UDUPI
ರಾಜ್ಯದಲ್ಲೇ ಪ್ರಥಮ ಬಾರಿಗೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ…
Published
3 years agoon
By
Adminಮಲ್ಪೆ: ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸ್ಥಳೀಯರ ಸಹಕಾರದಲ್ಲಿ ರಾಜ್ಯದಲ್ಲೇ ಪ್ರಥಮ ಎಂಬಂತೆ ಮಲ್ಪೆ ಬೀಚ್‌ನಲ್ಲಿ ತೇಲುವ ಸೇತುವೆ ನಿರ್ಮಾಣವಾಗಿದೆ. ಇದು ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಲಿದ್ದು ಮಲ್ಪೆ ಬೀಚ್‌ಗೆ ಮತ್ತೊಂದು ಗರಿಯಾಗಲಿದೆ.
ಇನ್ನು ಮುಂದೆ ಬೀಚ್‌ಗೆ ಭೇಟಿ ನೀಡುವ ಪ್ರವಾಸಿಗರು ಅಲೆಗಳ ಮೇಲೆ ನಡೆಯುವ ಅನುಭವವನ್ನು ಆನಂದಿಸಬಹುದು. ಸಾಹಸ ಕ್ರೀಡೆ ಇಷ್ಟಪಡುವವರಿಗೆ ಇದು ಅಚ್ಚುಮೆಚ್ಚು.
ಕೇರಳದ ಬೇಪೋರ್ ಬೀಚ್ ನಲ್ಲಿ ಬಿಟ್ಟರೆ ಕರ್ನಾಟಕದ ಕೆಲವೊಂದು ಕಡೆ ಹಿನ್ನೀರಿನಲ್ಲಿ ಮಾತ್ರ ಕಂಡುಬಂದಿದೆ ಎನ್ನಲಾಗಿದೆ.
ಸೇತುವೆಯು 100 ಮೀಟರ್ ಉದ್ದ ಮತ್ತು 3.5 ಮೀಟರ್ ಅಗಲವನ್ನು ಹೊಂದಿದ್ದು, ಹೆಚ್ಚಿನ ಸಾಂದ್ರತೆಯ ಪೊಂಟೋನ್ಸ್ ಬ್ಲಾಕ್ ಗಳಿಂದ ಮಾಡಲ್ಪಟ್ಟಿದೆ. ಇದರಲ್ಲಿ ಒಂದು ಬಾರಿಗೆ 100 ಜನರು ಸಾಗಬಹುದು.
ಸೇತುವೆಯ ಕೊನೆಯಲ್ಲಿ ಸಮುದ್ರಕ್ಕೆ ಚಾಚಿರುವ 12 ಮೀಟರ್ ಉದ್ದ 7.5 ಮೀಟರ್ ಅಗಲದ ವೇದಿಕೆ ಇದೆ. ಇದರಲ್ಲಿ 15 ನಿಮಿಷ ಕಾಲ ಕಳೆಯಲು ಅವಕಾಶ ಕಲ್ಪಿಸಲಾಗುತ್ತದೆ.
ಸೇತುವೆ ಇಕ್ಕೆಲಗಳಲ್ಲಿ 10 ಮಂದಿ ಲೈಫ್ ಗಾರ್ಡ್ ಇರುತ್ತಾರೆ. ಸ್ಥಳೀಯರು ಈ ತೇಲುವ ಸೇತುವೆಯನ್ನು ಸ್ಥಾಪಿಸಿದ್ದಾರೆ.
ಸೇತುವೆಯು ಸಮುದ್ರದ ಅಲೆಗಳ ಉಬ್ಬರಕ್ಕೆ ಮೇಲೇರಿ ಕೆಳಗಿಳಿಯುವ ಹೊಸ ಅನುಭವವನ್ನು ಇನ್ನು ಮುಮದೆ ನಮ್ಮದಾಗಿಸಬಹುದು.
Baindooru
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Published
7 hours agoon
22/11/2024By
NEWS DESK4ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಉಡುಪಿಯ ಅಂಬಾಗಿಲು – ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಘಟನೆಯ ಸಂದರ್ಭ ಸ್ಥಳದಲ್ಲಿ ಯಾವುದೇ ವಾಹನ ಇರದೇ ಇದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ತೆರಳುತ್ತಿತ್ತು.
ಇದನ್ನೂ ಓದಿ : ಶೀಘ್ರದಲ್ಲೇ ಉಬರ್‌ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
ಪೆರಂಪಳ್ಳಿಗೆ ತೆರಳುವ ಕ್ರಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾಗಿ ಬಿದ್ದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Baindooru
ಕೊಲ್ಲೂರು ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ
Published
1 day agoon
21/11/2024By
NEWS DESK3ಮಂಗಳೂರು/ಉಡುಪಿ: ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಳಿಗ್ಗೆ ಉಡುಪಿ ಜಿಲ್ಲೆಗೆ ಆಗಮಿಸಿದ್ದಾರೆ. ಬೈಂದೂರು ಸಮೀಪದ ಅರೆ ಶಿರೂರಿನ ಹೆಲಿಪ್ಯಾಡ್ ನಲ್ಲಿ ಇಳಿದ ಅವರು, ನಂತರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಉಡುಪಿ ಜಿಲ್ಲೆಗೆ ಆಗಮಿಸಿದ ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ , ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಾಳು ವೈದ್ಯ, ಶಾಸಕ ಗೋಪಾಲ ಪೂಜಾರಿ ಹಾಗೂ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಸ್ವಾಗತಿಸಿದರು.
