Tuesday, July 27, 2021

ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಆತ್ಮಹತ್ಯೆ..!

ತಿರುವನಂತಪುರಂ: ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ ತೃತೀಯ ಲಿಂಗಿಯಾಗಿದ್ದರು.

ಕೊಚ್ಚಿಯಲ್ಲಿರುವ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅನನ್ಯ ಅವರ ಮೃತದೇಹ ಪತ್ತೆಯಾಗಿದೆ.  ಕಳೆದ ಒಂದು ವರ್ಷದಿಂದ ಅನನ್ಯ ಕುಮಾರಿ ಅವರು ವಿವಿಧ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು ಕಳೆದ ವರ್ಷ್​ ಜೂನ್​ ತಿಂಗಳಲ್ಲಿ ಆರು ಬಾರಿ ಲಿಂಗ ಪುನರ್ವಿತರಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಚಿಕಿತ್ಸೆ ನೀಡಿದ್ದ ವೈದ್ಯರು ಮತ್ತು ಆಸ್ಪತ್ರೆ ವಿರುದ್ಧ ಅನನ್ಯ ಕುಮಾರಿ ಅನೇಕ ಆರೋಪಗಳನ್ನು ಮಾಡಿದ್ದರು. ಚಿಕಿತ್ಸೆ ಪಡೆದ ಬಳಿಕ ಅನೇಕ ಆರೋಗ್ಯ ಸಮಸ್ಯೆಗಳಿಂದ ಎದುರಿಸುತ್ತಿದ್ದೇನೆ ಎಂದು ದೂರಿದ್ದರು. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಿದೆ. ಇದಕ್ಕೆಲ್ಲ ಕಾರಣ ಆಸ್ಪತ್ರೆಯವರು ಎಂದು ಆರೋಪಿಸಿ ಪರಿಹಾರ ಕೊಡಿಸಿ ಎಂದು ಒತ್ತಾಯ ಮಾಡಿದ್ದರು. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಅನನ್ಯ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಯೂನಿಕ್ ಡೆಮಾಕ್ರಟಿಕ್ ಸೋಷಿಯಲ್ ಜಸ್ಟೀಸ್ ಪಾರ್ಟಿ (ಡಿಎಸ್‌ಜೆಪಿ) ಅಭ್ಯರ್ಥಿಯಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ವಿರುದ್ಧ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಆದರೆ, ಚುನಾವಣೆಗೆ ಪ್ರಚಾರವನ್ನು ನಿಲ್ಲಿಸಿದ್ದರು. ತನ್ನದೇ ಪಕ್ಷದ ನಾಯಕರಿಂದ ಬೆದರಿಕೆ ಇದೆ ಎಂದು ಅನನ್ಯ ಆರೋಪ ಮಾಡಿದ್ದರು. ಅಲ್ಲದೆ, ಚುನಾವಣೆಯಿಂದ ಹಿಂದೆ ಸರಿದಿದ್ದರು. ಆದರೆ, ಪಕ್ಷದ ಪರವಾಗಿ ಮತಯಾಚನೆ ಮಾಡಿದ್ದರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...