Connect with us

    DAKSHINA KANNADA

    ದೇರಳಕಟ್ಟೆ ಫ್ಲ್ಯಾಟ್‌ನಲ್ಲಿ ತಪ್ಪಿತು ಅಗ್ನಿ ದುರಂತ-ಮ್ಯಾನೇಜರ್ ಸಮಯಪ್ರಜ್ಞೆಯಿಂದ ಎಲ್ಲರೂ ಸೇಫ್….

    Published

    on

    ಉಳ್ಳಾಲ: ಮಂಗಳೂರು ಹೊರವಲಯದ ಉಳ್ಳಾಲ ವ್ಯಾಪ್ತಿಯಲ್ಲಿರುವ ದೇರಳಕಟ್ಟೆಯ ಎರಡು ಆಸ್ಪತ್ರೆಗಳ ನಡುವೆ ಇರುವ ಫ್ಲ್ಯಾಟ್‌ ಒಂದರಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ಫ್ಲ್ಯಾಟ್‌ನ ಮ್ಯಾನೇಜರ್ ಸಮಯಪ್ರಜ್ಞೆಯಿಂದ 100ಕ್ಕೂ ಅಧಿಕ ಮಂದಿಯಿರುವ 13 ಮಹಡಿಗಳ ಫ್ಲ್ಯಾಟ್‌ ನಲ್ಲಿ ಅಗ್ನಿ ದುರಂತದ ಅಪಾಯ ತಪ್ಪಿದೆ.


    ಫ್ಲ್ಯಾಟ್‌ವೊಂದರ 202 ನಂಬರಿನ ರೂಮಿನಲ್ಲಿ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರಿದ್ದು, ಡಿ.2೦ ರ ಬೆಳಿಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರವಿದೆಯೆಂದು ಬೇಗನೇ ತೆರಳಿದ್ದರು.

    ಆದರೆ ಆತುರದಲ್ಲಿ ಬಟ್ಟೆಗಳಿಗೆ ಇಸ್ತ್ರಿ ಹಾಕಿರುವ ವಿದ್ಯಾರ್ಥಿನಿಯರು, ಸ್ವಿಚ್ ಆಫ್ ಮಾಡಿದರೂ, ಇಸ್ತ್ರಿಪೆಟ್ಟಿಗೆಯನ್ನು ಮಲಗುವ ಬೆಡ್ ನಲ್ಲಿರಿಸಿ ಕಾಲೇಜಿಗೆ ತೆರಳಿದ್ದರು. ಆದರೆ ಬೆಳಗ್ಗಿನಿಂದ ಹೊಗೆಯ ವಾಸನೆ ಫ್ಲ್ಯಾಟ್ ತುಂಬಾ ಬರುತ್ತಿದ್ದು, ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಹುಡುಕಲು ಆರಂಭಿಸಿದ್ದರು.


    ಒಂದು ಗಂಟೆಯ ನಂತರ ರೂಮಿನಲ್ಲಿ ಹೊಗೆ ಬರುತ್ತಿರುವುದು ಗಮನಕ್ಕೆ ಬಂದಿದೆ. ಆದರೆ ರೂಮಿಗೆ ಬೀಗ ಹಾಕಿರುವುದರಿಂದ ತೆರೆಯಲು ಸಾಧ್ಯವಾಗದೆ, ವಿದ್ಯಾರ್ಥಿನಿಯರಿಗೆ ಮೊಬೈಲ್ ಮೂಲಕ ಸಂಪರ್ಕಿಸಿದ್ದಾರೆ. ರೂಮಿನಿಂದ ಹೊಗೆ ಬರುತ್ತಿರುವುದನ್ನು ತಿಳಿಸಿ ತಕ್ಷಣಕ್ಕೆ ವಾಪಸ್ಸು ಬರುವಂತೆ ಸೂಚಿಸಿದ್ದಾರೆ.

    ಇಬ್ಬರು ವಿದ್ಯಾರ್ಥಿನಿಯರು ತಕ್ಷಣ ಫ್ಲಾಟ್ ನತ್ತ ಆಗಮಿಸಿದ್ದು, ಬೀಗ ತೆರೆಯುವ ಸಂದರ್ಭ ರೂಮಿನೊಳಕ್ಕೆ ದಟ್ಟವಾದ ಹೊಗೆ ಆವರಿಸಿತ್ತು. ಧೈರ್ಯ ಮಾಡಿದ ಮ್ಯಾನೇಜರ್ ಶಫೀಕ್ ನೇರವಾಗಿ ಒಳನುಗ್ಗಿ ಕಿಟಕಿಯನ್ನು ತೆರೆದಿದ್ದಾರೆ. ಹೊಗೆಯ ಕಾರಣ ನಿಖರವಾಗಿ ಗೊತ್ತಾಗದೇ ಕೆಲಹೊತ್ತು ಅದರೊಳಗೆ ಉಳಿದು ಗಮನಿಸಿದ್ದಾರೆ.


    ಆ ವೇಳೆ ಬೆಡ್ಡಿಗೆ ಬೆಂಕಿ ಆವರಿಸಲು ಆರಂಭವಾಗಿದೆ. ತಕ್ಷಣ ಫ್ಲ್ಯಾಟ್‌ ವಾಚ್‌ಮೆನ್ ಲೋಕೇಶ್ ಎಂಬವರನ್ನು ಕರೆದಿದ್ದು, ಇಬ್ಬರೂ ಸೇರಿಕೊಂಡು ಬೆಂಕಿ ಆವರಿಸಿದ ಬೆಡ್ ಅನ್ನು ಹೊರಗೆಸೆದು ಅವಘಢವನ್ನು ತಪ್ಪಿಸಿದ್ದಾರೆ.

    ಫ್ಲ್ಯಾಟ್‌ ಪ್ರಬಂಧಕ ಶಾಹಿದ್ ಶಫೀಕ್ ಅವರು ಸ್ವಲ್ಪ ಹೊತ್ತು ತಡಮಾಡುತ್ತಿದ್ದರೂ ಬೆಂಕಿಯಿಡೀ ಪ್ಲಾಟ್‌ಗೆ ಆವರಿಸುವ ಸಂಭವವಿತ್ತು. ಮಹಮ್ಮದ್ ಶಾಹೀದ್ ಶಫೀಕ್ ಅವರು ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ ನ ಕಾರ‍್ಯದರ್ಶಿಯೂ ಆಗಿದ್ದಾರೆ.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending