BANTWAL
ಬಂಟ್ವಾಳದಲ್ಲಿ ಮನೆಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ-ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮ
ಬಂಟ್ವಾಳ: ಹೆಂಚಿನ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಪ್ರಮಾಣ ಸೊತ್ತುಗಳು ಸುಟ್ಟು ಭಸ್ಮವಾಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.
ಇಲ್ಲಿನ ದೇವಂದಬೆಟ್ಟು ನಿವಾಸಿಯಾಗಿರುವ ಸುಂದರಿ, ಶುಭ ಆನಂದ ಬಂಜನ್ ಎಂಬವರಿಗೆ ಸೇರಿರುವ ಮನೆಗೆ ನಿನ್ನೆ ರಾತ್ರಿ ಸುಮಾರು 10 .15 ರ ವೇಳೆಗೆ ಬೆಂಕಿ ಬಿದಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯಲ್ಲಿ ಸುಮಾರು 6 ಲಕ್ಷಕ್ಕೂ ಅಧಿಕ ಪ್ರಮಾಣದಲ್ಲಿ nಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
BANTWAL
Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!
ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.
ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.
ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.
ಜಮೀಲಾ ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.
ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
BANTWAL
Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!
ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.
ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.
ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.
ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.