ಇದನ್ನು ಓದಿ: ಪ್ರಧಾನಿ ಮೋದಿಗೆ ಗಯಾನಾ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ
ಇತ್ತೀಚೆಗೆ ಭಾರಿ ಮಹತ್ವ ಪಡೆದುಕೊಂಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳ ಗೆಲುವು ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿರುವ ಹಿನ್ನಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಕೊಲ್ಲೂರು ಮೂಕಾಂಬಿಕಾ ಭೇಟಿ ಮಹತ್ವ ಪಡೆದುಕೊಂಡಿದ್ದು, ಅವರು ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ವಿಜಯಕ್ಕಾಗಿ ಪ್ರಾರ್ಥನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
LATEST NEWS
ಪ್ರಸಿದ್ಧ ಯಕ್ಷಗಾನ ಕಲಾವಿದ, ಭಾಗವತ ಇ*ನ್ನಿಲ್ಲ; ಕಮಲಾಕ್ಷ ಪ್ರಭು ನಿ*ಧನ
Published
4 days agoon
18/11/2024ಉಡುಪಿ: ಪ್ರಸಿದ್ಧ ಯಕ್ಷಗಾನ ಕಲಾವಿದ, ಭಾಗವತ ಮುಂಡ್ಕಿನಜೆಡ್ಡು ಕಮಲಾಕ್ಷ ಪ್ರಭು (58) ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಂದು (ನ.18) ನಿ*ಧನರಾಗಿದ್ದಾರೆ.
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿಯೇ ನೇತ್ರ ಶಸ್ತ್ರಚಿಕಿತ್ಸಾ ಕೊಠಡಿಯ ತಂತ್ರಜ್ಞರಾಗಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅಲ್ಪಕಾಲದ ಅಸೌಖ್ಯದಿಂದ ಸಾ*ವನ್ನಪ್ಪಿದ್ದಾರೆ.
ಯಕ್ಷಗಾನ ಕಲಾ ಕ್ಷೇತ್ರಕ್ಕೆ ಅಪೂರ್ವ ಸೇವೆ ಸಲ್ಲಿಸಿರುವ ಕಮಲಾಕ್ಷ ಪ್ರಭು ಸಹಸ್ರಾರು ಮಂದಿ ಯಕ್ಷಗಾನ ಕಲಾವಿದರ ಹುಟ್ಟಿಗೆ ಕಾರಣರಾಗಿದ್ದಾರೆ. ಬಡಗುತಿಟ್ಟಿನ ಯಕ್ಷಗಾನ ಕಲೆಯ ಉಳಿವು-ಬೆಳವಣಿಗೆಯಲ್ಲಿ ಪ್ರಮುಖರಾಗಿದ್ದ ಪ್ರಭು 90 ರ ದಶಕದಲ್ಲಿ ಮಣಿಪಾಲದ ಸರಳೇಬೆಟ್ಟುವಿನಲ್ಲಿ ಬಾಲಮಿತ್ರ ಯಕ್ಷ-ಶಿಕ್ಷಣ ಪ್ರತಿಷ್ಠಾನವನ್ನು ಸ್ಥಾಪಿಸಿ ಎಳೆಯ ಪ್ರತಿಭೆಗಳಿಗೆ ನಿರಂತರ ಉಚಿತ ಯಕ್ಷಗಾನ ತರಬೇತಿಯನ್ನು ನೀಡುತ್ತಿದ್ದರು. ‘ಬಾಲಮಿತ್ರ ಯಕ್ಷಗಾನ ಮಂಡಳಿ’ ಯು ದೇಶ ಮಾತ್ರವಲ್ಲದೆ ದುಬೈ, ಸಿಂಗಾಪುರ, ಆಫ್ರಿಕಾ ಸೇರಿ ವಿಶ್ವದ ವಿವಿದೆಡೆ ಪ್ರದರ್ಶನ ನೀಡಿದೆ.
ಗ್ರಾಮೀಣ ಪ್ರದೇಶಕ್ಕೆ ಸೀಮಿತವಾಗಿದ್ದ ‘ಮನೆ ಮನೆಗೆ ತೆರಳಿ ಯಕ್ಷಗಾನ’ ಪ್ರದರ್ಶನ ನೀಡುವ ‘ಹೂವಿನ ಕೋಲು’ ಪ್ರಾಕಾರವನ್ನು ನಗರ ಪ್ರದೇಶಕ್ಕೂ ತಲಪಿಸುವ ಸತ್ಕಾರ್ಯ ಮಾಡಿದ್ದರು.
ಮೃ*ತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