Connect with us

    LATEST NEWS

    ಪ್ರಯಾಗ್ ರಾಜ್‌ನಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ

    Published

    on

    ಮಂಗಳೂರು/ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಐತಿಹಾಸಿಕ ಮಹಾ ಕುಂಭಮೇಳದಲ್ಲಿ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ.

    ಶನಿವಾರ (ಜ.25) ಬೆಳಿಗ್ಗೆ ಮತ್ತೆ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಮುಖ್ಯರಸ್ತೆಯ ಸೆಕ್ಟರ್-2ರ ಬಳಿ ನಿಲ್ಲಿಸಿದ್ದ ಎರಡು ಕಾರುಗಳು ಬೆಂಕಿಗಾಹುತಿಯಾಗಿದೆ, ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಿ ಹೆಚ್ಚಿನ ಅವಘಡವನ್ನು ತಪ್ಪಿಸಿದೆ.

    ಇದನ್ನೂ ಓದಿ: ಖ್ಯಾತ ಬಾಲಿವುಡ್ ನಟಿಯಿಂದ ನಾಗಾದೀಕ್ಷೆ..! ಮಹಾಮಂಡಲೇಶ್ವರಿಯಾಗಿ ಬದಲಾದ ಬಾಲಿವುಡ್ ಹಾಟ್ ಸ್ಟಾರ್..! 

    ಈ ಅವಘಡದಲ್ಲಿ ಎರಡೂ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಮುಂಜಾಗ್ರತ ಕ್ರಮವಾಗಿ ಸುತ್ತಮುತ್ತಲಿನ ವಾಹನಗಳನ್ನು ತೆರವುಗೊಳಿಸಲಾಯಿತು. ಸದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಕಳೆದ ಭಾನುವಾರ (ಜ.19) ಶಾಸ್ತ್ರೀ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಶಿಬಿರವೊಂದರಲ್ಲಿ ಅಡುಗೆ ತಯಾರಿಸುವ ವೇಳೆ ಸಿಲಿಂಡರ್ ಸ್ಪೋಟಗೊಂಡು ಅಗ್ನಿ ಅವಘಡ ಸಂಭವಿಸಿತ್ತು. ಈ ವೇಳೆ ಸುಮಾರು 50 ಟೆಂಟ್‌ಗಳು ಬೆಂಕಿಗಾಹುತಿಯಾಗಿತ್ತು.

    Click to comment

    Leave a Reply

    Your email address will not be published. Required fields are marked *

    BIG BOSS

    ಬಿಗ್ ಬಾಸ್ ಸ್ಪರ್ಧಿ ಗೌತಮಿ ಜಾದವ್ ಸಂಸಾರದಲ್ಲಿ ಬಿರುಕು?

    Published

    on

    ಬಿಗ್ ಬಾಸ್ ಸ್ಪರ್ಧಿ ಗೌತಮಿ ಜಾದವ್ ಅವರು ಕೆಲವು ವಾರಗಳ ಹಿಂದೆ ಮನೆಯಿಂದ ಔಟ್ ಆಗಿದ್ದರು. ಮನೆಯಲ್ಲಿ ಸದಾ ಪಾಸಿಟಿವ್ ಮಂತ್ರವನ್ನು ಜಪಿಸುತ್ತಿದ್ದ ಇವರು ಕೊನೆಯ ಹಂತದಲ್ಲಿ ಎಲಿಮಿನೇಟ್ ಆಗಿ ಹೊರ ನಡೆದಿದ್ದರು. ಈ ಬೆನ್ನಲ್ಲೇ ಗೌತಮಿ ಜಾದವ್ ಅವರ ಬದುಕಿನಲ್ಲಿ ಬಿರುಕು ಮೂಡಿದೆಯಾ ಎಂಬ ಅನುಮಾನ ಹುಟ್ಟಿಸಿದೆ. ಇದೆಲ್ಲದಕ್ಕೂ ಕಾರಣ ಅವರ ಮಾವ ಮಾಡಿರುವ ಪೋಸ್ಟ್.

    ಗೌತಮಿ ಬಿಗ್‌ಬಾಸ್‌ ಮನೆಯಲ್ಲಿದ್ದಾಗ ಅವರ ಪತಿ ಅಭಿಷೇಕ್ ಅವರು ಬಂದು, 6 ವರ್ಷದ ಮದುವೆ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದರು. ಆದರೀಗ ಬಿಗ್‌ಬಾಸ್ ಸೀಸನ್ 11ರ ಸ್ಪರ್ಧಿ ಗೌತಮಿ ಜಾಧವ ಕುಟುಂಬದಲ್ಲಿ ಬಿರುಗಾಳಿ ಎದ್ದಿದೆ ಎಂಬ ಪ್ರಶ್ನೆ ಹುಟ್ಟುಕೊಂಡಿದೆ. ಇದಕ್ಕೆ ಕಾರಣ ಅವರ ಮಾವ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ವಾಕ್ಯ.

