Home ಗಲ್ಫ್‌ ವಾರ್ತೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅನಿವಾಸಿ ಭಾರತೀಯರು..

ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅನಿವಾಸಿ ಭಾರತೀಯರು..

ಕೊಚ್ಚಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅನಿವಾಸಿ ಭಾರತೀಯರು..

ಗಲ್ಫ್: ಕೊನೆಗೂ ವಿದೇಶಗಲ್ಲಿ ಅದು ಕೂಡ ಗಲ್ಫ್ ರಾಷ್ಟ್ರ ಗಳಲ್ಲಿ ಸಿಲುಕಿದ್ದ ಭಾರತೀಯನ್ನು ಕರೆತರುವ ಬೃಹತ್ ಕಾರ್ಯಾಚರಣೆಗೆ ಚಾಲನೆ ನೀಡಲಾಯಿತು.

ಕೊರೊನಾ ಲಾಕ್ ಡೌನ್ ನಿಂದಾ ಗಿ ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿದ್ದ ಲಕ್ಷಾಂತರ ಅನಿವಾಸಿ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಭಾರತ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.

ದುಬೈ ಹಾಗೂ ಅಬುಧಾಬಿಯಿಂದ ಒಟ್ಟು 363 ಪ್ರಯಾಣಿಕರೊಂದಿಗೆ ಹೊರಟ ಮೊದಲ ಎರಡು ವಿಮಾನಗಳು ನಿನ್ನೆ ತಡ ರಾತ್ರಿ ಕೇರಳ ತಲುಪಿದೆ.

ಯುಎಇಯ ಅಬುಧಾಬಿಯಿಂದ 177 ಪ್ರಯಾಣಿಕರು ಮತ್ತು 4 ಶಿಶುಗಳೊಂದಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್ ನಿನ್ನೆ ರಾತ್ರಿ ಕೊಚ್ಚಿ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಗೆ ಬಂದಿಳಿದಿದೆ.

ಹಾಗೆ ದುಬೈನಿಂದ ಹೊರಟಿದ್ದ ಮತ್ತೊಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಫ್ಲೈಟ್ ಕೂಡ ಕೇರಳದ ಕೋಯ್ ಕೋಡ್ ಗೆ ತಲುಪಿದೆ.

ಭಾರತಕ್ಕೆ ಬಂದಿಳಿದ ಎಲ್ಲ 363 ಅನಿವಾಸಿ ಭಾರತೀಯರನ್ನು ಕ್ವಾರಂಟೈನ್ ಕೇಂದ್ರಗಳಿಗೆ ಕಳುಹಿಸಲಾಗಿದೆ.

ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅವರನ್ನು 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಿಸಲಾಗುವುದು.

ಎಲ್ಲ ಅನಿವಾಸಿಗಳಿಗೂ ಆರೋಗ್ಯ ಸೇತು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿದೆ.

ವಂದೇ ಭಾರತ್ ಮಿಷನ್ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ರಕ್ಷಣಾ ಕಾರ್ಯಾಚರಣೆ ಇನ್ನೂ 1 ವಾರ ಮುಂದುವರೆಯಲಿದೆ. ಭಾರತದ ಅತಿದೊಡ್ಡ ರಕ್ಷಣಾ ಕಾರ್ಯಾಚರಣೆ ಇದಾಗಿದೆ.

- Advertisment -

RECENT NEWS

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು 

ಕುಂದಾಪುರದಲ್ಲೇ ಅತಿ ಹೆಚ್ಚು ಕೊರೊನಾ ಸೊಂಕು  ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು...

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ

ಮೊದಲ ಮಳೆಗೆ ಪ್ರಾರಂಭವಾದ ಕಡಲಕೊರೆತ ಉಳ್ಳಾಲ: ಕಳೆದೆರಡು ದಿನಗಳಿಂದ ಮುಂಗಾರು ಮಳೆ ತೀವ್ರವಾಗಿ ಕರಾವಳಿ ತೀರದಲ್ಲಿ ಸುರಿಯತೊಡಗಿದ್ದು, ಕಡಲ ತೀರದಲ್ಲೂ ಕಡಲ ಅಬ್ಬರ ಜೋರಾಗಿದೆ. ಪ್ರತೀ ವರ್ಷ ಕಡಲಕೊರೆತ ತೀವ್ರವಾಗಿರುವ ಮಂಗಳೂರು ಕ್ಷೇತ್ರದ ಉಳ್ಳಾಲ...

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ..

ದಕ್ಷಿಣ ಅಸ್ಸಾಂನ ಬರಾಕ್ ಕಣಿವೆಯಲ್ಲಿ ಭೂಕುಸಿತ: 20ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ.. ಗುವಾಹಟಿ: ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ...

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ..

ಲಾಕ್ ಡೌನ್ ನಿಯಮ ಗಾಳಿಗೆ ತೂರಿ ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ ಮಾಡಿದವರ ವಿರುದ್ಧ ತನಿಖೆ.. ಉಡುಪಿ: ಕೋವಿಡ್- 19 ಲಾಕ್ ಡೌನ್ ನಿಯಮ ಉಲ್ಲಂಘಿಸಿ, ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು...