ಮಲ್ಪೆ: ಮನೆಯೊಂದರ ಮಹಡಿಗೆ ಅಚಾನಕ್ ಆಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ನಡೆದಿದೆ.
ಕಲ್ಮಾಡಿ ನಿವಾಸಿ ವಿಠ್ಠಲ್ ಕೋಟ್ಯಾನ್ ಎಂಬವರ ಮನೆಯ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸುತ್ತಲೂ ಅವರಿಸಿತ್ತು.
ತದನಂತರ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಅಗ್ನಿ ಅನಾಹುತವನ್ನು ತಪ್ಪಿಸಿದ್ದಾರೆ.
ಜೀವಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.