    ಹೌದು, ಗೌತಮಿ ಅವರ ಮಾವ, ಖ್ಯಾತ ಪತ್ರಕರ್ತ ಗಣೇಶ್ ಕಾಸರಗೋಡು ಅವರ ಫೇಸ್ ಬುಕ್ ಬರಹ ಇದೀಗ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ಅವರು ‘ಫೇಸ್‌ಬುಕ್‌ನಲ್ಲಿ ‘ಶ್ರಮ ಅರ್ಥವಾದರೆ ಅಪ್ಪ ಅರ್ಥವಾಗುತ್ತಾನೆ, ಕರುಣೆ ಅರ್ಥವಾದರೆ ತಾಯಿ ಅರ್ಥವಾಗುತ್ತಾಳೆ’ ಎಂದು ಪೋಸ್ಟ್ ಹಾಕಿ ಅದಕ್ಕೆ ಅಪ್ಪ ಅಮ್ಮನನ್ನು ಬಿಟ್ಟು ಕುರುಡು ಮೋಹಕ್ಕೆ ಮರುಳಾಗಿ ಹೆಂಡತಿಯ ಬಾಲ ಹಿಡಿದು ಹೊರಟು ಹೋಗುವ ನಿಯತ್ತಿಲ್ಲದ ಗಂಡು ಮಕ್ಕಳಿಗೆ ಅರ್ಪಣೆ ಎಂದು ಬರೆದಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

    ಅಲ್ಲದೆ ಕೆಲವು ದಿನಗಳ ಹಿಂದೆ ಅನ್ಯಾಯದ ಬೇಡಿಕೆಯ ಪ್ರಾರ್ಥನೆಯನ್ನು ಮುಲಾಜಿಲ್ಲದೆ ಧಿಕ್ಕರಿಸುವ, ತಿರಸ್ಕರಿಸುವ ನಮ್ಮಮ್ಮ ವನದುರ್ಗೆಗೆ ನಮೋ ನಮಃ ಎಂದು ಬರೆದ ವಾಕ್ಯದ ಅರ್ಥ ಹಲವು ಅರ್ಥಗಳನ್ನು ಹುಟ್ಟುಹಾಕಿದೆ.

    Continue Reading

    LATEST NEWS

    ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕು*ಸಿದು ಬಿ*ದ್ದ ಪೊಲೀಸ್ ಕಮಿಷನರ್ ..!

    Published

    on

    ಮಂಗಳೂರು/ತಿರುವನಂತಪುರ: ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ನಿಂತಿದ್ದ ನಗರ ಪೊಲೀಸ್ ಆಯುಕ್ತರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚೇತರಿಸಿಕೊಂಡಿದ್ದಾರೆ.

    ತಿರುವನಂತಪುರದಲ್ಲಿ ಈ ಘಟನೆ ನಡೆದಿದ್ದು, ರಾಜ್ಯಪಾಲರ ಪಕ್ಕದಲ್ಲಿ ನಿಂತಿದ್ದ ಸಿಟಿ ಪೊಲೀಸ್ ಕಮಿಷನರ್ ತಾಮ್ಸನ್ ಜೋಸ್ ಅವರು ಕುಸಿದು ಬಿದ್ದಿದ್ದಾರೆ. ಧ್ವಜಾರೋಹಣದ ಬಳಿಕ ಕವಾಯತು ವೀಕ್ಷಿಸಿದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಭಾಷಣ ಆರಂಭಿಸುತ್ತಿದ್ದಂತೆ ಈ ಘಟನೆ ನಡೆದಿದೆ. ಜಿಲ್ಲಾಧಿಕಾರಿ ಮನುಕುಮಾರಿ ಹಾಗೂ ಸಿಟಿ ಕಮಿಷನರ್ ತೋಮ್ಸನ್ ಜೋಸ್ ಅವರು ರಾಜ್ಯಪಾಲರ ಪಕ್ಕದಲ್ಲೇ ನಿಂತಿದ್ದರು. ಈ ವೇಳೆ ಏಕಾಏಕಿ ತೋಮ್ಸನ್ ಜೋಸ್ ಕುಸಿದು ಬಿದ್ದಿದ್ದು, ತಕ್ಷಣವೇ ಇತರ ಭದ್ರತಾ ಸಿಬ್ಬಂದಿ ಅವರನ್ನು ಮೇಲೆತ್ತಿದ್ದಾರೆ. ಈ ವೇಳೆ ಭಾಷಣ ನಿಲ್ಲಿಸಿದ ರಾಜ್ಯಪಾಲರು ತಕ್ಷಣ ಅವರಿಗೆ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿದ್ದಾರೆ.

    ತೋಮ್ಸನ್ ಜೋಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯಲ್ಲಿ ಅವರು ಚೇತರಿಸಿಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಹಲವು ಪರೀಕ್ಷೆಗಳನ್ನು ನಡೆಸಲಾಗಿದ್ದು , ಯಾವ ಕಾರಣಕ್ಕೆ ಹೀಗಾಗಿದೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಫುಲ್ ಬ್ಯುಸಿಯಾಗಿದ್ದ ಸಿಟಿ ಕಮಿಷನರ್ ಇಂದು(ಜ.26) ಮುಂಜಾನೆ ಬೇಗನೆ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಕಾರಣದಿಂದ ದೇಹದ ಸುಸ್ತಿಗೆ ತಲೆ ಸುತ್ತಿ ಬಿದ್ದಿರಬುಹುದು ಎನ್ನಲಾಗಿದೆ.

