Wednesday, May 18, 2022

ನ್ಯಾಯಾಲಯದ ಕಟ್ಟಡದಲ್ಲಿ ಬೆಂಕಿ: ಕಡತ ನಾಶ ಶಂಕೆ

ಭಟ್ಕಳ: ಇಲ್ಲಿನ ರಂಗಿನಕಟ್ಟೆಯಲ್ಲಿರುವ ಜೆ.ಎಂ.ಎಫ್.ಸಿ. ನ್ಯಾಯಾಲಯ ಕಟ್ಟಡದಲ್ಲಿ ಇಂದು ಬೆಳಿಗ್ಗೆ ಅಗ್ನಿ ಅವಘಡ ನಡೆದಿದೆ. ಬೆಂಕಿಯಿಂದಾಗಿ ನ್ಯಾಯಾಲಯದ ಮುಂದಿನ ಭಾಗ ಸಂಪೂರ್ಣ ಸುಟ್ಟಿದೆ.

ಮೇಲ್ನೋಟಕ್ಕೆ, ವಿದ್ಯುತ್ ಶಾರ್ಟ್  ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಿಗ್ಗೆ 4.15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಾಗ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಹರಸಾಹಸ ಪಟ್ಟರೂ ಬೆಂಕಿಯ ಕೆನ್ನಾಲಿಗೆ ಮುಂಬದಿ ಕಟ್ಟಡವನ್ನು ಸಂಪೂರ್ಣ ಆವರಿಸಿತು.

ನ್ಯಾಯಾಲಯದಲ್ಲಿದ್ದ ಸಾವಿರಾರು ಕೇಸುಗಳ ಕಡತಗಳು ಅವಘಡದಲ್ಲಿ ಸುಟ್ಟುಹೋಗಿರುವ ಶಂಕೆಯಿದೆ. ಕಾಗದಕ್ಕೆ ಬೆಂಕಿ ಹೊತ್ತಿಕೊಂಡ ಕಾರಣ ಬೆಂಕಿಯ ತೀವ್ರತೆ ಮತ್ತಷ್ಟು ಹೆಚ್ಚಾಯಿತು. ಅಗ್ನಿ ಶಾಮಕದಳದ ಸಿಬ್ಬಂದಿ ಸಾಕಷ್ಟು ಕಡತಗಳನ್ನು ರಕ್ಷಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್...

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

MRPL ಉದ್ಯೋಗಿ ನಾಪತ್ತೆ: ಪ್ರಕರಣ ದಾಖಲು

ಸುರತ್ಕಲ್: ಎಂಆರ್‌ಪಿಎಲ್‌ನಲ್ಲಿ ಎಂಜಿನಿಯರ್ ಆಗಿದ್ದ ಸಕಲೇಶಪುರ ಮೂಲದ ಕಾಟಿಪಳ್ಳ ಶಾರದಾ ನಗರ ನಿವಾಸಿ ರಾಘವೇಂದ್ರ ಕೆ.ಆರ್ (52) ಎಂಬವರು ಮೇ 16ರಿಂದ ನಾಪತ್ತೆಯಾಗಿದ್ದಾರೆ.'ಫ್ಲೀಸ್ ತನ್ನನ್‌ನು ಹುಡುಕಬೇಡಿ' ಎಂದು ಚೀಟಿ ಬರೆದಿಟ್ಟು ಹೋಗಿದ್ದಾರೆ.ಹೋಗುವಾಗ ಬಟ್ಟೆ,...