ಶಿವಮೊಗ್ಗ: ಮನೆಯಲ್ಲಿ ಶಾರ್ಟ್‌ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿ ಉದ್ಯಮಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿ ಸಮೀಪ ನಡೆದಿದೆ.
ಖ್ಯಾತ ಉದ್ಯಮಿ ಹಾಗೂ ಶಿವಮೊಗ್ಗ ಛೇಂಬರ್ ಆಫ್ ಕಾಮರ್ಸ್ ನಿರ್ದೇಶಕ ಭೂಪಾಳಂ ಎಸ್ ಶರತ್ (39) ಮೃತ ದುರ್ದೈವಿ. ಇವರ ಮಗ ಸಂಚಿತ್ (12) ಗಂಭೀರವಾಗಿ ಗಾಯಗೊಂಡ ಗಾಯಾಳು.
ಇಂದು ಬೆಳಗಿನ ಜಾವ 4ಗಂಟೆಗೆ ಶಾರ್ಟ್‌ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಕಂಡು ಮನೆಯವರು ಕೂಡಲೇ ಹೊರಗೆ ಬಮದಿದ್ದಾರೆ.
ಆದರೆ ಶರತ್ ಅವರು ಹೊಗೆಯ ಮಧ್ಯೆ ಸಿಲುಕಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಆಸ್ಪತ್ರೆಗೆ ಕೊಂಡೊಯ್ದರೂ ಪ್ರಯೋಜನವಾಗದೆ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಶಶಿಧರ್ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.