Wednesday, May 18, 2022

ಸುಳ್ಯ: ಬಸ್‌ಗೆ ಸೈಡ್‌ ಕೊಡುವ ವೇಳೆ ವಿದ್ಯುತ್‌ ತಗುಲಿ ಲಾರಿಗೆ ಬೆಂಕಿ-ಸಂಪೂರ್ಣ ಭಸ್ಮ

ಸುಳ್ಯ: ಬೈಹುಲ್ಲು ತುಂಬಿದ್ದ ಲಾರಿ ಬಸ್ಸಿಗೆ ಸೈಡು ಕೊಡುವ ವೇಳೆ ವಿದ್ಯುತ್ ತಂತಿ ತಗುಲಿ ಸಂಪೂರ್ಣ ಭಸ್ಮಗೊಂಡ ಘಟನೆ ಇಂದು ಮುಂಜಾನೆ 3 ಗಂಟೆಗೆ ಸುಳ್ಯ ತಾಲೂಕಿನ ಕಂದಡ್ಕ ಸಮೀಪ ನಡೆದಿದೆ.


ಘಟ್ಟ ಭಾಗದಿಂದ ಕೇರಳಕ್ಕೆ ಬೈಹುಲ್ಲನ್ನು ಸಾಗಿಸುವ ಲಾರಿ ಕಂದಡ್ಕ ಬಳಿ ಎದುರಿನಿಂದ ಬಂದ ಬಸ್ಸಿಗೆ ಸೈಡ್ ಕೊಡುವ ವೇಳೆ ವಿದ್ಯುತ್ ತಂತಿಗೆ ತಗುಲಿದ್ದು, ತಕ್ಷಣ ಬೈಹುಲ್ಲಿಗೆ ಬೆಂಕಿ ಹತ್ತಿಕೊಂಡಿದೆ.

ಘಟನೆಯ ಮಾಹಿತಿ ತಿಳಿದ ಸುಳ್ಯ ಮತ್ತು ಪುತ್ತೂರು ಭಾಗದಿಂದ ಅಗ್ನಿಶಾಮಕ ದಳದ ಮೂರು ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವಲ್ಲಿ ಶ್ರಮಿಸಿದ್ದಾರೆ.

ಅಷ್ಟೊತ್ತಿಗಾಗಲೇ ಲಾರಿ ಸಂಪೂರ್ಣ ಬೆಂಕಿಯ ಕೆನ್ನಾಲಗೆ ತುತ್ತಾಗಿ ಅವಶೇಷಗಳು ಮಾತ್ರ ಉಳಿದುಕೊಂಡಿದೆ.

ಬೆಂಕಿ ಹೊತ್ತಿಕೊಂಡ ಸಮಯದಲ್ಲಿ ಲಾರಿಯ ಚಾಲಕ ಸತೀಶ್, ರಾಜೇಶ್ ಹಾಗೂ ಪುಟ್ಟರಾಜು ಲಾರಿಯಿಂದ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಿನ್ನಿಗೋಳಿ: ಗಾಳಿಮಳೆಗೆ ರಸ್ತೆಗೆ ಉರುಳಿದ ಮರ

ಕಿನ್ನಿಗೋಳಿ: ಮುಂಜಾನೆಯಿಂದಲೇ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿದ ಘಟನೆ ಕಿನ್ನಿಗೋಳಿಯ ಐಕಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಳಿಂಜೆ ಮುತ್ತಾಯಕೆರೆಯ ಬಳಿ ನಡೆದಿದೆ.ಬೆಳ್ಳಂಬೆಳಗ್ಗೆ ನಡೆದ ಘಟನೆಯಿಂದಾಗಿ ಮರವು ವಿದ್ಯುತ್...

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ: ಅಪರಾಧಿಗೆ ಜಾಮೀನು

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ.ಜಿ. ಪೇರರಿವಾಳನ್‌ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ಬಿ. ಆರ್....

ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ: ಹೈಕೋರ್ಟ್‌ ಮುಂದೆ ಚುನಾವಣಾ ಆಯೋಗ ಅಳಲು

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ನಮ್ಮ ಅಧಿಕಾರ ಕಸಿದುಕೊಂಡಿದೆ ಎಂದು ರಾಜ್ಯ ಚುನಾವಣಾ ಆಯೋಗವು ಹೈಕೋರ್ಟ್‌ ಮುಂದೆ ತನ್ನ ಅಸಹಾಯಕತೆ...