಿ, ಪುತ್ರ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ರಘುರಾಮ್ ಪೋಸ್ಟ್ :
‘ ನಿಮ್ಮೆಲ್ಲರಿಗೂ ಇವರ ಜೀವನದ ಕಥೆಯನ್ನು ಪರಿಚಯಿಸಬೇಕೆಂಬ ನನ್ನ ಕನಸು ನನಸಾಗಲಿಲ್ಲ. ‘ಪರಸಂಗದ ಗೆಂಡೆತಿಮ್ಮ’ ಖ್ಯಾತಿಯ ಶ್ರೀಮತಿ ರೀಟಾ ಅಂಚನ್ ರಾಧಾಕೃಷ್ಣ ಅವರು ನೆನ್ನೆ (13/11/2024) ರಂದು ನಮ್ಮನ್ನು ದೈಹಿಕವಾಗಿ ಅ*ಗಲಿದ್ದಾರೆ. ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬಕ್ಕೆ ಕೊಡಲಿ’ ಎಂದು ನಿರ್ದೇಶಕ ಹಾಗೂ ಕನಸುಗಳ ಕಾರ್ಖಾನೆ ಯೂಟ್ಯೂಬ್‌ನ ರಘುರಾಮ್ ತಿಳಿಸಿದ್ದಾರೆ.