ನವದೆಹಲಿ: ದೆಹಲಿಯ ಸಿಬಿಐ ಮುಖ್ಯ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.
ಸಿಬಿಐ ಕಚೇರಿಯಲ್ಲಿ ಎಸಿ ಪ್ಲಾಂಟ್ ಕೋಣೆಯೊಳಗಿನ ಜನರೇಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣ ನೆಲಮಾಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ದಟ್ಟ ಹೊಗೆ ಆವರಿಸಿದ್ದರಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದರು. ಸುದ್ದಿ ತಿಳಿಯುತ್ತಿದ್ದಂತೆ 5 ಅಗ್ನಿಶಾಮಕ ವಾಹನದಲ್ಲಿ ಸ್ಥಳಕ್ಕೆ ಬಂದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಅವಘಡದಲ್ಲಿ ಅದೃಷ್ಟವಶಾತ್ ಸಾವು ಸಂಭವಿಸಿಲ್ಲ ಎಂದು ವರದಿಯಾಗಿದೆ. ಸ್ವಯಂಚಾಲಿತ ಸಿಂಪರಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಲಾಗಿದೆ.