Friday, May 27, 2022

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ: ಮೂವರು ಸಜೀವ ದಹನ

ಬೆಂಗಳೂರು: ನಗರದಲ್ಲಿ ಒಂದು ಅಗ್ನಿ ದುರಂತ ಮಾಸುವ ಮುನ್ನವೇ ಮತ್ತೊಂದು ಸ್ಫೋಟ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿ ಇಂದು ಮಧ್ಯಾಹ್ನ 12:10ರ ಸುಮಾರಿಗೆ ನಡೆದಿರುವುದು ವರದಿಯಾಗಿದೆ.

ಸ್ಫೋಟದ ತೀವ್ರತೆಗೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹಗಳು ಛಿದ್ರಗೊಂಡಿವೆ. ಹಲವು ದ್ವಿಚಕ್ರ ವಾಹನಗಳು ಜಖಂಗೊಂಡಿವೆ. ಸುತ್ತಮುತ್ತಲಿನ ಹಲವು ಮನೆಗಳ ನಿವಾಸಿಗಳಿಗೆ ಗಾಯಗಳಾಗಿವೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಶ್ರಮಿಸುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದರೂ, ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಎರಡು ದಿನಗಳ ಹಿಂದೆ ನಗರದ ದೇವರಚಿಕ್ಕನಹಳ್ಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಗ್ಯಾಸ್ ಪೈಪ್ ಲೈನ್ ನಲ್ಲಿ ಸೋರಿಕೆಯಿಂದ ಉಂಟಾದ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ತಾಯಿ-ಮಗಳು ಸಜೀವ ದಹನಗೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಪುತ್ತೂರು: ಮರ ಕಡಿಯುತ್ತಿದ್ದಾಗ ವಿದ್ಯುತ್ ಶಾಕ್-ಕಾರ್ಮಿಕ ಸಾವು

ಪುತ್ತೂರು: ಮರ ಕಡಿಯುತ್ತಿದ್ದ ಸಂದರ್ಭ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ವಯರ್ ತಾಗಿ ಕಾರ್ಮಿಕರೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರಿನ ನರಿಮೊಗರು ಎಂಬಲ್ಲಿ ಗುರುವಾರ ನಡೆದಿದೆ.ಮಾಡನ್ನೂರು ನಿವಾಸಿ ಮಲ್ಲ ಎಂಬವರ ಪುತ್ರ ವಸಂತ(35)...