Connect with us

    ಯು.ಎ.ಇ.ಯ ಟ್ಯಾಂಕರ್ ಹಡಗಿನಲ್ಲಿ ಅಗ್ನಿ ದುರಂತ: ಇಬ್ಬರು ಭಾರತೀಯ ನಾಗರಿಕರು ಮೃತ್ಯು

    Published

    on

    ದುಬೈ: ಯುಎಇ ಕರಾವಳಿಯಲ್ಲಿ ಪನಾಮಾ ಧ್ವಜವನ್ನು ಹೊಂದಿದ್ದ ಟ್ಯಾಂಕರ್ ಹಡಗೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಭಾರತೀಯ ನಾಗರಿಕರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಾಗೂ ಇತರ ಕನಿಷ್ಠ 10 ಮಂದಿ ನಾಪತ್ತೆಯಾಗಿದ್ದಾರೆ. ಯುಎಇ ಕರಾವಳಿಯಿಂದ 21 ಮೈಲು ದೂರದ ಸಮುದ್ರ ಪ್ರದೇಶದಲ್ಲಿ ಈ ದುರಂತ ಬುಧವಾರ ಸಂಜೆ ಸಂಭವಿಸಿದೆ.

    ಅಗ್ನಿಶಾಮಕದಳದ ನೆರವಿನಿಂದ ಹಡಗಿಗೆ ಹತ್ತಿಕೊಂಡಿದ್ದ ಬೆಂಕಿಯನ್ನು ನಿಯಂತ್ರಿಸಲಾಯಿತೆಂದು ವರದಿ ತಿಳಿಸಿದೆ. ಅಗ್ನಿಅನಾಹುತದಲ್ಲಿ ನಾಪತ್ತೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚುವ ಕಾರ್ಯ ನಡೆದಿದೆ. ಹಡಗಿನ ಸಿಬ್ಬಂದಿಯಿಂದ ಅಪಾಯದ ಕರೆ ದೊರೆತ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ ಹಾಗೂ ಟ್ಯಾಂಕರ್ ನ ಸಿಬ್ಬಂದಿಯನ್ನು ರಕ್ಷಿಸಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ. ದುರ್ಘಟನೆ ನಡೆದ ಸಂದರ್ಭದಲಿ ಹಡಗಿನಲ್ಲಿ ಕನಿಷ್ಠ 55 ಮಂದಿ ಇದ್ದರೆಂದು ತಿಳಿದುಬಂದಿದೆ.

    Click to comment

    Leave a Reply

    Your email address will not be published. Required fields are marked *

    BIG BOSS

    ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?

    Published

    on

    ಬಿಗ್ ಬಾಸ್ ಫಿನಾಲೆಗೆ ಇನ್ನೊಂದು ವಾರವಷ್ಟೇ ಬಾಕಿ ಉಳಿದಿದೆ. ಬಿಗ್ ಬಾಸ್ ಮನೆಯಲೀಗ ಮಿಡ್ ವೀಕ್ ಎಲಿಮಿನೇಷನ್ ಟೆನ್ಶನ್ ಶುರುವಾಗಿದೆ.

    ಇದೇ ಹೊತ್ತಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದಾರೆ. ಹೀಗಾಗಿ 7 ಸ್ಪರ್ಧಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ನಾಮಿನೇಷನ್ ನಿಂದ ಪಾರಾಗಲು ಬಿಗ್ ಬಾಸ್ ಸ್ಪರ್ಧಿಗಳಿಗೆ ಕಾಲ ಕಾಲಕ್ಕೆ ಟಾಸ್ಕ್ ನೀಡಲಿದ್ದಾರೆ.

    ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?

    ಬಿಗ್ ಬಾಸ್ ಕೊಟ್ಟ ಟಾಸ್ಕ್ ಯಾರು ಗೆಲ್ಲುತ್ತಾರೋ ಅವರು ಈ ವಾರದ ನಾಮಿನೇಷನ್ ನಿಂದ ಪಾರಾಗಲಿದ್ದಾರೆ.

    ಬಿಗ್ ಬಾಸ್ ಮನೆಯಲ್ಲಿ ಒಟ್ಟು 8 ಸ್ಪರ್ಧಿಗಳು ಉಳಿದುಕೊಂಡಿದ್ದು, ಈ ಪೈಕಿ ಒಬ್ಬರು ಮಿಡ್ ವೀಕ್ ಎಲಿಮಿನೇಟ್ ಆಗಲಿದ್ದಾರೆ. ಇನ್ನು ಇಬ್ಬರು ವಾರಾಂತ್ಯಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರಲಿದ್ದಾರೆ. ಕೊನೆಗೆ ವಾರಾಂತ್ಯದಲ್ಲಿ ಮೂರು ಜನ ಬಿಗ್ ಬಾಸ್ ಮನೆಯಿಂದ ಹೊರಬರಲಿದ್ದಾರೆ.