    Continue Reading

    LATEST NEWS

    ಆರ್‌ಸಿಬಿಗೆ ಆಘಾತ; ಕೈಕೊಟ್ಟ ಸ್ಟಾರ್ ಪ್ಲೇಯರ್

    Published

    on

    ಮಂಗಳೂರು/ಮುಂಬೈ : ವುಮೆನ್ಸ್ ಪ್ರೀಮಿಯರ್ ಲೀಗ್ 2025ರ ಋತುವಿನ ಆರಂಭಕ್ಕೆ ಕೆಲವೇ ದಿನಗಳಿರುವಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಅನಿರೀಕ್ಷಿತ ಆಘಾತ ಎದುರಾಗಿದೆ. ತಂಡದ ಸ್ಟಾರ್ ಆಲ್‌ರೌಂಡರ್ ಇಡೀ ಟೂರ್ನಿಯಿಂದಲೇ ದೂರ ಉಳಿಯುವುದಾಗಿ ತಿಳಿಸಿದ್ದಾರೆ.

    ವುಮೆನ್ಸ್ ಪ್ರೀಮಿಯರ್ ಲೀಗ್‌ನ ಮೂರನೇ ಆವೃತ್ತಿ ಫೆಬ್ರವರಿ 14 ರಿಂದ ಶುರುವಾಗಲಿದೆ. ವಡೋದರಾದ ಕೊಟಂಬಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಆದರೆ ಈ ಬಾರಿಯ ಟೂರ್ನಿಗೆ ಆರ್‌ಸಿಬಿ ಆಟಗಾರ್ತಿ ಸೋಫಿ ಡಿವೈನ್ ಅಲಭ್ಯರಾಗಲಿದ್ದಾರೆ.

    ಇದನ್ನೂ ಓದಿ: ಗೂಗಲ್ ಮ್ಯಾಪ್ ಅವಾಂತರ: ನೇಪಾಳಕ್ಕೆ ಹೋಗಬೇಕಿದ್ದ ಫ್ರಾನ್ಸ್ ಪ್ರವಾಸಿಗರಿಬ್ಬರು ತಲುಪಿದ್ದು ಎಲ್ಲಿಗೆ ?

    ನ್ಯೂಜಿಲೆಂಡ್ ತಂಡದ ನಾಯಕಿ ಸೋಫಿ ಡಿವೈನ್ ಈ ವರ್ಷದ ಸಂಪೂರ್ಣ ಋತುವಿಗೆ ಹೊರಗುಳಿಯಲಿದ್ದಾರೆ. ಅಲ್ಲದೆ ಡಿವೈನ್ ದೇಶೀಯ ಕ್ರಿಕೆಟ್‌ನಿಂದಲೂ ಸ್ವಲ್ಪ ಸಮಯದವರೆಗೆ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ದೃಢಪಡಿಸಿದೆ.

    ಆದರೆ, ಸೋಫಿಯ ಈ ನಿರ್ಧಾರಕ್ಕೆ ಕಾರಣವನ್ನು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಬಹಿರಂಗಪಡಿಸಿಲ್ಲ. ಇದು ನಿಜಕ್ಕೂ ಆರ್‌ಸಿಬಿಗೆ ದೊಡ್ಡ ಹಿನ್ನಡೆಯಾಗಿದೆ. ಏಕೆಂದರೆ ಕಳೆದ ವರ್ಷ ಆರ್‌ಸಿಬಿ WPL ಪ್ರಶಸ್ತಿಯನ್ನು ಗೆಲ್ಲುವಲ್ಲಿ ಡಿವೈನ್ ಪ್ರಮುಖ ಪಾತ್ರ ವಹಿಸಿದ್ದರು.

    ಸೋಫಿ ಡಿವೈನ್ ಕಳೆದ ಎರಡು ಸೀಸನ್‌ಗಳಲ್ಲಿ ಆರ್‌ಸಿಬಿ ಪರ ಆರಂಭಿಕಳಾಗಿ ಕಣಕ್ಕಿಳಿದಿದ್ದರು. ಈ ವೇಳೆ 18 ಇನಿಂಗ್ಸ್ ಆಡಿರುವ ಅವರು 2 ಅರ್ಧಶತಕಗಳೊಂದಿಗೆ ಒಟ್ಟು 402 ರನ್ ಕಲೆಹಾಕಿದ್ದಾರೆ. ಹಾಗೆಯೇ ಬೌಲಿಂಗ್‌ನಲ್ಲಿ 9 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಸೋಫಿ ಡಿವೈನ್ ಹೊರಗುಳಿದಿರುವ ಕಾರಣ ಆರ್‌ಸಿಬಿ ಬದಲಿ ಆಲ್‌ರೌಂಡರ್‌ ಆಟಗಾರ್ತಿಯನ್ನು ಆಯ್ಕೆ ಮಾಡಬೇಕಿದೆ.

    Continue Reading

    LATEST NEWS

    Trending