ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸಮೀಪದ ಬಳ್ಪದ ಎಡೋಣಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ.
ಪಂಜದ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಪಾದೆ ಎಂಬಲ್ಲಿಗೆ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದ್ದು,
ಕಾರಿನಿಂದ ಇಳಿದ ಅವರು ಬೋನೆಟ್ ತೆರೆಯುವಷ್ಟರಲ್ಲಿ ಬೆಂಕಿ ಹತ್ತಿಕೊಂಡು ಕಾರು ಸಂಪೂರ್ಣ ಹೊತ್ತಿ ಉರಿದಿದೆ.