Saturday, May 21, 2022

ಉಡುಪಿ: ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಬೆಂಕಿ

ಉಡುಪಿ: ಮಂಗಳೂರಿನಿಂದ ಎಚ್‌ಪಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ಉಡುಪಿಗೆ ಸಾಗಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆದಿದೆ.

ಟ್ರಕ್ ಚಾಲಕ ನಿನ್ನೆ ರಾತ್ರಿ ವಾಹನ ನಿಲ್ಲಿಸಿ ಚಹಾ ಕುಡಿಯಲು ಸಮೀಪದ ಸ್ಟಾಲ್‌ಗೆ ಹೋಗಿದ್ದು, ಈ ವೇಳೆ ಚಾಲಕನ ಸೀಟಿನ ಕೆಳಗೆ ಬೆಂಕಿ ಕಾಣಿಸಿಕೊಂಡಿದೆ.


ತಕ್ಷಣ ಸಮೀಪದ ಸಣ್ಣಪುಟ್ಟ ಅಂಗಡಿಗಳ ಎಲ್ಲಾ ಸಿಬ್ಬಂದಿ, ಟೋಲ್ ಪ್ಲಾಜಾ ಸಿಬ್ಬಂದಿ ಮತ್ತು ಸ್ಥಳೀಯರು, ಪಡುಬಿದ್ರಿ ಠಾಣಾ ಪೊಲೀಸ್ ಸಿಬ್ಬಂದಿಗಳು, ಉಡುಪಿಯ ಅಗ್ನಿಶಾಮಕ ದಳದ ತಂಡ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು.

ಇದರಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ಇನ್ನು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣದಿಂದ ಅವಘಡ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

Hot Topics

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿತ: ಸಂಕಷ್ಟದಲ್ಲಿ 10 ಸಾವಿರ ಯಾತ್ರಿಕರು

ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್‌ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮೂಲಗಳ...

ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ ಉದಯ್ ಚೌಟ ಇನ್ನಿಲ್ಲ

ಬಂಟ್ವಾಳ: ಏಕಲವ್ಯ ಪ್ರಶಸ್ತಿ ವಿಜೇತ ಕಬಡ್ಡಿ ಆಟಗಾರ, ಉದಯ್ ಚೌಟ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.ಬಂಟ್ವಾಳ ತಾಲೂಕು ಮಾಣಿಯ ಬದಿಗುಡ್ಡೆ ನಿವಾಸಿಯಾಗಿರುವ ಉದಯ್ ಚೌಟ ಕಬಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು.ಅಲ್ಲದೇ ದ.ಕ...

‘ಶಿವಲಿಂಗ’ ಪತ್ತೆ ಕುರಿತಂತೆ ಆಕ್ಷೇಪಾರ್ಹ ಪೋಸ್ಟ್: ದೆಹಲಿ ವಿವಿ ಪ್ರಾಧ್ಯಾಪಕನ ಬಂಧನ

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ 'ಶಿವಲಿಂಗ' ಪತ್ತೆ ಕುರಿತಂತೆ ಹೇಳಿಕೆಗಳನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ನಿನ್ನೆ ರಾತ್ರಿ ದೆಹಲಿಯ ಉತ್ತರ...