    ಹೀಗಾಗಿ ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಕೊಟ್ಟ ಟಾಸ್ಕ್ ಗಳನ್ನು ಕಷ್ಟಪಟ್ಟು ಆಡುತ್ತಿದ್ದಾರೆ. ಅದರಲ್ಲೂ ರಿಲೀಸ್ ಆದ ಪ್ರೋಮೋದಲ್ಲಿ, ಇದು ಮಿಡ್ ವೀಕ್ ಎಲಿಮಿನೇಷನ್ ನಿಂದ ತಮ್ಮನ್ನು ತಾವು ಉಳಿಸಿಕೊಳ್ಳಲು ಇರುವ ಕೊನೆಯ ಟಾಸ್ಕ್ ಎಂದು ಭಯ ಹುಟ್ಟಿಸಿದ್ದಾರೆ.

     

    Continue Reading

    LATEST NEWS

    ಮ*ರಣದ ನಂತರ ಏನು ಎಂದು ಹುಡುಕಿದಾತ ಸಾ*ವಿಗೆ ಶರಣಾದ!

    Published

    on

    ಮಂಗಳೂರು/ಲಖನೌ: ಇತ್ತೀಚಿನ ದಿನಗಳಲ್ಲಿ ಆ*ತ್ಮಹ*ತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಅದರಲ್ಲೂ ಮಕ್ಕಳು ಸಾ*ವಿಗೆ ಶರಣಾಗುತ್ತಿರೋದು ವಿಪರ್ಯಾಸ. ಸಣ್ಣ ಪುಟ್ಟ ವಿಚಾರಗಳಿಗೆ ಸಾ*ವಿನ ದಾರಿ ಹಿಡಿಯುತ್ತಿರೋರು ಅಧಿಕ.  ಉತ್ತರಪ್ರದೇಶದ ಮೀರತ್‌ನಲ್ಲಿ ಬಾಲಕನೋರ್ವ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಆತ ಗೂಗಲ್‌ ಹಾಗೂ ಯೂಟ್ಯೂಬ್‌ನಲ್ಲಿ ಹುಡುಕಾಡಿರುವ ವಿಚಾರ ಶಾ*ಕ್ ಕೊಟ್ಟಿದೆ.

    9ನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ್ ಮೃ*ತ ಬಾಲಕ. ಈತ ಪಿಸ್ತೂಲ್‌ನಿಂದ ಗುಂ*ಡು ಹಾ*ರಿಸಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೂ ಮುಂಚೆ ಆತ ‘ಗರುಡ ಪುರಾಣ’ದ ಬಗ್ಗೆ ಹುಡುಕಾಟ ನಡೆಸಿದ್ದಾನೆ ಎನ್ನಲಾಗಿದೆ. ಯೂಟ್ಯೂಬ್, ಗೂಗಲ್‌ಗಳಲ್ಲಿ ಗರುಡ ಪುರಾಣದ ಬಗ್ಗೆ ಹುಡುಕಿದ್ದಾನಂತೆ.  ಸಾ*ವಿನ ರೀತಿ, ಸಾ*ವಿನ ನಂತರ ಆತ್ಮ ಎಲ್ಲಿಗೆ ಹೋಗುತ್ತದೆ ಎಂಬ ಬಗ್ಗೆ ಕುತೂಹಲ ಹೊಂದಿದ್ದ ಎಂಬುದು ಆತನ ಸರ್ಚ್ ಇಂಜಿನ್‌ನಿಂದ ತಿಳಿದುಬಂದಿದೆ. ಆದರೆ, ಯಾವುದೇ ಡೆ*ತ್ ನೋಟ್ ಪತ್ತೆಯಾಗಿಲ್ಲ.

    ಇದನ್ನೂ ಓದಿ : ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?

