ಬೆಳ್ತಂಗಡಿ: ಚಾರ್ಮಾಡಿ ಘಾಟ್ನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಮಲಯ ಮಾರುತ ಸಮೀಪ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಸಿಬ್ಬಂದಿ ಹರ ಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ.