Connect with us

LATEST NEWS

ಕಿರಾಣಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ: ಕೋಟ್ಯಾಂತರ ರೂಪಾಯಿ ನಷ್ಟ..!

Published

on

ಕಾರವಾರ: ಹೋಲ್‌ಸೇಲ್ ಕಿರಾಣಿ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಲಕ್ಷಾಂತರ ರೂ ಮೌಲ್ಯದ ಕಿರಾಣಿ ಸಾಮಾನುಗಳು ಸುಟ್ಟು ಕರಕಲಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಅಂಚಿನ ಬಾರ್ ಮತ್ತು ಕಟ್ಟಿಗೆ ಮಿಲ್ ಹತ್ತಿರ ಸಂಭವಿಸಿದೆ.


ಚಂದ್ರಿಕಾ ಪ್ರೊವಿಸನ್ ಸ್ಟೋರ್ಸ್ ಎನ್ನುವುದು ತಾಲೂಕಿನ ಪ್ರಖ್ಯಾತ ಹೋಲ್ ಸೇಲ್ ಮತ್ತು ರಿಟೇಲ್ ಅಂಗಡಿಯಾಗಿದ್ದು, ಕಡಿಮೆ ದರದಲ್ಲಿ ಗುಣಮಟ್ಟದ ಸಾಮಾನುಗಳು ಇಲ್ಲಿ ದೊರೆಯುತ್ತದೆ ಎ೦ದು ಹಲವು ಗ್ರಾಹಕರು ಇದೇ ಅಂಗಡಿಯಲ್ಲಿ ವ್ಯವಹರಿಸುತ್ತಿದ್ದು, ಹಳ್ಳಿಗಾಡಿನ ಚಿಕ್ಕ ಪುಟ್ಟ ಅಂಗಡಿಕಾರರು ಸಹ ಇಲ್ಲಿಂದಲೇ ಸಾಮಾಗ್ರಿಗಳನ್ನು ಖರೀದಿಸಿ, ತಮ್ಮ ಅಂಗಡಿಯಲ್ಲಿಟ್ಟು ಮರು ಮಾರಾಟ ಮಾಡುತ್ತಿದ್ದರು.

ಕೆಲ ಪ್ರಮುಖ ಉತ್ಪನ್ನಗಳ ಡಿಸ್ಟ್ರಿಬ್ಯುಟರ್ ಆಗಿಯೂ ಇದೇ ಅಂಗಡಿಯವರು ಗುರುತಿಸಿಕೊಂಡಿದ್ದು ಪ್ರತಿ ದಿನ ಇಲ್ಲಿ ಹೆಚ್ಚಿನ ವ್ಯಾಪಾರ ವಹಿವಾಟು ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ದೊಡ್ಡ ಪ್ರಮಾಣದ ಈ ಅಂಗಡಿ ಮತ್ತು ಹೊಂದಿಕೊಂಡಿರುವ ಹಿಂಬದಿ ಗೋಡನ್ ನಲ್ಲಿ ದಾಸ್ತಾನು ಇಡಲಾದ ಸಾಮಾನುಗಳೆಲ್ಲ ಬಹುತೇಕ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ ಎನ್ನಲಾಗಿದೆ.

ಲಕ್ಷಾಂತರ ಮೌಲ್ಯದಿಂದ ಕೋಟಿ ರೂ ಮೌಲ್ಯದ ವರೆಗೆ ಹಾನಿ ಸಂಭವಿಸಿರುವ ಸಾಧ್ಯತೆ ಕೇಳಿ ಬಂದಿದ್ದು ,ಒಟ್ಟಾರೆ ಹಾನಿಯ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಅದಾವುದೋ ಕಾರಣದಿಂದ ಅಂಗಡಿ ಒಳಗಿಂದ ಒಳಗೆ ಬೆಂಕಿ ಕಾಣಿಸಿಕೊಂಡು ಮಧ್ಯರಾತ್ರಿ ವೇಳೆ ದಾಸ್ತಾನು ಕೊಠಡಿ ಹಾಗೂ ಸಾಮಾಗ್ರಿಗಳಿಗೆ ಹೊತ್ತಿ ಉರಿದಿರುವ ಸಾಧ್ಯತೆ ಕೇಳಿ ಬಂದಿದ್ದು, ತಗಡಿನ ಮೇಲ್ಚಾವಣಿ ಇರುವುದರಿಂದ ಒಮ್ಮೇಲೆ ಯಾರ ಗಮನಕ್ಕೂ ಬಂದಿರಲಿಲ್ಲ ಎನ್ನಲಾಗಿದೆ.

ಒಳಗಡೆಯಿಂದ ಚಟ ಪಟ ಸದ್ದು ಕೇಳಿ ಬರಲಾರ೦ಭಿಸಿದಂತೆ ಹತ್ತಿರದಲ್ಲೇ ಇದ್ದ ವಾಚಮನ್ ಓರ್ವ ಕಳ್ಳರಿರಬಹುದೇ ಎಂದು ನೋಡಲು ಹೋದಾಗ ಬೆಂಕಿ ಅವಘಡ ವಾಗಿರುವುದು ಗಮನಕ್ಕೆ ಬಂದು, ಪಕ್ಕದ ಬಾರ್ ಕೆಲಸಗಾರರು ಮತ್ತು ತಮ್ಮ ಮಾಲಕರಿಗೆ ವಿಷಯ ತಿಳಿಸಿದರು ಎನ್ನಲಾಗಿದೆ.

ಈ ವಿಷಯವನ್ನು ನಂತರ ಅಗ್ನಿಶಾಮಕ ಠಾಣೆಗೂ ತಿಳಿಸಲಾಗಿ, ಎರಡು ವಾಹನಗಳಲ್ಲಿ ಆಗಮಿಸಿದ ಅಗ್ನಿಶಾಮಕ ಅಧಿಕಾರಿಗಳು ಹಾಗೂ ಸಿಬ್ಬಂದಿ, ತಡರಾತ್ರಿಯಿಂದ ಬೆಳಗಿನವರೆಗೆ ನಿರಂತರ ಕಾರ್ಯಾಚರಣೆ ನಡೆಸಿ ತಮ್ಮ ವಾಹನಕ್ಕೆ 6 ಕ್ಕೂ ಹೆಚ್ಚು ಬಾರಿ ನೀರು ತುಂಬಿಕೊಂಡು, ಅಗ್ನಿ ಶಮನಕ್ಕೆ ಕರ್ತವ್ಯ ನಿರ್ವಹಿಸಿದರು.

ಇದೇ ವೇಳೆ ಹೆಸ್ಕಾಂ ಸಿಬ್ಬಂದಿಗಳು ಆಗಮಿಸಿ ಕೆಲ ಮುಂಜಾಗ್ರತಾ ಕ್ರಮ ಕೈಗೊಂಡರು. ಅಕ್ಕ ಪಕ್ಕಗಳಲ್ಲೇ ಕಟ್ಟಿಗೆ ಮಿಲ್ ಗಳಿರುವುದು ಸ್ಥಳೀಯರ ಆತಂಕ ಹೆಚ್ಚುವಂತೆ ಮಾಡಿತ್ತಾದರೂ, ಅದೃಷ್ಟವಶಾತ್ ಬೆಂಕಿ ಪಸರಿಸದೇ ಸಂಭವನೀಯ ಇನ್ನಷ್ಟು ಹಾನಿ ತಪ್ಪಿದಂತಾಗಿದೆ.

ಕಿರಾಣಿ ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಉಂಟಾದ ದಟ್ಟ ಹೊಗೆ ಮತ್ತು ಉಸಿರಾಡಿಸಲು ಕಷ್ಟಕರವಾದ ವಾಸನೆಯಿಂದ ಗೋಡನ್ ಒಳಗೆ ಪ್ರವೇಶಿಸಲು ಕಷ್ಟ ಸಾಧ್ಯವಾಗಿ, ಕಾರ್ಯಾಚರಣೆಗೆ ತೊಡಕಾಗಿತ್ತು ಎನ್ನಲಾಗಿದ್ದು, ಕಾರ್ಯಾಚರಣೆಗೆ ಅನುಕೂಲವಾಗುವಂತೆ ಕಟ್ಟಡದ ಒಂದು ಬದಿಯ ಹಳೆಯ ಕಿಟಕಿ ತೆರವುಗೊಳಿಸಿ ಕಾರ್ಯಾಚರಣೆ ಮುಂದುವರೆಸಲಾಯಿತು ಎನ್ನಲಾಗಿದೆ.

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

bengaluru

ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!

Published

on

ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.

ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Continue Reading

LATEST NEWS

Trending