    ಬುದ್ದಿ ಮಾತು…ಬೈಕ್ ಮಾರಾಟ :

    ಓದಿನತ್ತ ಬಾಲಕ ಗಮನ ಕೊಡುತ್ತಿರಲಿಲ್ಲ. ಹೀಗಾಗಿ ಆತನ ತಾಯಿ ಗದರಿದ್ದರಂತೆ. ಅಲ್ಲದೇ, ಆತ ತನ್ನ ಬಳಿಯಿದ್ದ ದ್ವಿಚಕ್ರವಾಹನದ ಬಗ್ಗೆ ಅತಿಯಾದ ವ್ಯಾಮೋಹ ಹೊಂದಿದ್ದನಂತೆ. ಇದು ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತಿದೆ ಎಂದರಿತು ಪೋಷಕರು ಆ ದ್ವಿಚಕ್ರ ವಾಹನವನ್ನು ಮಾರಾಟ ಮಾಡಿದ್ದರು. ಇದೂ ಕೂಡ ಬಾಲಕ ಆ*ತ್ಮಹ*ತ್ಯೆಯ ನಿರ್ಧಾರ ತಳೆಯಲು ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

    ಸದ್ಯ ಮ*ರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

     

     

    Continue Reading

    BIG BOSS

    ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?

    Published

    on

    ‘ಬಿಗ್ ಬಾಸ್ ಕನ್ನಡ ಸೀಸನ್ 11’ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಆದ್ರೆ ಕಳೆದ ವಾರ ಅಚ್ಚರಿ ಎಂಬಂತೆ ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಆಚೆ ಬಂದಿದ್ದಾರೆ. ಅವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದು, ಯಾರು ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ.

    ಚೈತ್ರಾ ಕುಂದಾಪುರ ಅವರ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆಗೂ ಮೊದಲೇ ಔಟ್ ಆಗಿದ್ದಾರೆ. 105ಕ್ಕೂ ಹೆಚ್ಚು ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಆಟದಿಂದ ಹೊರ ಹೋಗಿದ್ದಾರೆ. ಅವರು ಆಟವನ್ನು ಹತ್ತಿರದಿಂದ ನೋಡಿದವರು. ಯಾರು ದೊಡ್ಮನೆಯಿಂದ ಹೊರ ಹೋಗುತ್ತಾರೆ ಹಾಗೂ ಯಾರೂ ಗೆಲ್ಲಬಹುದು ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಬಿಗ್‌ ಬಾಸ್‌ ನಿಂದ ಹೊರ ಬಂದ ಚೈತ್ರಾ ಕುಂದಾಪುರ ಪಡೆದ ಸಂಭಾವನೆ ಎಷ್ಟು ಗೊತ್ತೇ?

    ಬಿಗ್ ಬಾಸ್ ಕನ್ನಡ ಸೀಸನ್ 11ರ, ಟಾಪ್ 5 ಫೈನಲಿಸ್ಟ್ ಜಾಗದಲ್ಲಿ ತ್ರಿವಿಕ್ರಮ್, ಹನುಮಂತ, ರಜತ್, ಭವ್ಯಾ ಗೌಡ ಹಾಗೂ ಉಗ್ರಂ ಮಂಜು ಇರಲಿದ್ದಾರೆ ಎಂದು ಹೇಳಿದ್ದಾರೆ. ಮುಂದಿನ ವಾರ ಮೋಕ್ಷಿತಾ ಅಥವಾ ಧನರಾಜ್ ಅವರು ಆಚೆ ಬರಬಹುದು ಎಂದು ಹೇಳಿದ್ದಾರೆ.

    ಅಲ್ಲದೇ ಬಿಗ್ ಬಾಸ್ ಸೀಸನ್ 11 ಫಿನಾಲೆ ಟ್ರೋಫಿ ಗೆಲ್ಲೋದು ಯಾರು ಅಂತ ಕೂಡ ಹೇಳಿದ್ದಾರೆ. ಹನುಮಂತ ತುಂಬಾ ಚೆನ್ನಾಗಿ ಆಟ ಆಡುತ್ತಿದ್ದಾರೆ. ಹನುಮಂತ ಟಾಪ್ 2ನಲ್ಲಿ ಇರುತ್ತಾರೆ ಅಥವಾ ಗೆಲ್ಲಲುಬಹುದು. ಆದ್ರೆ ನನಗೆ ತ್ರಿವಿಕ್ರಮ್ ಅವರು ಗೆಲ್ಲಬೇಕು. ಅವ್ರು ಜೀವನದಲ್ಲಿ ತುಂಬಾ ಕಷ್ಟಗಳನ್ನು ಅನುಭವಿಸಿದ್ದಾರೆ. ಈ ಬಿಗ್ ಬಾಸ್ ಗೆಲುವು ಅವರಿಗೆ ತುಂಬಾನೇ ಮುಖ್ಯ ಎಂದು ಹೇಳಿದ್ದಾರೆ.

    Continue Reading

    LATEST NEWS

    Trending